ಕಾರ್ಕಳ : ಮನೆಗೆ ನುಗ್ಗಿ ಚಿನ್ನಾಭರಣ ಕಳವು
ಕಾರ್ಕಳ, ಜ.2: ಮನೆಗೆ ನುಗ್ಗಿದ ಕಳ್ಳರು ಲಕ್ಷಾಂತರ ರೂ. ಮೌಲ್ಯದ ಚಿನ್ನಾ ಭರಣಗಳನ್ನು ಕಳವು ಮಾಡಿರುವ ಘಟನೆ ಡಿ.5ರಿಂದ ಡಿ.11ರ ಮಧ್ಯಾವಧಿಯಲ್ಲಿ ನಿಟ್ಟೆ ಗ್ರಾಮದ ಹಾಳೆಕಟ್ಟೆ ಎಂಬಲ್ಲಿ ನಡೆದಿದೆ.
ಹಾಳೆಕಟ್ಟೆಯ ವಿಠಲರಾಯ ಕುಡ್ವ ಮತ್ತು ಅವರ ಪತ್ನಿ ಮನೆಯ ಬಾಗಿಲಿಗೆ ಹೊರಗಿನಿಂದ ಚಿಲಕ ಸಿಕ್ಕಿಸಿ ತೋಟಕ್ಕೆ ಹೋಗಿದ್ದ ವೇಳೆ ಮನೆಗೆ ನುಗ್ಗಿದ ಕಳ್ಳರು ಕೋಣೆಯ ಹಾಸಿಗೆಯ ತಲೆದಿಂಬಿನ ಅಡಿಯಲ್ಲಿ ಇಟ್ಟಿದ್ದ 12 ಪವನ್ ತೂಕದ ಚಿನ್ನಾಭರಣಗಳನ್ನು ಕಳವು ಮಾಡಿದ್ದಾರೆ. ಇವುಗಳ ಒಟ್ಟು ಮೌಲ್ಯ 3,88,000 ರೂ. ಎಂದು ಅಂದಾಜಿಸಲಾಗಿದೆ. ಈ ಬಗ್ಗೆ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story





