Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಮಡಿಕೇರಿ: ಆರ್ಥಿಕ ಪ್ರಗತಿ ಸಾಧಿಸಲು...

ಮಡಿಕೇರಿ: ಆರ್ಥಿಕ ಪ್ರಗತಿ ಸಾಧಿಸಲು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಸೂಚನೆ

ವಾರ್ತಾಭಾರತಿವಾರ್ತಾಭಾರತಿ3 Jan 2018 8:42 PM IST
share
ಮಡಿಕೇರಿ: ಆರ್ಥಿಕ ಪ್ರಗತಿ ಸಾಧಿಸಲು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಸೂಚನೆ

ಮಡಿಕೇರಿ,ಜ,03 :ನಾನಾ ಇಲಾಖೆಗಳಲ್ಲಿ ಪೂರ್ಣಗೊಂಡಿರುವ ಕಾಮಗಾರಿಗಳ ಆರ್ಥಿಕ ಪ್ರಗತಿಯನ್ನು ತುರ್ತಾಗಿ ಪೂರ್ಣಗೊಳಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಕಲ್ಪನಾ ಅವರು ಕಟ್ಟುನಿಟ್ಟಿನ ಸೂಚನೆ ನೀಡಿದರು. 

ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಬುಧವಾರ ನಡೆದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. 

ಪ್ರಸಕ್ತ ಸಾಲಿನಲ್ಲಿ ಆಗಿರುವ ಕಾಮಗಾರಿಗಳ ಆರ್ಥಿಕ ಪ್ರಗತಿಯನ್ನು ಫೆಬ್ರವರಿ ಅಂತ್ಯದೊಳಗೆ ಸಾಧಿಸಬೇಕು. ಬಾಕಿ ಇರುವ ಎಲ್ಲಾ ಕಾಮಗಾರಿಗಳನ್ನು ಆದಷ್ಟು ಶೀಘ್ರ ಪೂರ್ಣಗೊಳಿಸುವಂತೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಅವರು ನಿರ್ದೇಶನ ನೀಡಿದರು. 

ಸ್ವಚ್ಚ ಭಾರತ ಯೋಜನೆಯ ಪ್ರಗತಿಯು ಕುಂಠಿತಗೊಂಡಿರುವುದಕ್ಕೆ ಜಿ.ಪಂ.ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು. ಈ ಯೋಜನೆಯ ಪ್ರಗತಿ ಸಾಧಿಸುವ ನಿಟ್ಟಿನಲ್ಲಿ ಮಾಡಬೇಕಾದ ಕಾರ್ಯಕ್ರಮಗಳ ಬಗ್ಗೆ ಕಾರ್ಯ ಪ್ರವೃತ್ತರಾಗುವಂತೆ ಜಿ.ಪಂ.ಅಧಿಕಾರಿಗಳಿಗೆ ಸೂಚನೆ ನೀಡಿದರು.  

ಜಿ.ಪಂ.ಕಾರ್ಯಪಾಲಕ ಅಭಿಯಂತರರಾದ ರಾಜ್‍ಕುಮಾರ್ ರೆಡ್ಡಿ ಅವರು ಕುಡಿಯುವ ನೀರಿನ ಕಾಮಗಾರಿಗಳ ಬಗ್ಗೆ ಸಭೆಗೆ ಮಾಹಿತಿ ನೀಡಿದರು. ಆರ್ಥಿಕ ಪ್ರಗತಿ ಸಾಧಿಸದಿರುವುದಕ್ಕೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಯವರು ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.  

ನಮ್ಮ ಗ್ರಾಮ ನಮ್ಮ ರಸ್ತೆ ಯೋಜನೆಯ ವಿವರವನ್ನು ಭೂ ಸೇನೆ ಅಧಿಕಾರಿಗಳು ಸಭೆಗೆ ಮಾಹಿತಿ ನೀಡಿ, ಜಿಲ್ಲೆಯಲ್ಲಿ ಒಟ್ಟು 7.4 ಕಿ.ಮೀ ರಸ್ತೆಯು ನಿರ್ಮಾಣಗೊಂಡಿದ್ದು, ಬಾಕಿ ಇರುವ ರಸ್ತೆ ಕಾಮಗಾರಿ ಕೈಗೊಳ್ಳಬೇಕಿದೆ ಎಂದು ಅವರು ಮಾಹಿತಿ ನೀಡಿದರು.  

ಇದಕ್ಕೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಯವರು ಶೀಘ್ರದಲ್ಲಿ ಬಾಕಿ ಉಳಿದಿರುವ ರಸ್ತೆ ಕಾಮಗಾರಿಯನ್ನು ಪೂರ್ಣಗೊಳಿಸುವಂತೆ ಕಟ್ಟುನಿಟ್ಟಿನ ಸೂಚನೆ ನೀಡಿದರು. 

ಪ್ರಧಾನಮಂತ್ರಿ ಗ್ರಾಮ ಸಡಕ್ ಯೋಜನೆಯ ಪ್ರಗತಿ ಮಾಹಿತಿಯನ್ನು ಜಿ.ಪಂ. ಅಧಿಕಾರಿಗಳಿಂದ ಪಡೆದುಕೊಂಡು ಪರಿಶೀಲಿಸಿದರು. ಮುಖ್ಯಮಂತ್ರಿಗಳ ಗ್ರಾಮ ವಿಕಾಸ ಯೋಜನೆಯಡಿ ಜಿಲ್ಲೆಯಲ್ಲಿ ಆಯ್ಕೆಗೊಂಡಿರುವ 12 ಗ್ರಾಮಗಳ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ಕಾಲೋನಿಗಳ ಅಭಿವೃದ್ಧಿ ಮತ್ತು ಗ್ರಾಮಗಳ ಅಭಿವೃದ್ಧಿ ಮಾಡುವಂತೆ ಸೂಚನೆ ನೀಡಿದರು.       

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರಾದ ಮಲ್ಲೇಸ್ವಾಮಿ ಅವರು ಸಭೆಗೆ ಮಾಹಿತಿ ನೀಡಿ  ಜಿಲ್ಲೆಯಲ್ಲಿ ಹೊಸದಾಗಿ 13 ಅಂಗನವಾಡಿ ಕಟ್ಟಡಗಳು ಪೂರ್ಣಗೊಂಡಿದ್ದು, ಬಾಕಿ 9 ಕಟ್ಟಡ ಕಾಮಗಾರಿ ಪ್ರಗತಿಯಲ್ಲಿದೆ ಎಂದು ಸಭೆಗೆ ಮಾಹಿತಿ ನೀಡಿದರು. 

ಜಿಲ್ಲೆಯಲ್ಲಿ ಮಾತೃಪೂರ್ಣ ಯೋಜನೆ ಶೇ.23ರಷ್ಟು ಪ್ರಗತಿ ಸಾಧಿಸಿದ್ದು, ಸಾರ್ವಜನಿಕರಿಂದ ಉತ್ತಮ ಬೆಂಬಲ ದೊರೆಯುತ್ತಿಲ್ಲ ಎಂಬ ಅಂಶವನ್ನು ಸಭೆಯ ಗಮನಕ್ಕೆ ತಂದರು. ಇದಕ್ಕೆ ಪ್ರತಿಕ್ರಿಯಿಸಿದ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಕಲ್ಪನಾ ಅವರು ಸರ್ಕಾರದ ಮಹತ್ವಕಾಂಕ್ಷೆ ಯೋಜನೆ ಇದಾಗಿದ್ದು ಈ ಯೋಜನೆಯನ್ನು ಯಶಸ್ವಿಗೊಳಿಸಲು ಪ್ರಯತ್ನಿಸುವಂತೆ ಸೂಚನೆ ನೀಡಿದರು.

ಕಂದಾಯ ಇಲಾಖೆಯ ಸಾಮಾಜಿಕ ಭದ್ರತೆಯ ಯೋಜನೆಗಳ ಪ್ರಗತಿ ಪರಿಶೀಲಿಸಿ 94ಸಿ ಮತ್ತು 94ಸಿಸಿ ಒಟ್ಟು 11,286 ಅರ್ಜಿಗಳು ವಿಲೇವಾರಿಯಾಗಿದ್ದು, ಬಾಕಿ ಉಳಿದಿರುವ 7,253 ಅರ್ಜಿಗಳನ್ನು ತುರ್ತಾಗಿ ವಿಲೇವಾರಿ ಮಾಡುವಂತೆ ಕಂದಾಯ ಅಧಿಕಾರಿಗಳಿಗೆ ಸೂಚನೆ ನೀಡಿದರು. ಕಂದಾಯ ಅದಾಲತ್, ಪಿಂಚಣಿ ಅದಾಲತ್, ಪೋಡಿ ಯೋಜನೆಗಳ ಪ್ರಗತಿಯ ಮೆಚ್ಚುಗೆ ವ್ಯಕ್ತಪಡಿಸಿದರು.

ಜಿಲ್ಲೆಯಲ್ಲಿ ಅಂಬೇಡ್ಕರ್ ಭವನಗಳ ನಿರ್ಮಾಣಕ್ಕೆ ಜಾಗದ ಸಮಸ್ಯೆ ಇರುವ ಕಡೆ ತುರ್ತಾಗಿ ಜಾಗವನ್ನು ಗುರುತಿಸಿಕೊಡುವಂತೆ ಹಾಗೂ ಮಹರ್ಷಿ ವಾಲ್ಮೀಕಿ ಅಭಿವೃದ್ಧಿಯಲ್ಲಿ ಬಾಕಿ ಇರುವ ಕೊಳವೆ ಬಾವಿಯನ್ನು ಪೂರ್ಣಗೊಳಿಸಿ ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಾದ ಕಲ್ಪನಾ ಅವರು ಸೂಚನೆ ನೀಡಿದರು.

ಐ.ಟಿ.ಡಿ.ಪಿ.ಇಲಾಖೆ ಅಧಿಕಾರಿಯವರಿಂದ ಮಾಹಿತಿ ಪಡೆದು ಯಡವನಾಡಿನಲ್ಲಿ ಜನರಿಗೆ ಮನೆ ಕಟ್ಟಿಕೊಳ್ಳಲು ಸರ್ಕಾರದ ಆದೇಶವನ್ನು ಪಾಲಿಸಿ ಎಂದು ಅಧಿಕಾರಿಗಳಿಗೆ ಉಸ್ತುವಾರಿ ಕಾರ್ಯದರ್ಶಿ ಕಲ್ಪನಾ ಅವರು ಸೂಚನೆ ನೀಡಿದರು.

ಜಿಲ್ಲಾಧಿಕಾರಿ ಪಿ.ಐ.ಶ್ರೀವಿದ್ಯಾ ಅವರು ಮಾತನಾಡಿ ಕುಡಿಯುವ ನೀರಿಗೆ ಬಿಡುಗಡೆಯಾಗಿರುವ ಹಣವನ್ನು ಮಾರ್ಚ್ ಅಂತ್ಯದೊಳಗೆ ಪೂರ್ಣಗೊಳಿಸಿ, ಹಾಗೆಯೇ ನಮ್ಮ ಗ್ರಾಮ ನಮ್ಮ ರಸ್ತೆ ಅಭಿವೃದ್ದಿಗೆ ಸಂಬಂಧಿಸಿದಂತೆ ರೂ. 80ಕೋಟಿ ಹಣ ಬಿಡುಗಡೆಯಾಗಿದ್ದು ಬಾಕಿ ಇರುವ ಕೆಲಸವನ್ನು ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಹೆಚ್ಚುವರಿ ಜಿಲ್ಲಾಧಿಕಾರಿಗಳಾದ ಸತೀಶ್ ಕುಮಾರ್ ಮಾತನಾಡಿ ನಾಲ್ಕು ಕಡೆಗಳಲ್ಲಿ ಅಂಬೇಡ್ಕರ್ ಭವನ ಮತ್ತು ಜಗಜೀವನ್ ರಾಮ್ ಭವನಕ್ಕೆ ಭೂಮಿಯ ಪರಿಶೀಲನೆ ಮಾಡಲಾಗಿದ್ದು  ಕೆಲಸವನ್ನು ಪೂರ್ಣಗೊಳಿಸಿ ಎಂದು ಅಧಿಕಾರಿಗಳಿಗೆ ತಿಳಿಸಿದರು.

ಸಭೆಯಲ್ಲಿ ಜಿ.ಪಂ.ಸಿಇಒ ಪ್ರಶಾಂತ್ ಕುಮಾರ್ ಮಿಶ್ರ, ಜಿಲ್ಲಾ ಅರಣ್ಯ ಸಂರಕ್ಷಣಾಧಿಕಾರಿ ಸೂರ್ಯಸೇನ್, ಉಪ ವಿಭಾಗಾಧಿಕರಿ ಡಾ.ನಂಜುಂಡೇಗೌಡ, ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರಾದ ಮಾಯಾದೇವಿ ಗಲಗಲಿ, ಹಿಂದುಳಿದ ವರ್ಗಗಳ ಮತ್ತು ಕಲ್ಯಾಣ ಇಲಾಖೆಯ ಉಪ ನಿರ್ದೇಶಕರಾದ ಕೆ.ವಿ.ಸುರೇಶ್, ಐಟಿಡಿಪಿ ಅಧಿಕಾರಿ ಪ್ರಕಾಶ್, ನಾನಾ ಇಲಾಖೆಯ ಅಧಿಕಾರಿಗಳು ಹಾಜರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X