ಉಡುಪಿ: ಎನ್ನೆಸ್ಸೆಸ್ ವಾರ್ಷಿಕ ವಿಶೇಷ ಶಿಬಿರದ ಉದ್ಘಾಟನೆ

ಉಡುಪಿ, ಜ.4: ಕಲ್ಯಾಣಪುರ ಮಿಲಾಗ್ರಿಸ್ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ 2017-18ನೆ ಸಾಲಿನ ವಾರ್ಷಿಕ ವಿಶೇಷ ಶಿಬಿರದ ಉದ್ಘಾಟನಾ ಸಮಾರಂಭವು ಇತ್ತೀಚೆಗೆ ಪೆರಂಪಳ್ಳಿಯ ಟ್ರಿನಿಟಿ ಸೆಂಟ್ರಲ್ ಸ್ಕೂಲ್‌ನ ಸಭಾಂಗಣದಲ್ಲಿ ಜರಗಿತು.
ನಗರಸಭಾ ಸದಸ್ಯ ಪ್ರಶಾಂತ್ ಭಟ್ ಶಿಬಿರವನ್ನು ಉದ್ಘಾಟಿಸಿದರು. ಮಿಲಾ ಗಿಸ್ ವಿದ್ಯಾ ಸಂಸ್ಥೆಗಳ ಸಂಚಾಲಕ ರೆ.ಫಾ.ಸ್ಟ್ಯಾನಿ ಬಿ.ಲೋಬೋ ಅಧ್ಯಕ್ಷತೆ ವಹಿಸಿ ದ್ದರು. ನಗರಸಭೆ ಅಧ್ಯಕ್ಷೆ ಮೀನಾಕ್ಷಿ ಮಾಧವ ಬನ್ನಂಜೆ ಮುಖ್ಯ ಅತಿಥಿಯಾ ಗಿದ್ದರು.
ಮಣಿಪಾಲ ಎಸ್.ಕೆ.ಸ್ಟುಡಿಯೋನ ಶ್ರೀಪತಿ, ಟ್ರಿನಿಟಿ ಸೆಂಟ್ರಲ್ ಸ್ಕೂಲ್‌ನ ಪ್ರಾಂಶುಪಾಲ ಫಾ.ಅನಿಲ್ ಡಿಕಾಸ್ಟ, ರಕ್ಷಕ- ಶಿಕ್ಷಕ ಸಂಘದ ಅಧ್ಯಕ್ಷ ಮಾಕ್ಸಿವ್ ಡಿಸೋಜ, ಮಿಲಾಗ್ರಿಸ್ ಕಾಲೇಜಿನ ಪ್ರಾಂಶುಪಾಲ ವಿನ್ಸೆಂಟ್ ಆಳ್ವಾ, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಸಾಲ್ವದೋರ್ ನೊರೊನ್ಹಾ, ಎನ್ನೆಸ್ಸೆಸ್ ಅಧಿಕಾರಿ ಅನುಪಮಾ ಜೋಗಿ ಉಪಸ್ಥಿತರಿದ್ದರು. ಯೋಜನಾಧಿಕಾರಿ ರವಿನಂದನ್ ಸ್ವಾಗತಿಸಿದರು. ಹರ್ಷಿತ ವಂದಿಸಿದರು. ಕಾವ್ಯ ಕಾರ್ಯಕ್ರಮ ನಿರೂಪಿಸಿದರು.
ಸಮಾರೋಪ: ಶಿಬಿರದ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿ ಯಾಗಿ ಮಿಲಾಗ್ರಿಸ್ ಕಾಲೇಜಿನ ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷ ಉದಯ ಕುಮಾರ್ ಶೆಟ್ಟಿ ಮಾತನಾಡಿದರು. ಅಧ್ಯಕ್ಷತೆಯನ್ನು ಮಿಲಾಗ್ರಿಸ್ ಕಾಲೇಜಿನ ಪ್ರಾಂಶುಪಾಲ ವಿನ್ಸೆಂಟ್ ಆಳ್ವ ವಹಿಸಿದ್ದರು.
ಜೆಸಿಐ ಕಲ್ಯಾಣಪುರದ ಅಧ್ಯಕ್ಷ ಉಮೇಶ್ ಅಮೀನ್, ಟ್ರಿನಿಟಿ ಸೆಂಟ್ರಲ್ ಸ್ಕೂಲ್‌ನ ಪ್ರಾಂಶುಪಾಲ ಫಾ.ಅನಿಲ್ ಡಿಕಾಸ್ಟ, ರಾಜಾರಾಮ ಭಟ್, ಎನ್ನೆಸ್ಸೆಸ್ ಘಟಕದ ಅಧಿಕಾರಿ ಅನುಪಮಾ ಜೋಗಿ ಉಪಸ್ಥಿತರಿದ್ದರು. ವಿದ್ಯಾರ್ಥಿ ನಾಯಕ ನಾಗೇಶ್ ಸ್ವಾಗತಿಸಿ, ಯೋಜನಾಧಿಕಾರಿ ರವಿನಂದನ್ ವಂದಿಸಿ, ಕಾವ್ಯ ಕಾರ್ಯಕ್ರಮ ನಿರೂಪಿಸಿದರು.







