Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಬೆಂಗಳೂರು: ಅರಕಲಗೂಡಿನಲ್ಲಿ ಜ.4 ರಿಂದ...

ಬೆಂಗಳೂರು: ಅರಕಲಗೂಡಿನಲ್ಲಿ ಜ.4 ರಿಂದ ಪಶುಮೇಳ

ವಾರ್ತಾಭಾರತಿವಾರ್ತಾಭಾರತಿ3 Jan 2018 6:39 PM IST
share

ಬೆಂಗಳೂರು, ಜ.3: ಪಶುಪಾಲನೆ, ವೈದ್ಯಕೀಯ ಇಲಾಖೆ ಜ.4 ರಿಂದ ಎರಡು ದಿನಗಳ ಕಾಲ ಹಾಸನ ಜಿಲ್ಲೆಯ ಅರಕಲಗೂಡು ತಾಲೂಕು ಕ್ರೀಡಾಂಗಣದಲ್ಲಿ ಪಶುಮೇಳ ಆಯೋಜಿಸಲಾಗಿದೆ.

ಬುಧವಾರ ನಗರದ ಪ್ರೆಸ್‌ಕ್ಲಬ್‌ನಲ್ಲಿ ಹಮ್ಮಿಕೊಂಡಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಪಶುಪಾಲನೆ, ವೈದ್ಯಕೀಯ ಇಲಾಖೆ ನಿರ್ದೇಶಕ ಮಂಜುನಾಥ್, ಮುಖ್ಯಮಂತ್ರಿ ಸಿದ್ದರಾಮಯ್ಯ, ಮಾಜಿ ಪ್ರಧಾನಿ ದೇವೇಗೌಡ ಪಶು ಮೇಳಕ್ಕೆ ಚಾಲನೆ ನೀಡಲಿದ್ದಾರೆ. ಪಶು ಸಂಗೋಪನೆ ಸಚಿವ ಎ.ಮಂಜು ಅಧ್ಯಕ್ಷತೆ ವಹಿಸಲಿದ್ದು, ಗಣಿ ಇಲಾಖೆ ಸಚಿವ ವಿನಯ್ ಕುಲಕರ್ಣಿ, ವಿಧಾನ ಪರಿಷತ್ ಉಪ ಸಭಾಪತಿ ಮರಿತಿಬ್ಬೇಗೌಡ, ಹಾಸನ ಜಿ.ಪಂ.ಅಧ್ಯಕ್ಷೆ ಶ್ವೇತಾ ದೇವರಾಜ್ ಸೇರಿ ಪ್ರಮುಖರು ಪಾಲ್ಗೊಳ್ಳಲಿದ್ದಾರೆ ಎಂದು ಮಾಹಿತಿ ನೀಡಿದರು.

ರೈತರಿಗೆ ವಿವಿಧ ಜಾನುವಾರು ತಳಿಗಳ ಪರಿಚಯ ಹಾಗೂ ನಿರ್ವಹಣೆ ಬಗ್ಗೆ ವೈಜ್ಞಾನಿಕ ಮಾಹಿತಿ ನೀಡುವ ಉದ್ದೇಶದಿಂದ ಪಶುಮೇಳ ಆಯೋಜಿಸಲಾಗಿದೆ. ಮೇಳದಲ್ಲಿ ನಿರುದ್ಯೋಗಿ ಯುವಕ, ಯುವತಿಯರು ಪಶು ಸಂಗೋಪನೆಯಲ್ಲಿ ತೊಡಗಿಸಿಕೊಳ್ಳಲು ಅನುಕೂಲವಾಗುವಂತೆ, ಒಂದೇ ಸೂರಿನಡಿ ಇಲಾಖೆಯ ಯೋಜನೆಗಳ ಮಾಹಿತಿ ನೀಡಲಾಗುವುದು. ಪಶು ಸಂಗೋಪನೆಯಲ್ಲಿ ಸಾಧನೆಗೈದ ರೈತರ ಜತೆ ವಿಚಾರಗೋಷ್ಠಿಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ಹೇಳಿದರು.

ಕೋಳಿ ತಳಿ, ರೇಷ್ಮೆಹುಳು ಸಾಕಾಣಿಕೆ ಕುರಿತಂತೆ ತಾಂತ್ರಿಕ ಮಾಹಿತಿ, ಕಿರುಚಿತ್ರ ಪ್ರದರ್ಶನದ ಮೂಲಕ ನೂತನ ಆವಿಷ್ಕಾರಗಳ ಬಗ್ಗೆ ರೈತರಿಗೆ ಮಾಹಿತಿ ನೀಡಲಾಗುವುದು. ದೇಶಿಯ ಜಾನುವಾರು 9 ತಳಿ, ವಿದೇಶಿ ಜಾನುವಾರು 2, 9 ಕುರಿ, 5 ಮೇಕೆ, 4 ಎಮ್ಮೆ ತಳಿ, 4 ಹಂದಿ, 5 ದೇಶೀಯ ಕೋಳಿ, ಬಾತುಕೋಳಿ ಸೇರಿದಂತೆ 4 ಮೊಲದ ತಳಿಗಳನ್ನು ಪ್ರದರ್ಶನದಲ್ಲಿಟ್ಟು ಮಾಹಿತಿ ನೀಡಲಾಗುವುದೆಂದು ವಿವರಿಸಿದರು.

ಮೇಳದಲ್ಲಿ ಹಾಲು ಕರೆಯುವ ಸ್ಪರ್ಧೆ ಏರ್ಪಡಿಸಿದ್ದು, ವಿಜೇತ ಹಸುವಿನ ಮಾಲಕರಿಗೆ 1 ಲಕ್ಷ ರೂ. ನಗದು ಬಹುಮಾನ ನೀಡಲಾಗುತ್ತದೆ. ಹಸುಗಳ ತಳಿಗಳ ಆಧಾರದ ಮೇಲೆ ಪ್ರಥಮ, ದ್ವಿತೀಯ ಮತ್ತು ತೃತೀಯ ಬಹುಮಾನವಾಗಿ, 50 ಸಾವಿರ, 30 ಸಾವಿರ ಹಾಗೂ 20 ಸಾವಿರ ನಗದು ಬಹುಮಾನ ನೀಡಲಾಗುವುದೆಂದರು. ಪ್ರದರ್ಶನದಲ್ಲಿ ಪಾಲ್ಗೊಳ್ಳುವ ಜಾನುವಾರುಗಳಿಗೆ ಕರ್ನಾಟಕ ಹಾಲು ಮಹಾ ಮಂಡಳಿಯಿಂದ 10 ಕೆ.ಜಿ ಉಚಿತ ಆಹಾರ ನೀಡಲಾಗುವುದು. ಪ್ರದರ್ಶನಕ್ಕೆ ಭೇಟಿ ನೀಡುವ ಸಾರ್ವಜನಿಕರಿಗೆ ಎನ್‌ಇಸಿಪಿಪಿ ವತಿಯಿಂದ ಬೇಯಿಸಿದ ಮೊಟ್ಟೆ, ಹಾಲು, ಮಜ್ಜಿಗೆಯನ್ನು ಉಚಿತವಾಗಿ ವಿತರಿಸಲಾಗುವುದೆಂದು ಹೇಳಿದರು. ಪಶು ಅಭಿವೃದ್ಧಿ ಇಲಾಖೆ ಹಾಗೂ ಖಾಸಗಿ ಕಂಪನಿಗಳ ಸಹಯೋಗದಲ್ಲಿ 200 ಮಳಿಗೆಗಳನ್ನು ತೆರೆಯಲಾಗುವುದೆಂದು ಮಂಜುನಾಥ್ ಮಾಹಿತಿ ನೀಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X