ವಸತಿ ಕಟ್ಟಡದಲ್ಲಿ ಅಗ್ನಿ ಅನಾಹುತ: ನಾಲ್ವರು ಮೃತ್ಯು

ಮುಂಬೈ, ಜ.4: ವಸತಿ ಕಟ್ಟಡವೊಂದರಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ ನಾಲ್ಕು ಮಂದಿ ಮೃತಪಟ್ಟಿರುವ ಘಟನೆ ಉತ್ತರ ಮುಂಬೈಯ ಅಂಧೇರಿಯಲ್ಲಿ ನಡೆದಿದೆ.
ಅಗ್ನಿ ಅನಾಹುತಕ್ಕೆ ಕಾರಣಗಳೇನು ಎಂದು ಇನ್ನೂ ತಿಳಿದುಬಂದಿಲ್ಲ. ಬೆಳ್ಳಂಬೆಳಗ್ಗೆ 2 ಗಂಟೆಯ ಸುಮಾರಿಗೆ ಅಗ್ನಿ ಅನಾಹುತ ಸಂಭವಿಸಿದ್ದು, 3 ಗಂಟೆಗಳ ಕಾರ್ಯಾಚರಣೆಯ ನಂತರ ಬೆಂಕಿ ಹತೋಟಿಗೆ ಬಂದಿದೆ.
ಮೃತಪಟ್ಟವರಲ್ಲಿ ಇಬ್ಬರು ಮಕ್ಕಳಾಗಿದ್ದಾರೆ ಹಾಗು ಓರ್ವ ವೃದ್ಧರಿದ್ದಾರೆ. ಅವಘಡದಿಂದ ಐವರಿಗೆ ಗಾಯಗಳಾಗಿದ್ದು, ಹೋಲಿ ಸ್ಪಿರಿಟ್ ಆಸ್ಪತ್ರೆಗೆ ದಾಖಲಿಸಲಾಗಿದೆ.
Next Story