ಹಿರಿಯಡ್ಕ: ವಿಶ್ರಾಂತಿ ಕೊಠಡಿಗೆ ಶಿಲಾನ್ಯಾಸ

ಹಿರಿಯಡ್ಕ, ಜ.2: ಇಲ್ಲಿನ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ 12 ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ವಿದ್ಯಾರ್ಥಿನಿಯರ ವಿಶ್ರಾಂತಿ ಕೊಠಡಿ ಕಾಮಗಾರಿಗೆ ಶಂಕುಸ್ಥಾಪನೆಯನ್ನು ಕಾಪು ಶಾಸಕರೂ, ಕಾಲೇಜು ಅಭಿವೃದ್ಧಿ ಸಮಿತಿ ಅಧ್ಯಕ್ಷರೂ ಆದ ವಿನಯ ಕುಮಾರ ಸೊರಕೆ ಇತ್ತೀಚೆಗೆ ನೆರವೇರಿಸಿದರು.
ನಂತರ ಮಾತನಾಡಿದ ಅವರು ನಿಗದಿತ ಕಾಲಮಿತಿಯೊಳಗೆ ಕಾಮಗಾರಿ ಯನ್ನು ಪೂರ್ಣಗೊಳಿಸುವಂತೆ ಇಂಜಿನಿಯರ್‌ಗಳಿಗೆ ಸೂಚಿಸಿದರು. ಕಾಲೇಜು ನ್ಯಾಕ್ ಸಮಿತಿಯಿಂದ ಬಿ ಶ್ರೇಣಿ ಮಾನ್ಯತೆ ಪಡೆದಿರುವುದಕ್ಕೆ ಮೆಚ್ಚುಗೆ ಸೂಚಿಸಿದು.
ನಂತರ ಮಾತನಾಡಿದ ಅವರು ನಿಗದಿತ ಕಾಲಮಿತಿಯೊಳಗೆ ಕಾಮಗಾರಿ ಯನ್ನು ಪೂರ್ಣಗೊಳಿಸುವಂತೆ ಇಂಜಿನಿಯರ್‌ಗಳಿಗೆ ಸೂಚಿಸಿದರು. ಕಾಲೇಜು ನ್ಯಾಕ್ ಸಮಿತಿಯಿಂದ ಬಿ ಶ್ರೇಣಿ ಮಾನ್ಯತೆ ಪಡೆದಿರುವುದಕ್ಕೆ ಮೆಚ್ಚುಗೆ ಸೂಚಿಸಿದರು. ಈ ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲ್ ಪ್ರೊ.ಜಿ.ಆರ್. ರಾಯ್ಕರ್ ಉಪಸ್ಥಿತರಿದ್ದರು. ಜಿಪಂ ಇಂಜಿನಿಯರಿಂಗ್ ವಿಭಾಗದ ಅಧಿಕಾರಿಗಳು, ಕಾಲೇಜಿನ ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗಳು, ವಿದ್ಯಾರ್ಥಿಗಳು ಭಾಗವಹಿಸಿದ್ದರು.





