ದೀಪಕ್ ಹತ್ಯೆಯ ತನಿಖೆಯನ್ನು ಎನ್ ಐಎಗೆ ವಹಿಸಲು ಕೇಂದ್ರ ಗೃಹ ಸಚಿವರಿಗೆ ಮನವಿ

ಹೊಸದಿಲ್ಲಿ, ಜ.4: ಇಂದು ದೆಹಲಿಯಲ್ಲಿ ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ರನ್ನು ಭೇಟಿ ಮಾಡಿದ ಕರ್ನಾಟಕದ ಸಂಸದರ ನಿಯೋಗ, ಕಾಟಿಪಳ್ಳದ ದೀಪಕ್ ರಾವ್ ಹತ್ಯೆಯ ತನಿಖೆಯನ್ನು ರಾಷ್ಟ್ರೀಯ ತನಿಖಾ ದಳಕ್ಕೆ ಒಪ್ಪಿಸುವಂತೆ ಮನವಿ ಮಾಡಿದೆ.
ಸಂಸದರಾದ ಪ್ರಹ್ಲಾದ್ ಜೋಶಿ, ನಳಿನ್ ಕುಮಾರ್ ಕಟೀಲ್, ಜಿ.ಎಂ ಸಿದ್ದೇಶ್, ಪಿ.ಸಿ ಮೋಹನ್, ಶೋಭಾ ಕರಂದ್ಲಾಜೆ, ಪ್ರತಾಪ್ ಸಿಂಹ ಮೊದಲಾದವರು ನಿಯೋಗದಲ್ಲಿದ್ದರು.
Next Story