ಪ್ರತಿ ದಿನ 130 ಕಿ.ಮೀ.ರಸ್ತೆ ನಿರ್ಮಾಣ: ನಿತಿನ್ ಗಡ್ಕರಿ
.jpg)
ಹೊಸದಿಲ್ಲಿ, ಜ.4: ಪ್ರಧಾನಮಂತ್ರಿ ಗ್ರಾಮ ಸಡಕ್ ಯೋಜನೆ(ಪಿಎಂಜಿಎಸ್‌ವೈ)ಯಡಿ ಪ್ರತೀ ದಿನ 130 ಕಿ.ಮೀ.ರಸ್ತೆ ನಿರ್ಮಿಸಲಾಗುತ್ತಿದ್ದು, ಕಳೆದ 7 ವರ್ಷಗಳಲ್ಲೇ ಇದು ಅತ್ಯಧಿಕವಾಗಿದೆ ಎಂದು ಕೇಂದ್ರ ಹೆದ್ದಾರಿ ಮತ್ತು ರಸ್ತೆ ಸಾರಿಗೆ ಸಚಿವ ನಿತಿನ್ ಗಡ್ಕರಿ ತಿಳಿಸಿದ್ದಾರೆ.
ಲೋಕಸಭೆಯಲ್ಲಿ ಪ್ರಶ್ನೋತ್ತರ ಅವಧಿಯಲ್ಲಿ ಗ್ರಾಮೀಣಾಭಿವೃದ್ಧಿ ಸಚಿವ ನರೇಂದ್ರಸಿಂಗ್ ಥೋಮರ್ ಪರವಾಗಿ ಉತ್ತರಿಸಿದ ಸಚಿವ ಗಡ್ಕರಿ, ಪಿಎಂಜಿಎಸ್‌ವೈ ಯೋಜನೆಯಡಿ ರಸ್ತೆ ನಿರ್ಮಾಣ ಕಾಮಗಾರಿಯ ವೇಗಾವರ್ಧಿಸಿ 2019ರ ಮಾರ್ಚ್ ತಿಂಗಳೊಳಗೆ ಸಂಪೂರ್ಣಗೊಳಿಸಲು ಕೇಂದ್ರ ಸರಕಾರ ನಿರ್ಧರಿಸಿದೆ ಎಂದು ತಿಳಿಸಿದರು.
ಕಳೆದ ಮೂರು ವರ್ಷಗಳಲ್ಲಿ ರಸ್ತೆ ನಿರ್ಮಾಣ ಕಾರ್ಯದ ವೇಗವನ್ನು ಹೆಚ್ಚಿಸಲಾಗಿದ್ದು, ಕಳೆದ 7 ವರ್ಷಗಳಲ್ಲೇ ಅತ್ಯಧಿಕ ಪ್ರಮಾಣದ(ದಿನಕ್ಕೆ 130 ಕಿ.ಮೀ.) ರಸ್ತೆ ನಿರ್ಮಿಸಲಾಗುತ್ತಿದೆ ಎಂದು ಗಡ್ಕರಿ ತಿಳಿಸಿದರು.
Next Story