ಕಾಂಗ್ರೆಸ್‍ಗೆ ತಾಕತ್ತಿದ್ದರೆ ಮುಸ್ಲಿಂ ಮುಖಂಡರ ಮೇಲೆ ಮಾನನಷ್ಟ ಮೊಕದ್ದಮೆ ದಾಖಲಿಸಲಿ: ಝಕಾರಿಯಾ ಸವಾಲು

ಮೂಡಿಗೆರೆ, ಜ.3: ರಾಜ್ಯದಲ್ಲಿ ಕಾಂಗ್ರೆಸ್‍ನ ದುರಾಡಳಿತವನ್ನು ಅಲ್ಪಸಂಖ್ಯಾತರು ವಿರೋಧಿಸಿ, ಮುಂದಿನ ಚುನಾವಣೆ ವೇಳೆ ಶೇ.80ರಷ್ಟು ಅಲ್ಪಸಂಖ್ಯಾತರು ಜೆಡಿಎಸ್ ಪರ ನಿಲ್ಲಲಿದ್ದಾರೆ ಎಂದು ತಾಲೂಕು ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಝಕಾರಿಯಾ ಜಾಕೀರ್ ತಿಳಿಸಿದರು.
ಅವರು ಪಟ್ಟಣದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಕಳೆದ 70 ವರ್ಷದಿಂದ ಅಲ್ಪಸಂಖ್ಯಾತರಿಗೆ ಕಾಂಗ್ರೆಸ್ ಪಕ್ಷ ಯಾವುದೇ ಸ್ಥಾನಮಾನ ನೀಡದೇ ಕೇವಲ ಚುನಾವಣೆಗೋಸ್ಕರ ಮುಸ್ಲಿಮರ ಪರ ಭಾಷಣ ಮಾಡಿ ವಂಚಿಸುತ್ತಿದ್ದು, ಈ ಬಾರಿಯ ಚುನಾವಣೆಯಲ್ಲಿ ಮುಸ್ಲಿಮರು ತಕ್ಕ ಉತ್ತರ ನೀಡಲು ಮುಂದಾಗಿದ್ದಾರೆ. ಈ ಕ್ಷೇತ್ರದಲ್ಲಿ ಬಿ.ಬಿ.ನಿಂಗಯ್ಯ ಶಾಸಕರಾದ ನಂತರ ಪ್ರಾರ್ಥನಾ ಮಂದಿರಗಳಿಗೆ 2 ಕೋಟಿ ಅನುದಾನ ನೀಡಿದ್ದಾರೆ. ಆದರೆ ಇದುವರೆಗೆ ಆಡಳಿತ ನಡೆಸಿದ ಕಾಂಗ್ರೆಸ್ ಮುಸ್ಲಿಮರಿಗೆ ಯಾವ ಕೊಡಗೆ ನೀಡಿದ್ದಾರೆಂಬುದನ್ನು ಬಹಿರಂಗಪಡಿಲಿ ಎಂದು ಸವಾಲು ಹಾಕಿದರು.
ಕ್ರೇತ್ರದಲ್ಲಿ ಕಾಂಗ್ರೆಸ್‍ನಲ್ಲಿ ಗುರುತಿಸಿಕೊಂಡಿದ್ದ ಹಿರಿಯ ಅಲ್ಪಸಂಖ್ಯಾತ ಮುಖಂಡರು ಕಾಂಗ್ರೆಸ್ ತೊರೆದು ಜೆಡಿಎಸ್‍ಗೆ ಸೇರ್ಪಡೆಯಾಗಿರುವುದು ಕಾಂಗ್ರೆಸ್‍ನವರಿಗೆ ಭಯ ಹುಟ್ಟಿಸಿದೆ. ಹಾಗಾಗಿ ಜೆಡಿಎಸ್ ಕಾರ್ಯಕರ್ತರನ್ನು ಕರೆಸಿಕೊಂಡು ಕಾಂಗ್ರೆಸ್‍ಗೆ ಸೇರ್ಪಡೆಗೊಳಿಸುತ್ತಿದ್ದಾರೆಂದು ಪತ್ರಿಕೆಗಳಿಗೆ ಮಾಹಿತಿ ನೀಡುತ್ತಿದ್ದಾರೆ. ಇದು ಅವರಿಗೆ ಶೋಭೆ ತರುವುದಿಲ್ಲ. ಕೆಲ ಕಾಂಗ್ರೆಸ್‍ನ ಅನಕ್ಷರಸ್ಥ ಚೇಲಾಗಳು ಜೆಡಿಎಸ್ ಮುಖಂಡರ ಮೇಲೆ ಮಾನ ನಷ್ಟ ಮೊಕದ್ದಮೆ ಹೂಡುವುದಾಗಿ ಪತ್ರಿಕಾ ಹೇಳಿಕೆ ನೀಡುವ ಮೂಲಕ ಬೆದರಿಕೆ ಹಾಕುತ್ತಿದ್ದು, ತಾಕತ್ತಿದ್ದರೆ ಮಾನನಷ್ಟ ಮೊಕದ್ದಮೆ ದಾಖಲಿಸಿ ತೋರಿಸಲಿ ಎಂದು ಸವಾಲು ಹಾಕಿದರು.
ಜೆಡಿಎಸ್ ಯುವ ಘಟಕದ ಸಂಚಾಲಕ ಮಹಮ್ಮದ್ ಶಬ್ಬೀರ್ ಮಾತನಾಡಿ, ನಾನು ಇತ್ತೀಚೆಗೆ ಜಮೀನು ವಿಚಾರವಾಗಿ ಎಂಎಲ್‍ಸಿ ಮೋಟಮ್ಮರ ಮನೆಗೆ ತೆರಳಿದ್ದೆ. ನಾನು ಜಮೀನು ವಿಚಾರವಾಗಿ ಮಾತನಾಡುವ ಸಂದರ್ಭದಲ್ಲಿ ಅಲ್ಲಿದ್ದ ಕೆಲ ಕಾಂಗ್ರೆಸ್ ಮುಖಂಡರು ‘ನೀನು ಜೆಡಿಎಸ್‍ನಲ್ಲಿ ಇರಬೇಡ. ಕಾಂಗ್ರೆಸ್‍ಗೆ ಬಾ ಎಂದು ನನಗೆ ಹೂವಿನ ಹಾರ ಹಾಕಿ ಫೋಟೊ ತೆಗೆಸಿ ಸಾಮಾಜಿಕ ಜಾಲಾ ತಾಣದಲ್ಲಿ ನಾನು ಕಾಂಗ್ರೆಸ್ ಸೇರ್ಪಡೆಗೊಂಡಿದ್ದೇನೆಂದು ಸುಳ್ಳು ಸುದ್ದಿ ಹರಿಸಿದ್ದಾರೆ. ನಾನು 5 ವರ್ಷಗಳಿಂದ ಜೆಡಿಎಸ್‍ನಲ್ಲಿ ಗುರುತಿಸಿಕೊಂಡಿದ್ದೇನೆ. ಹಿಂದೆ ಕಾಂಗ್ರೆಸ್‍ನಲ್ಲಿದಿದ್ದು ನಿಜ. ಆದರೆ ನಾನು ಕಾಂಗ್ರೆಸ್‍ಗೆ ಸೇರ್ಪಡೆಗೊಂಡಿಲ್ಲ. ಜೆಡಿಎಸ್‍ನಲ್ಲಿಯೆ ಪಕ್ಷಕ್ಕಾಗಿ ದುಡಿಯುತ್ತಾ ಪ್ರಾಮಾಣಿಕ ಕಾರ್ಯಕರ್ತನಾಗಿ ಮುಂದುವರೆಯುತ್ತೇನೆ’ ಎಂದು ಸ್ಪಷ್ಟಪಡಿಸಿದರು.
ಕ್ಷೇತ್ರ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷ ಶಬ್ಬೀರ್ ಅಹಮ್ಮದ್ ಬೇಗ್, ಜಿಲ್ಲಾ ಸಂಘಟನಾ ಕಾರ್ಯದರ್ಶಿ ವಾಜೀದ್ ಹುಸೇನ್, ಮುಖಂಡರಾದ ನಾಸೀರ್, ನದೀಮ್ ಬಾಪುನಗರ, ಮಹಮದ್ ಅಣಜೂರು, ರಿಜ್ವಾನ್, ಆಸೀಫ್ ಹೆಚ್.ಬಾಪುನಗರ ಉಪಸ್ಥಿತರಿದ್ದರು







