ಮುಂಬೈ ಪ್ರತಿಭಟನೆ: 30ಕ್ಕೂ ಹೆಚ್ಚು ಪೊಲೀಸರಿಗೆ ಗಾಯ
300 ಮಂದಿಯ ಬಂಧನ

ಮುಂಬೈ, ಜ.4: ಮುಂಬೈಯಲ್ಲಿ ಮಂಗಳವಾರ ವಿವಿಧ ದಲಿತ ಸಂಘಟನೆಗಳ ನೇತೃತ್ವದಲ್ಲಿ ನಡೆದಿದ್ದ ಪ್ರತಿಭಟನೆಯಲ್ಲಿ 30ಕ್ಕೂ ಹೆಚ್ಚು ಪೊಲೀಸರು ಗಾಯಗೊಂಡಿದ್ದಾರೆ . ಸುಮಾರು 300 ಮಂದಿಯನ್ನು ಬಂಧಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.
ಬಹುತೇಕ ಪೊಲೀಸರು ಕಲ್ಲೆಸೆತದಿಂದ ಗಾಯಗೊಂಡಿದ್ದಾರೆ. ಭಾರತೀಯ ದಂಡ ಸಂಹಿತೆ , ಮಹಾರಾಷ್ಟ್ರ ಆಸ್ತಿ ನಾಶ ತಡೆ ಕಾಯ್ದೆ ಹಾಗೂ ಮಹಾರಾಷ್ಟ್ರ ಪೊಲೀಸ್ ಕಾಯ್ದೆಯಡಿ 16 ಎಫ್‌ಐಆರ್ ದಾಖಲಿಸಲಾಗಿದೆ. ಪ್ರತಿಭಟನೆ ಸಂದರ್ಭ ನಡೆದ ಕೃತ್ಯಗಳ ತನಿಖೆಯ ಅಂಗವಾಗಿ 300ಕ್ಕೂ ಹೆಚ್ಚು ಮಂದಿಯನ್ನು ಬಂಧಿಸಲಾಗಿದೆ ಎಂದು ವಲಯ 6ರ ಡಿಸಿಪಿ ಶಹಾಜಿ ಉಮಪ್ ತಿಳಿಸಿದ್ದಾರೆ.
ಭೀಮಾ ಕೋರೆಗಾಂವ್‌ನಲ್ಲಿ ಜ.1ರಂದು ದಲಿತ ಸಂಘಟನೆಗಳು ಆಯೋಜಿಸಿದ್ದ ವಿಜಯೋತ್ಸವ ದಿನಾಚರಣೆ ವೇಳೆ ಸಂಘಪರಿವಾರದ ಕಾರ್ಯಕರ್ತರು ನಡೆಸಿದ್ದ ಹಿಂಸಾಚಾರವನ್ನು ವಿರೋಧಿಸಿ ಮಂಗಳವಾರ ಪ್ರತಿಭಟನೆ ನಡೆಸಲಾಗಿದ್ದು ಈ ಸಂದರ್ಭ ಅಹಿತಕರ ಘಟನೆಗಳು ನಡೆದಿದ್ದವು.
Next Story