Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಮೋದಿ ಮಧ್ಯಸ್ಥಿಕೆಗೆ ಆಗ್ರಹ: ಕನ್ನಡಪರ...

ಮೋದಿ ಮಧ್ಯಸ್ಥಿಕೆಗೆ ಆಗ್ರಹ: ಕನ್ನಡಪರ ಹೋರಾಟಗಾರರ ಬಂಧನ, ಬಿಡುಗಡೆ

ವಾರ್ತಾಭಾರತಿವಾರ್ತಾಭಾರತಿ3 Jan 2018 7:39 PM IST
share

ಬೆಂಗಳೂರು, ಜ.3: ಮಹಾದಾಯಿ, ಕಳಸಾ ಬಂಡೂರಿ ವಿವಾದವನ್ನು ಬಗೆಹರಿಸಲು ಪ್ರಧಾನಿ ನರೇಂದ್ರ ಮೋದಿ ಮಧ್ಯಸ್ಥಿಕೆ ವಹಿಸಬೇಕೆಂದು ಆಗ್ರಹಿಸಿ ಕನ್ನಡ ಒಕ್ಕೂಟದ ವತಿಯಿಂದ ನಗರದ ನೆಲಮಂಗಲ ಟೋಲ್ ಬಳಿ ಹೆದ್ದಾರಿ ಬಂದ್ ಮಾಡಿ ಪ್ರತಿಭಟನೆ ನಡೆಸಲಾಯಿತು.

ಬುಧವಾರ ನಗರದ ಹೊರವಲಯದ ನೆಲಮಂಗಲದ ಟೋಲ್ ಬಳಿ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ನಡೆಸಿದ ಕನ್ನಡಪರ ಸಂಘಟನೆಯ ಮುಖಂಡರು, ಗೋವಾ-ಮಹಾರಾಷ್ಟ್ರ ಹಾಗೂ ಕರ್ನಾಟಕ ರಾಜ್ಯಗಳ ನಡುವೆ ಉದ್ಭವಿಸಿರುವ ಮಹಾದಾಯಿ ನದಿ ನೀರು ಹಂಚಿಕೆ ವಿವಾದದಿಂದ ಉತ್ತರ ಕರ್ನಾಟಕದ ಜನರ ಕುಡಿಯುವ ನೀರಿನ ಸಮಸ್ಯೆ ಬಗೆಹರಿಯದಂತಾಗಿದೆ. ಇದನ್ನು ಕೂಡಲೇ ಪ್ರಧಾನಿ ನೇತೃತ್ವದಲ್ಲಿ ಪರಿಹರಿಸಿ ನೀರು ಹಂಚಿಕೆಗೆ ಅನುವು ಮಾಡಿಕೊಡಬೇಕೆಂದು ಒತ್ತಾಯಿಸಿದರು.

ರಸ್ತೆಯಲ್ಲಿ ಜಮಾಯಿಸಿದ ನೂರಾರು ಮಂದಿ ಕೇಂದ್ರ ಸರಕಾರದ ನಿರ್ಲಕ್ಷ್ಯ ಧೋರಣೆಯಿಂದ ಆಕ್ರೋಶ ವ್ಯಕ್ತಪಡಿಸಿ, ಕುಡಿಯುವ ನೀರು ಎಲ್ಲರ ಮೂಲಭೂತ ಹಕ್ಕು, ಇಂತಹ ಸಮಸ್ಯೆ ಉಭಯ ರಾಜ್ಯಗಳ ನಡುವೆ ಭುಗಿಲೆದ್ದಾಗ ಸಂಧಾನ ಮಾತುಕತೆ ಮೂಲಕ ಬಗೆಹರಿಸಬೇಕು. ಆದರೆ, ಪ್ರಧಾನಮಂತ್ರಿಗಳು ಇದುವರೆಗೂ ಈ ವಿಚಾರದಲ್ಲಿ ಮಧ್ಯಸ್ಥಿಕೆ ವಹಿಸಲು ಮುಂದಾಗಿಲ್ಲ ಎಂದು ಪ್ರತಿಭಟನಾಕಾರರು ಆರೋಪಿಸಿದರು.

ವಿವಿಧ ಹೆದ್ದಾರಿಗಳ ಬಂದ್: ಬುಧವಾರ ಬೆಳಗಾವಿಯಿಂದ ಬೆಂಗಳೂರಿನವರೆಗಿನ ಹುಬ್ಬಳ್ಳಿ, ಧಾರವಾಡ, ಹಾವೇರಿ, ದಾವಣಗೆರೆ, ಚಿತ್ರದುರ್ಗ, ತುಮಕೂರು ಸೇರಿದಂತೆ ಇತರೆ ನಗರಗಳಲ್ಲೂ ನಗರ ಹೆದ್ದಾರಿಗಳನ್ನು ಬಂದ್ ಮಾಡಿ ಕನ್ನಡ ಪರ ಸಂಘಟನೆಗಳ ಕಾರ್ಯಕರ್ತರು ಕನ್ನಡ ಒಕ್ಕೂಟದ ನೇತೃತ್ವದಲ್ಲಿ ಪ್ರತಿಭಟಿಸಿ ಮಹಾದಾಯಿ ನದಿ ನೀರು ಹಂಚಿಕೆ ವಿವಾದ ಶೀಘ್ರ ಬಗೆಹರಿಸುವಂತೆ ಆಗ್ರಹಿಸಿದರು.

ಈ ಸಂಬಂಧ ಪ್ರಧಾನಮಂತ್ರಿಗಳು ಕಾಳಜಿ ವಹಿಸಿ ಮೂರೂ ರಾಜ್ಯಗಳ ಹಿತ ಕಾಪಾಡಬೇಕು. ಅದಕ್ಕಾಗಿ ಮೂರೂ ರಾಜ್ಯಗಳ ಮುಖ್ಯಮಂತ್ರಿಗಳ ಸಭೆ ಕರೆಯುವುದು ಸೇರಿದಂತೆ ಇನ್ನಿತರ ಮಾರ್ಗಗಳ ಮೂಲಕ ಸಮಸ್ಯೆ ಇತ್ಯರ್ಥಕ್ಕೆ ಮುಂದಾಗಬೇಕೆಂದು ಒತ್ತಾಯಿಸಿದರು.

ಬಂಧನ: ಕನ್ನಡ ಒಕ್ಕೂಟ ಅಧ್ಯಕ್ಷ ವಾಟಾಳ್ ನಾಗರಾಜ್, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಸಾ.ರಾ.ಗೋವಿಂದು, ಕನ್ನಡ ಸೇನೆ ಕುಮಾರ್, ಕರವೇ ಪ್ರವೀಣ್ ಶೆಟ್ಟಿ ಸೇರಿ ಪ್ರಮುಖರು ಪ್ರತಿಭಟನೆಯಲ್ಲಿ ನೆಲಮಂಗಲದ ಟೋಲ್ ಮುಚ್ಚಲು ಮುಂದಾದ ವೇಳೆ ಪೊಲೀಸರು ಅವರನ್ನು ಬಂಧಿಸಿ, ಕೆಲ ಸಮಯದ ಬಳಿಕ ಬಿಡುಗಡೆಗೊಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X