ಫೆ.22ರಂದು ವಿಧಾನಸೌಧ ಮುತ್ತಿಗೆ: ಎಂ.ಎನ್.ರವಿ
ಮಂಡ್ಯ, ಜ.3: ಮಡಿವಾಳ ಸಮುದಾಯವನ್ನು ಪರಿಶಿಷ್ಟ ಜಾತಿ ಪಟ್ಟಿಗೆ ಸೇರ್ಪಡೆ ಸೇರಿದಂತೆ ಹಲವು ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಒತ್ತಾಯಿಸಿ ಫೆ.22ರಂದು ವಿಧಾನಸೌಧ ಮುತ್ತಿಗೆ ಹಾಕಲಾಗುವುದು ಎಂದು ಮಡಿವಾಳರ ಸಂಘದ ಜಿಲ್ಲಾಧ್ಯಕ್ಷ ಎಂ.ಎನ್.ರವಿ ತಿಳಿಸಿದರು.
ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂದು ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನವನದಿಂದ ಕಾಲ್ನಡಿಗೆ ಮೂಲಕ ತೆರಳಿ ವಿಧಾನಸೌಧಕ್ಕೆ ಮುತ್ತಿಗೆ ಹಾಕಲಾಗುವುದು. ಮಡಿವಾಳ ಜನಾಂಗದವರು ಆಗಮಿಸಬೇಕು ಎಂದು ಮನವಿ ಮಾಡಿದರು.
ಈಗಾಗಲೇ ಜಿಲ್ಲಾ, ತಾಲೂಕುಮಟ್ಟದಲ್ಲಿ ಹಲವು ಬಾರಿ ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಿದ್ದರೂ ಸರಕಾರ ಸ್ಪಂದಿಸಿಲ್ಲದ ಕಾರಣ. ಹೋರಾಟದ ಮುಂದುವರಿದ ಭಾಗವಾಗಿ ವಿಧಾನಸೌಧ ಮುತ್ತಿಗೆ ಕಾರ್ಯಕ್ರಮ ನಡೆಸಲಾಗುತ್ತಿದೆ ಎಂದು ಅವರು ಹೇಳಿದರು. ಗೋಷ್ಠಿಯಲ್ಲಿ ಕಾರ್ಯಾಧ್ಯಕ್ಷ ಚಂದ್ರಶೇಖರ್ ಮತ್ತು ಇತರೆ ಪದಾಧಿಕಾರಿಗಳು ಉಪಸ್ಥಿತರಿದ್ದರು.
Next Story





