Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಮೇವುಹಗರಣ: ಜೈಲಿನಲ್ಲಿ ‘ಚಳಿ ಆಗುತ್ತಿದೆ’...

ಮೇವುಹಗರಣ: ಜೈಲಿನಲ್ಲಿ ‘ಚಳಿ ಆಗುತ್ತಿದೆ’ ಎಂದ ಲಾಲೂ ಪ್ರಸಾದ್

ವಾರ್ತಾಭಾರತಿವಾರ್ತಾಭಾರತಿ4 Jan 2018 11:21 PM IST
share
ಮೇವುಹಗರಣ: ಜೈಲಿನಲ್ಲಿ ‘ಚಳಿ ಆಗುತ್ತಿದೆ’ ಎಂದ ಲಾಲೂ ಪ್ರಸಾದ್

ರಾಂಚಿ, ಜ.4: ಪರಿಸ್ಥಿತಿ ಎಷ್ಟೇ ಗಂಭೀರವಾಗಿರಲಿ, ಬಿಹಾರದ ಮಾಜಿ ಮುಖ್ಯಮಂತ್ರಿ ಲಾಲೂಪ್ರಸಾದ್ ಯಾದವ್ ಅಲ್ಲಿದ್ದಾರೆಂದರೆ ಅಲ್ಲಿ ಹಾಸ್ಯೋಕ್ತಿಗಳಿಗೆ ಬರವಿಲ್ಲ. ರಾಂಚಿಯ ವಿಶೇಷ ನ್ಯಾಯಾಲಯದಲ್ಲಿ ಇಂತಹ ಒಂದು ಘಟನೆ ಗುರುವಾರ ನಡೆಯಿತು.

ಮೇವುಹಗರಣಕ್ಕೆ ಸಂಬಂಧಿಸಿ ರಾಂಚಿಯ ವಿಶೇಷ ನ್ಯಾಯಾಲಯ ಲಾಲೂಪ್ರಸಾದ್‌ರಿಗೆ ಶಿಕ್ಷೆಯ ಪ್ರಮಾಣ ನಿರ್ಧರಿಸಲು ಕಲಾಪಗಳನ್ನು ಆರಂಭಿಸಿತ್ತು. ಆಗ ಅಲ್ಲಿ ಉಪಸ್ಥಿತರಿದ್ದ ಯಾದವ್- ಜೈಲಲ್ಲಿ ತುಂಬಾ ಚಳಿ ಆಗುತ್ತಿದೆ ಎಂದು ನ್ಯಾಯಾಧೀಶರಿಗೆ ಹೇಳಿದರು.

ಇದಕ್ಕೆ ತಕ್ಷಣ ಪ್ರತಿಕ್ರಿಯಿಸಿದ ವಿಶೇಷ ನ್ಯಾಯಾಲದ ನ್ಯಾಯಾಧೀಶ ಶಿವ್‌ಪಾಲ್ ಸಿಂಗ್- ಹಾಗಿದ್ದರೆ ತಬಲಾ ಬಾರಿಸಿ- ಎಂದು ಉತ್ತರಿಸಿದರು. ಬಳಿಕ ಕಾರ್ಯಕಲಾಪದ ಮಧ್ಯೆ ನ್ಯಾಯಾಧೀಶರು, ತಾನು ಈ ಪ್ರಕರಣದ (ಮೇವುಹಗರಣದ) ದಾಖಲೆ ಪರಿಶೀಲಿಸಿದ್ದೇನೆ. ಸರಕಾರ ಸ್ವಲ್ಪ ಎಚ್ಚರಿಕೆ ವಹಿಸಿದ್ದರೆ ಇಂತಹ ಘಟನೆ ನಡೆಯುತ್ತಿರಲಿಲ್ಲ ಎಂದರು. ಮುಖ್ಯಮಂತ್ರಿಯಾಗಿದ್ದ ನೀವು ಸೂಕ್ತವಾಗಿ ನಡೆದುಕೊಳ್ಳಲಿಲ್ಲ ಎಂದು ಲಾಲೂ ಪ್ರಸಾದ್‌ರನ್ನುದ್ದೇಶಿಸಿ ನ್ಯಾಯಾಧೀಶರು ಹೇಳಿದರು.

ಆಗ ತನ್ನ ಎಂದಿನ ವಿಶಿಷ್ಟವಾದ ಶೈಲಿಯ ನಗೆ ಬೀರಿದ ಲಾಲೂ ಪ್ರಸಾದ್, ನಾನೂ ಕೂಡಾ ಓರ್ವ ವಕೀಲ ಎಂದುತ್ತರಿಸಿದರು. ಲಾಲೂಪ್ರಸಾದ್ ಪಾಟ್ನ ವಿವಿಯಿಂದ ಎಲ್‌ಎಲ್‌ಬಿ ಪದವಿ ಪಡೆದಿದ್ದಾರೆ.

ಆರ್‌ಜೆಡಿ ಮುಖ್ಯಸ್ಥ ರಘುವಂಶ ಯಾದವ್, ಲಾಲೂಪ್ರಸಾದ್ ಪುತ್ರ ತೇಜಸ್ವಿ ಯಾದವ್, ಕಾಂಗ್ರೆಸ್ ಮುಖಂಡ ಮನೀಶ್ ತಿವಾರಿ ಹಾಗೂ ಆರ್‌ಜೆಡಿ ಮುಖಂಡ ಶಿವಾನಂದ್ ತಿವಾರಿ ವಿರುದ್ಧ ನ್ಯಾಯಾಂಗನಿಂದನೆ ನೋಟಿಸ್ ಜಾರಿಯಾಗಿರುವುದನ್ನು ನ್ಯಾಯಾಧೀಶರು ಲಾಲೂಪ್ರಸಾದ್ ಗಮನಕ್ಕೆ ತಂದರು. ಆಗ ನೋಟೀಸನ್ನು ರದ್ದುಗೊಳಿಸುವಂತೆ ಲಾಲೂಪ್ರಸಾದ್ ಕೋರಿಕೊಂಡರು. ಲಾಲೂರನ್ನು ನ್ಯಾಯಾಲಯದ ಕೋಣೆಯಿಂದ ಹೊರಗೆ ಕರೆದೊಯ್ಯುವಾಗ ‘ಶಾಂತಚಿತ್ತರಾಗಿ’ ಯೋಚಿಸಿ ನಿರ್ಧರಿಸುವಂತೆ ಲಾಲೂಪ್ರಸಾದ್ ನ್ಯಾಯಾಧೀಶರನ್ನು ಒತ್ತಾಯಿಸಿದರು.

ಶಿಕ್ಷೆಯ ಪ್ರಮಾಣವನ್ನು ಜ.5ರಂದು ಘೋಷಿಸಲಿದ್ದು ವೀಡಿಯೊ ಕಾನ್ಫರೆನ್ಸಿಂಗ್ ಮೂಲಕ ವಾದ ವಿವಾದ ಆಲಿಸುವ ಆಯ್ಕೆ ತನ್ನ ಎದುರಿದೆ ಎಂದು ನ್ಯಾಯಾಧೀಶರು ತಿಳಿಸಿದಾಗ, ವೈಯಕ್ತಿಕವಾಗಿ ಹಾಜರಿದ್ದು ವಿಚಾರಣೆ ನಡೆಸುವಂತೆ ಲಾಲೂ ಕೋರಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X