Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಗಂಡನ ಕೊಲೆ: ಪತ್ನಿ ಸೇರಿ ಮೂವರ ಸೆರೆ

ಗಂಡನ ಕೊಲೆ: ಪತ್ನಿ ಸೇರಿ ಮೂವರ ಸೆರೆ

ವಾರ್ತಾಭಾರತಿವಾರ್ತಾಭಾರತಿ3 Jan 2018 10:05 PM IST
share
ಗಂಡನ ಕೊಲೆ: ಪತ್ನಿ ಸೇರಿ ಮೂವರ ಸೆರೆ

ಮಡಿಕೇರಿ, ಜ.3: ಇತ್ತೀಚೆಗೆ ಮಾದಾಪುರದ ಇಗ್ಗೋಡ್ಲು ಗ್ರಾಮದಲ್ಲಿ ನಡೆದ ರಂಜು ಪೂವಯ್ಯ ಎಂಬವರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಜಿಲ್ಲಾ ಅಪರಾಧ ಪತ್ತೆ ದಳ ಯಶಸ್ವಿಯಾಗಿದೆ.


ಹತ್ಯೆಗೈಯಲ್ಪಟ್ಟ ವ್ಯಕ್ತಿಯ ಪತ್ನಿ, ಇಗ್ಗೋಡ್ಲು ಗ್ರಾಮದ ಕಾಳಚಂಡ ಶಾಂತಿ ಪೂವಯ್ಯ(36), ಚೆಂಬೆಬೆಳ್ಳೂರು ಗ್ರಾಮದ ಮಂಡೇಪಂಡ ರಾಜೇಶ್(40) ಹಾಗೂ ಅದೇ ಗ್ರಾಮದ ಮಂಡೇಪಂಡ ಅಶೋಕ(44) ಎಂಬವರೆ ಬಂಧಿತ ಆರೋಪಿ ಎಂದು ಗುರುತಿಸಲಾಗಿದೆ.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪಿ.ರಾಜೇಂದ್ರಪ್ರಸಾದ್ ತಮ್ಮ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಹತ್ಯೆಯ ಬಗ್ಗೆ ಮಾಹಿತಿ ನೀಡಿದರು.

 2017 ಡಿ.23ರಂದು ಬೆಳಗ್ಗೆ 5 ಗಂಟೆ ಸುಮಾರಿನಲ್ಲಿ ಇಗ್ಗೋಡ್ಲುವಿನ ಬಾಡಿಗೆ ಮನೆ ಸಮೀಪ ಕಾಳಚಂಡ ರಂಜು ಪೂವಯ್ಯರನ್ನು ಗುಂಡು ಹಾರಿಸಿ ಕೊಲೆ ಮಾಡಲಾಗಿತ್ತು. ಪ್ರಕರಣದ ತನಿಖೆೆ ಕೈಗೊಂಡ ಡಿಸಿಐಬಿ ತಂಡ ಮೂವರು ಆರೋಪಿಗಳನ್ನು ಬಂಧಿಸಿದರು. ತೀವ್ರ ವಿಚಾರಣೆಗೆ ಒಳಪಡಿಸಿದಾಗ ಆರೋಪಿ ಶಾಂತಿ ಪೂವಯ್ಯ ಹಾಗೂ ಮತ್ತೊಬ್ಬ ಆರೋಪಿ ರಾಜೇಶ್ ನಡುವೆ ಇದ್ದ ಪ್ರೀತಿಯೇ ಕೊಲೆಗೆ ಕಾರಣವೆಂದು ತಿಳಿದು ಬಂದಿದೆ. ಶಾಂತಿ ಪೂವಯ್ಯರಿಗೆ ಫೇಸ್‌ಬುಕ್ ಮೂಲಕ ರಾಜೇಶ್ ಎಂಬಾತನ ಪರಿಚಯವಾಗಿ ಅದು ಪ್ರೀತಿಗೆ ತಿರುಗಿತ್ತು. ತನ್ನ ಪತಿ ಪ್ರತಿದಿನ ಮದ್ಯಪಾನ ಮಾಡಿ ತನಗೆ ಹಾಗೂ ತನ್ನ ಮಕ್ಕಳಿಗೆ ಹಿಂಸೆ ನೀಡುತ್ತಿದ್ದು, ಆತನನ್ನು ಹತ್ಯೆ ಮಾಡಿಸುವಂತೆ ರಾಜೇಶ್ ಬಳಿ ಕೇಳಿಕೊಂಡಿದ್ದಳು ಎನ್ನಲಾಗಿದೆ. ಕೊಲೆ ಮಾಡಿಸಲು ಹಣ ಖರ್ಚಾಗುವುದಾಗಿ ತಿಳಿಸಿದ ರಾಜೇಶ್, ತನ್ನ ಕುಟುಂಬದವನೇ ಆದ ಮಂಡೇಪಂಡ ಅಶೋಕನಿಗೆ, ರಂಜು ಪೂವಯ್ಯರನ್ನು ಕೊಲೆ ಮಾಡಿದರೆ 1.50 ಲಕ್ಷ ರೂ. ನೀಡುವುದಾಗಿ ತಿಳಿಸುತ್ತಾನೆ. ಇದೇ ಪ್ರಕಾರವಾಗಿ ಡಿ.23ರಂದು ಬೆಳಗಿನ ಜಾವ ಮಂಡೇಪಂಡ ರಾಜೇಶ್ ಹಾಗೂ ಅಶೋಕ ವೀರಾಜಪೇಟೆಯಿಂದ ಸ್ನೇಹಿತನ ಬೈಕ್‌ನಲ್ಲಿ ಹೊರಟು ಇಗ್ಗೋಡ್ಲು ಗ್ರಾಮಕ್ಕೆ ತಲುಪುತ್ತಾರೆ. ಕಾಳಚಂಡ ರಂಜು ಪೂವಯ್ಯ ಅವರು ಮನೆಯಿಂದ ಕೆಳಕ್ಕಿಳಿದು ಬರುವುದನ್ನೆ ಕಾಯುತ್ತಿದ್ದ ಆರೋಪಿ ಅಶೋಕ ತನ್ನ ಬಂದೂಕಿನಿಂದ ಗುಂಡು ಹಾರಿಸಿ ಹತ್ಯೆಗೈದಿರುವುದಾಗಿ ಎಸ್ಪಿ ರಾಜೇಂದ್ರ ಪ್ರಸಾದ್ ಮಾಹಿತಿ ನೀಡಿದರು.

ಅಪರಾಧ ಪತ್ತೆದಳದ ನಿರೀಕ್ಷಕ ಎಂ.ಮಹೇಶ್ ನೇತೃತ್ವದಲ್ಲಿ ಎಎಸ್ಸೈ ಕೆ.ವೈ.ಹಮೀದ್, ಎನ್.ಟಿ. ತಮ್ಮಯ್ಯ, ಸಿಬ್ಬಂದಿ ಬಿ.ಎಲ್. ಯೋಗೇಶ್ ಕುಮಾರ್, ಎಂ.ಎನ್. ನಿರಂಜನ್, ಕೆ.ಎಸ್. ಅನಿಲ್, ವಿ.ಜಿ.ವೆಂಕಟೇಶ್, ಕೆ.ಆರ್. ವಸಂತ, ಎಂ.ಬಿ. ಸುಮತಿ , ಯು.ಎ. ಮಹೇಶ್, ಸಿ.ಕೆ. ರಾಜೇಶ್, ಎಂ.ಎ.ಗಿರೀಶ್, ಚಾಲಕರಾದ ಕೆ.ಎಸ್.ಶಶಿಕುಮಾರ್ ಹಾಗೂ ಶೇಷಪ್ಪಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು. ಘಟನೆ ನಡೆದ ಕೇವಲ ಹತ್ತು ದಿನಗಳಲ್ಲಿ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾದ ಪೊಲೀಸ್ ತಂಡಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಾಜೇಂದ್ರ ಪ್ರಸಾದ್ ನಗದು ಬಹುಮಾನ ಘೋಷಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X