Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಕಾರವಾರ: ಜ.6-7ರಂದು ಅಂತಾರಾಷ್ಟ್ರೀಯ...

ಕಾರವಾರ: ಜ.6-7ರಂದು ಅಂತಾರಾಷ್ಟ್ರೀಯ ಮಟ್ಟದ ಸ್ಕೂಬಾ ಡೈವಿಂಗ್

ವಾರ್ತಾಭಾರತಿವಾರ್ತಾಭಾರತಿ3 Jan 2018 8:07 PM IST
share
ಕಾರವಾರ: ಜ.6-7ರಂದು ಅಂತಾರಾಷ್ಟ್ರೀಯ ಮಟ್ಟದ ಸ್ಕೂಬಾ ಡೈವಿಂಗ್

ಕಾರವಾರ, ಜ.3: ಭಟ್ಕಳ ತಾಲೂಕಿನ ಮುರ್ಡೇಶ್ವರದ ನೇತ್ರಾಣಿ ದ್ವೀಪದಲ್ಲಿ ಜನವರಿ 6 ಮತ್ತು 7ರಂದು ಅಂತಾರಾಷ್ಟ್ರೀಯ ಸ್ಕೂಬಾ ಡೈವಿಂಗ್ ಉತ್ಸವವನ್ನು ಮೊದಲ ಬಾರಿಗೆ ಜಿಲ್ಲಾಡಳಿತದಿಂದ ಆಯೋಜಿಸಲಾಗಿದ್ದು, ಸಮುದ್ರದಾಳದ ವಿಸ್ಮಯ ಲೋಕದ ವಿಕ್ಷಣೆಗೆ ಅವಕಾಶ ಲಭ್ಯವಾಗಲಿದೆ.

ನೀಲಿ ಸಮುದ್ರದಿಂದ ಸುತ್ತುವರೆದಿರುವ ನೇತ್ರಾಣಿ ದ್ವೀಪ ತನ್ನ ಒಡಲಲ್ಲಿ ಅದ್ಭುತ ಜಗತ್ತನ್ನೇ ಇರಿಸಿಕೊಂಡಿದೆ. ಸ್ಪಷ್ಟವಾಗಿ ಕಾಣುವ ನೀರಿನಾಳದಲ್ಲಿನ ಹವಳ ದಿಬ್ಬಗಳು, ಅಪರೂಪದ ಜೀವವೈವಿಧ್ಯ, ಸ್ಕೂಬಾ ಡೈವಿಂಗ್ ಚಟುವಟಿಕೆಗೆ ಪ್ರಶಸ್ತ ತಾಣವಾಗಿದೆ.

ಇಲ್ಲಿ ಚಿಟ್ಟೆ ಮೀನು, ಕ್ಯಾಟ್ ಫಿಶ್, ಟೈಗರ್ ಫಿಶ್, ಬಂದೂಕು ಮೀನು, ಗಿಳಿ ಮೀನು, ಹಾವು ಮೀನು, ಸ್ಟಿಂಗ್ ರೇ, ಕಡಲಾಮೆ ಸೇರಿದಂತೆ 35ಕ್ಕೂ ಅಧಿಕ ಪ್ರಭೇದದ ಜಲಚರಗಳು ಕಾಣಸಿಗಲಿದ್ದು, ಇಂಥ ಅಪರೂಪದ ಜೀವರಾಶಿಗಳು ಇಲ್ಲಿನ ಹವಳ ದಿಬ್ಬಗಳನ್ನೇ ಆಶ್ರಯಿಸಿವೆೆ.

20 ಲಕ್ಷ ಬಿಡುಗಡೆ: ಉತ್ಸವಕ್ಕೆ ಜಿಲ್ಲಾಡಳಿತ ಮತ್ತು ಪ್ರವಾಸೋದ್ಯಮ ಇಲಾಖೆ ವತಿಯಿಂದ 20 ಲಕ್ಷ ಬಿಡುಗಡೆಯಾಗಿದ್ದು, ಉತ್ಸವದ ಸಂಪೂರ್ಣ ಜವಾಬ್ದಾರಿಯನ್ನು ಪುಣೆಯ ಫಿನ್‌ಕಿಕ್ ಅಡ್ವೆಂಚರ್ಸ್ ಸಂಸ್ಥೆ ವಹಿಸಿಕೊಂಡಿದೆ. ಉತ್ಸವದ ಯಶಸ್ವಿಗೆ ಈಗಿನಿಂದಲೇ ತಯಾರಿ ಆರಂಭವಾಗಿದೆ.

ಸ್ಕೂಬಾ ಡೈವಿಂಗ್ ಉತ್ಸವಕ್ಕೆ ಜಗತ್ತಿನ ನಾನಾ ಕಡೆಗಳಿಂದ ಒಟ್ಟು 150 ಮಂದಿ ಭಾಗವಹಿಸುತ್ತಿದ್ದಾರೆ. ಅಳ ಸಮುದ್ರದೊಳಗೆ ಇಳಿದು ಹವಳ ದಿಬ್ಬ ಹಾಗೂ ಜಲಚರಗಳನ್ನು ಕಣ್ತುಂಬಿಕೊಳ್ಳುವ ಜತೆಗೆ ಉತ್ಸವಕ್ಕೆ ಪೂರಕವಾದ ಹಲವು ಚಟುವಟಿಕೆಗಳನ್ನು ಹಮ್ಮಿಕೊಳ್ಳಲಾಗುತ್ತಿದೆ. ಸ್ಥಳೀಯ ಸಮುದಾಯ, ಮೀನುಗಾರರು, ಆಳಸಮುದ್ರ, ಕಡಲತೀರ ಕುರಿತು ಕಿರು ಚಿತ್ರ ಪ್ರದರ್ಶನ, ಛಾಯಾಚಿತ್ರ ಪ್ರದರ್ಶನ, ಸ್ನೋರ್ಕಲಿಂಗ್ ಹಾಗೂ ಜಲ ಕ್ರೀಡೆಗಳು ಇರಲಿದೆ. ಉತ್ಸವದಲ್ಲಿ ಭಾಗವಹಿಸುವವರಿಗೆ ಆಕರ್ಷಕ ಹಾಗೂ ರಿಯಾಯಿತಿ ದರದಲ್ಲಿ ಪ್ರವೇಶ ಅವಕಾಶ ಕಲ್ಪಿಸುತ್ತಿದ್ದೇವೆ.

ಉತ್ಸವದ ಪ್ರವೇಶಕ್ಕ ಸೀಮಿತ ಟಿಕೆಟ್‌ಗಳು ಲಭ್ಯವಿದ್ದು, ಮಾಹಿತಿಗಾಗಿ ಮೊಬೈಲ್ 8380087062 ಅಥವಾ ಇದೇ ಸಂಖ್ಯೆಗೆ ವಾಟ್ಸ್‌ಆ್ಯಪ್ ಕೂಡಾ ಮಾಡಬಹುದು. ವೆಬ್‌ಸೈಟ್ www.netraniscubafest.com ಸಂಪರ್ಕಿಸಬಹುದು. ಮಂಗಳೂರಿನಿಂದ ಮುರ್ಡೇಶ್ವರ 154 ಕಿ.ಮೀ ದೂರವಿದೆ. ಬೆಂಗಳೂರಿನಿಂದ ಬರಬೇಕೆಂದರೆ 500 ಕಿ.ಮೀ ಕ್ರಮಿಸಬೇಕು.

ನೇತ್ರಾಣಿ ಪ್ರಶಸ್ತ ಸ್ಥಳ

ಅಂಡಮಾನ್- ನಿಕೋಬಾರ್, ಲಕ್ಷದ್ವೀಪ, ಪಾಂಡಿಚೇರಿ ಹಾಗೂ ಗೋವಾ ಹೊರತುಪಡಿಸಿದರೆ ಸ್ಕೂಬಾ ಡೈವಿಂಗ್ ಹೇಳಿ ಮಾಡಿಸಿದ ಜಾಗವಿರುವುದು ನೇತ್ರಾಣಿಯಲ್ಲಿ ಮಾತ್ರ. ಪ್ರವಾಸೋದ್ಯಮಕ್ಕೆ ಉತ್ತೇಜನ ನೀಡುವ ದಿಸೆಯಲ್ಲಿ ಉತ್ತರ ಕನ್ನಡ ಜಿಲ್ಲಾಡಳಿತ ಸ್ಕೂಬಾ ಡೈವಿಂಗ್ ಚಟುವಟಿಕೆ ನಡೆಸಲು ಡೈವ್ ಗೋವಾ, ಮುಂಬೈನ ವೆಸ್ಟ್ ಕೋಸ್ಟ್ ಮತ್ತು ಮುರ್ಡೇಶ್ವರದ ನೇತ್ರಾಣಿ ಅಡ್ವೆಂಚರ್ ಸಂಸ್ಥೆಗೆ ಅನುಮತಿ ನೀಡಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X