ಸಾಲಬಾಧೆ: ರೈತ ಆತ್ಮಹತ್ಯೆ

ಕೆ.ಆರ್.ಪೇಟೆ, ಜ.4: ತಾಲೂಕಿನ ಬೀರುವಳ್ಳಿ ಗ್ರಾಮದ ರೈತ ಬಿ.ಡಿ.ಬೋರೇಗೌಡ(58) ಸಾಲಬಾಧೆ ತಾಳಲಾರದೆ ಬುಧವಾರ ತಡರಾತ್ರಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಮೃತರಿಗೆ ಒಂದೂವರೆ ಎಕರೆ ಜಮೀನಿದ್ದು, ಬರಗಾಲದ ಹಿನ್ನೆಲೆಯಲ್ಲಿ ಬೆಳೆ ನಷ್ಟವಾಗಿತ್ತು. ಕೃಷಿಗಾಗಿ ಪ್ರಾಥಮಿಕ ಕೃಷಿಪತ್ತಿನ ಸಹಕಾರ ಸಂಘದಲ್ಲಿ 40 ಸಾವಿರ ರೂ. ಸೇರಿದಂತೆ, ಖಾಸಗಿಯವರಿಂದಲೂ ಸಾಲ ಮಾಡಿದ್ದರು ಎನ್ನಲಾಗಿದೆ.
ಸಾಲಗಾರರ ಕಾಟ ತಾಳಲಾರದೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆಂದು ಕುಟುಂಬದವರು ದೂರು ನೀಡಿದ್ದು, ಗ್ರಾಮಾಂತರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.
Next Story