Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಸರಕಾರಿ ಕಟ್ಟಡದಲ್ಲಿ ಖಾಸಗಿ ಕಾರ್ಯಕ್ರಮ...

ಸರಕಾರಿ ಕಟ್ಟಡದಲ್ಲಿ ಖಾಸಗಿ ಕಾರ್ಯಕ್ರಮ ಆಯೋಜನೆ ನಿರ್ಬಂಧಿಸುವ ನಿಯಮಗಳಿದ್ದರೆ ತಿಳಿಸಿ: ಹೈಕೋರ್ಟ್ ಸೂಚನೆ

ವಾರ್ತಾಭಾರತಿವಾರ್ತಾಭಾರತಿ4 Jan 2018 9:58 PM IST
share

ಬೆಂಗಳೂರು, ಜ.4: ಸರಕಾರಿ ಕಟ್ಟಡಗಳಲ್ಲಿ ಖಾಸಗಿ ಕಾರ್ಯಕ್ರಮಗಳ ಆಯೋಜನೆ ನಿರ್ಬಂಧಿಸುವ ಕುರಿತು ಲೋಕೋಪಯೋಗಿ ಇಲಾಖೆ ರೂಪಿಸಿರುವ ಯಾವುದಾದರೂ ನಿಯಮವಿದ್ದರೆ ಅದನ್ನು ನ್ಯಾಯಾಲಯದ ಗಮನಕ್ಕೆ ತರುವಂತೆ ವಕೀಲ ಅಮೃತೇಶ್‌ಗೆ ಹೈಕೋರ್ಟ್ ಗುರುವಾರ ಸೂಚಿಸಿದೆ.

ಮಲ್ಲೇಶ್ವರದಲ್ಲಿರುವ ಸರಕಾರಿ ಬಾಲಕರ ಪಿಯು ಕಾಲೇಜು ಹಾಗೂ ಸರಕಾರಿ ಬಾಲಕಿಯರ ಪ್ರೌಢಶಾಲೆಯಲ್ಲಿ ಶುಕ್ರವಾರ ಉನ್ನತಿ ಹೀಲಿಂಗ್ ಫೌಂಡೇಶನ್ ಟ್ರಸ್ಟ್ ಆಯೋಜಿಸಿರುವ ಖಾಸಗಿ ಕಾರ್ಯಕ್ರಮಕ್ಕೆ ಅನುಮತಿ ನೀಡಿರುವ ಸರಕಾರದ ಕ್ರಮ ಪ್ರಶ್ನಿಸಿ ವಕೀಲ ಅಮೃತೇಶ್ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಹಂಗಾಮಿ ಮುಖ್ಯ ನ್ಯಾಯಮೂರ್ತಿ ಎಚ್.ಜಿ.ರಮೇಶ್ ಹಾಗೂ ನ್ಯಾಯಮೂರ್ತಿ ಪಿ.ಎಸ್.ದಿನೇಶ್ ಕುಮಾರ್ ಅವರಿದ್ದ ಪೀಠ, ಅರ್ಜಿದಾರರಿಗೆ ಈ ಸೂಚನೆ ನೀಡಿತು.

ವಿಚಾರಣೆ ವೇಳೆ ವಕೀಲ ಅಮೃತೇಶ್ ವಾದಿಸಿ, ಮಲ್ಲೇಶ್ವರದ ಸರಕಾರಿ ಶಾಲೆ ಹಾಗೂ ಕಾಲೇಜುಗಳಲ್ಲಿ ಜ.5ರಂದು ಉನ್ನತಿ ಹೀಲಿಂಗ್ ಫೌಂಡೇಶನ್ ಟ್ರಸ್ಟ್‌ನಿಂದ ‘ಹದಿಹರೆಯದವರ ಆರೋಗ್ಯಪೂರ್ಣ ಜೀವನಕ್ಕೆ ಸಮಗ್ರ ವಿಧಾನ’ ಎಂಬ ಹೆಸರಿನಲ್ಲಿ ವಿದ್ಯಾರ್ಥಿಗಳೊಡನೆ ಸಮಾಲೋಚನೆ ಕಾರ್ಯಕ್ರಮ ಆಯೋಜಿಸಲಾಗಿದ್ದು, ಕಾರ್ಯಕ್ರಮಕ್ಕೆ ಶಿಕ್ಷಣ ಇಲಾಖೆ ಅನುಮತಿ ನೀಡಿದೆ. ಆದರೆ ಸರಕಾರಿ ಕಟ್ಟಡಗಳನ್ನು ಇಂಥಹ ಖಾಸಗಿ ಕಾರ್ಯಕ್ರಮಗಳಿಗೆ ಬಳಸಲು ಅವಕಾಶವಿಲ್ಲ ಎಂದು ನ್ಯಾಯಪೀಠಕ್ಕೆ ತಿಳಿಸಿದರು.

ಕಾರ್ಯಕ್ರಮಕ್ಕೆ ಸ್ಥಳೀಯ ಶಾಸಕರು ಹಾಗೂ ಭಾರತೀಯ ವೈದ್ಯಕೀಯ ಸಂಘದ ಅಧ್ಯಕ್ಷರನ್ನು ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳನ್ನಾಗಿ ಆಹ್ವಾನಿಸಲಾಗಿದೆ. ಇದೇ ಕಾರ್ಯಕ್ರಮವನ್ನು ಖಾಸಗಿ ಸಭಾಂಗಣಗಳಲ್ಲಿ ಆಯೋಜಿಸಿದರೆ ಲಕ್ಷಾಂತರ ರೂ ವೆಚ್ಚವಾಗಲಿದ್ದು, ಈ ವೆಚ್ಚ ತಗ್ಗಿಸಲು ಖಾಸಗಿ ಸಂಸ್ಥೆಯು ಸರಕಾರಿ ಕಟ್ಟಡಗಳನ್ನು ಉಚಿತವಾಗಿ ಪಡೆದುಕೊಂಡಿದೆ. ಹೀಗಾಗಿ ಕಾರ್ಯಕ್ರಮಕ್ಕೆ ನೀಡಿರುವ ಅನುಮತಿ ಹಿಂಪಡೆಯುವಂತೆ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಹಾಗೂ ಸರಕಾರಿ ಬಾಲಕರ ಕಾಲೇಜಿನ ಪ್ರಾಂಶುಪಾಲರಿಗೆ ನಿರ್ದೇಶಿಸಬೇಕೆಂದು ಮನವಿ ಮಾಡಿದರು.

ಇದಕ್ಕೆ ನ್ಯಾಯಪೀಠ, ಶುಕ್ರವಾರವೇ ಕಾರ್ಯಕ್ರಮ ನಡೆಯುತ್ತಿದ್ದು ಅಂತಿಮ ಕ್ಷಣದಲ್ಲಿ ಏಕೆ ಅರ್ಜಿ ಸಲ್ಲಿಸಿದ್ದೀರಿ ಎಂದು ಅರ್ಜಿದಾರರನ್ನು ಪ್ರಶ್ನಿಸಿತು. ಬಳಿಕ ಸರಕಾರಿ ಕಟ್ಟಡಗಳಲ್ಲಿ ಖಾಸಗಿ ಕಾರ್ಯಕ್ರಮಗಳನ್ನು ನಿರ್ಬಂಧಿಸುವ ಸಂಬಂಧ ಯಾವುದಾದರೂ ನಿಯಮಗಳಿದ್ದರೆ ಅದನ್ನು ನ್ಯಾಯಾಲಯಕ್ಕೆ ಒದಗಿಸುವಂತೆ ಸೂಚಿಸಿದ ನ್ಯಾಯಪೀಠ, ನಿಯಮಾವಳಿಗಳು ಲಭ್ಯವಿದ್ದರೆ ಅವುಗಳನ್ನು ಸಮರ್ಪಕವಾಗಿ ಪಾಲಿಸುವಂತೆ ಸರಕಾರಕ್ಕೆ ನಿರ್ದೇಶಿಸಲಾಗುವುದು. ಇಲ್ಲವಾದರೆ, ಈ ಸಂಬಂಧ ಸೂಕ್ತ ನಿಯಮ ರೂಪಿಸುವಂತೆ ನ್ಯಾಯಾಲಯವೇ ಆದೇಶ ಹೊರಡಿಸುತ್ತದೆ ಎಂದು ತಿಳಿಸಿ ಅರ್ಜಿ ವಿಚಾರಣೆಯನ್ನು ಜ.9ಕ್ಕೆ ಮುಂದೂಡಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X