Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಶಿವಮೊಗ್ಗ: ಬಿ.ಎಸ್.ಯಡಿಯೂರಪ್ಪ ವಿರುದ್ದ...

ಶಿವಮೊಗ್ಗ: ಬಿ.ಎಸ್.ಯಡಿಯೂರಪ್ಪ ವಿರುದ್ದ ಎಂಎಲ್‍ಸಿ ಆರ್.ಪ್ರಸನ್ನಕುಮಾರ್ ವಾಗ್ದಾಳಿ

ವಾರ್ತಾಭಾರತಿವಾರ್ತಾಭಾರತಿ3 Jan 2018 8:14 PM IST
share

ಶಿವಮೊಗ್ಗ, ಜ. 3: ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಪರಿವರ್ತನಾ ಯಾತ್ರೆಯಲ್ಲಿ ಬಾಯಿಗೆ ಬಂದಂತೆ ಮಾತನಾಡುತ್ತಿದ್ದಾರೆ. ಈ ಯಾತ್ರೆಯಿಂದ ಯಾವ ಪರಿವರ್ತನೆಯೂ ಆಗಿಲ್ಲ. ಜೊತೆಗೆ ಅವರ ವರ್ತನೆಯೂ ಸರಿಯಾಗಿಲ್ಲ ಎಂದು ವಿಧಾನಪತಿಷತ್ ಸದಸ್ಯ ಆರ್. ಪ್ರಸನ್ನಕುಮಾರ್ ಟೀಕಾಪ್ರಹಾರ ನಡೆಸಿದ್ದಾರೆ.

ಬುಧವಾರ ನಗರದಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಅವರು ಮಾತನಾಡಿದರು. ವಿಐಎಸ್‍ಎಲ್ ಮತ್ತು ಎಂಪಿಎಂ ಕಾರ್ಖಾನೆ  ಅಭಿವೃದ್ದಿಗೆ ಪ್ರಾಮಾಣಿಕ ಗಮನಹರಿಸದ ಬಿ.ಎಸ್.ಯಡಿಯೂರಪ್ಪರವರು ಚುನಾವಣೆಯ ಸಂದರ್ಭದಲ್ಲಿ ಮತ್ತೆ ಕಾರ್ಖಾನೆಗಳನ್ನು ಪುನಶ್ಚೇತನಗೊಳಿಸುವ ಭರವಸೆ ನೀಡಿ ಅಲ್ಲಿನ ಕಾರ್ಮಿಕರನ್ನು ಮರುಳುಗೊಳಿಸುತ್ತಿದ್ದಾರೆ ಎಂದು ದೂರಿದರು. 

ಕೇಂದ್ರದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವಿದ್ದರೂ ಸಹಾ ವಿಐಎಸ್‍ಎಸಲ್ ಅಭಿವೃದ್ಧಿ ಸಾಧ್ಯವಾಗಿಲ್ಲ. ಕೇಂದ್ರ ಉಕ್ಕು ಸಚಿವರನ್ನು ಈ ಹಿಂದೆ ಕರೆಯಿಸಿ ಅವರಿಂದ ಸಾವಿರಾರು ಕೋಟಿ ರೂ. ನೆರವಿನ ಭರವಸೆಯನ್ನು ನೀಡಲಾಗಿತ್ತಾದರೂ ಒಂದು ರೂಪಾಯಿಯ ನೆರವು ಕೂಡಾ ಇಲ್ಲಿಯವರೆಗೆ ಸಿಕ್ಕಿಲ್ಲ ಎನ್ನುವುದನ್ನು ಕಾರ್ಮಿಕರು ನೆನಪಿಡಬೇಕು ಎಂದರು.

ಚುನಾವಣೆ ಹತ್ತಿರ ಬರುತ್ತಿದ್ದಂತೆ ಯಡಿಯೂರಪ್ಪ ಅವರಿಗೆ ವಿಐಎಸ್‍ಎಲ್  ಮತ್ತು ಎಂಪಿಎಂ ನೆನಪಾಗಿದೆ. ಮತ್ತೆ ಕೇಂದ್ರದಿಂದ ಪುನಶ್ಚೇತನ ಗೊಳಿಸುವ ಆಶ್ವಾಸನೆ ನೀಡುತ್ತಿದ್ದಾರೆ. ಇದೆಲ್ಲ ಚುನಾವಣೆಯ ಗಿಮಿಕ್ ಎಂದರು.

ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ತೀ.ನಾ.ಶ್ರೀನಿವಾಸ್‍ರವರು ಮಾತಾಡಿ, ಯಡಿಯೂರಪ್ಪ ಅವರು ಅಧಿಕಾರ ಸಿಕ್ಕಾಗ ಜನಪರ ಮತ್ತು ರೈತಪರ ಕೆಲಸ ಮಾಡಲಿಲ್ಲ. ಈಗ ಇವರ ಬಗ್ಗೆ ನೆನಪಾಗಿ ಅನುಕಂಪ ತೋರಿಸುತ್ತಿದ್ದಾರೆ. ಜನರಿಗೆ ಇವರ ಅಧಿಕಾರ ಕಾಲದಲ್ಲಿ ಮಾಡಿದ ಭ್ರಷ್ಟಾಚಾರಗಳ ನೆನಪು ಇನ್ನೂ ಇದೆ ಎನ್ನುವುದನ್ನು ಮರೆಯಬಾರದು ಎಂದರು. 

ಗೋಷ್ಠಿಯಲ್ಲಿ ಶಾಸಕ ಕೆ.ಬಿ.ಪ್ರಸನ್ನಕುಮಾರ್, ಪಕ್ಷದ ಪ್ರಮುಖರಾದ ಇಸ್ಮಾಯಿಲ್ ಖಾನ್, ಎಸ್.ಕೆ.ಮರಿಯಪ್ಪ, ಎನ್.ರಮೇಶ್, ವಿಶ್ವನಾಥ ಕಾಶಿ, ಎಸ್.ಪಿ. ಶೇಷಾದ್ರಿ, ಎಸ್.ಪಿ. ದಿನೇಶ್, ಆರಿಫುಲ್ಲಾ, ವಿಜಯಲಕ್ಷ್ಮೀ ಸಿ. ಪಾಟೀಲ್ ಸೇರಿದಂತೆ ಮೊದಲಾದವರಿದ್ದರು.

ಶಿವಮೊಗ್ಗಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ
ನಗರದಲ್ಲಿ ಸುಮಾರು 236.24 ಕೋಟಿ ರೂ. ಮೊತ್ತದ ವಿವಿಧ ಕಾಮಗಾರಿಗಳಿಗೆ ಅನುಮೋದನೆ ದೊರಕಿದ್ದು, ಇದಕ್ಕೆ ಜ. 6 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಶಿಲಾನ್ಯಾಸ ನೆರವೇರಿಸುವರು. ಜೊತೆಗೆ ಸುಮಾರು 174.66 ಕೋಟಿ ರೂ. ಮೌಲ್ಯದ ವಿವಿಧ ಕಟ್ಟಡಗಳನ್ನು ಲೋಕಾರ್ಪಣೆಗೊಳಿಸುವರು. ಜ. 6 ರ ಸಂಜೆ 4.30 ಕ್ಕೆ ನೆಹರೂ ಕ್ರೀಡಾಂಗಣದ ಹೊರಭಾಗದಲ್ಲಿ ಲೋಕಾರ್ಪಣೆ ಹಾಗೂ ಉದ್ಘಾಟನೆ ಕಾರ್ಯಕ್ರಮ ಮತ್ತು ಸಭಾ ಕಾರ್ಯಕ್ರಮ ನಡೆಯಲಿದೆ. ಇದೇ ವೇಳೆ ಸೋಗಾನೆಯಲ್ಲಿ ನಿರ್ಮಿಸಲಾದ ಆಧುನಿಕ ಮಾದರಿಯ ಕಾರಾಗೃಹವನ್ನು, ಕೋಟೆ ಪೋಲೀಸ್ ಠಾಣೆಯ ನೂತನ ಕಟ್ಟಡವನ್ನು, ವಾಜಪೇಯಿ ಬಡಾವಣೆಯಲ್ಲಿ ನಿರ್ಮಿಸಲಾಗಿರುವ ಮಹಿಳಾ ಹಾಸ್ಟೆಲ್ ಕಟ್ಟಡವನ್ನು, ಜಿಪಂ ಸಂಪನ್ಮೂಲ ಕೇಂದ್ರದ ನೂತನ ಕಟ್ಟಡವನ್ನು ಉದ್ಘಾಟಿಸಲಿದ್ದಾರೆ ಎಂದು ಶಾಸಕ ಕೆ.ಬಿ.ಪ್ರಸನ್ನಕುಮಾರ್ ತಿಳಿಸಿದ್ದಾರೆ. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X