Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಸಾವಿನ ಮನೆಯಲ್ಲೂ ಬಿಜೆಪಿ ರಾಜಕೀಯ: ಸಚಿವ...

ಸಾವಿನ ಮನೆಯಲ್ಲೂ ಬಿಜೆಪಿ ರಾಜಕೀಯ: ಸಚಿವ ಮಹದೇವಪ್ಪ ವಾಗ್ದಾಳಿ

ದೀಪಕ್ ರಾವ್ ಹತ್ಯೆ ಪ್ರಕರಣ

ವಾರ್ತಾಭಾರತಿವಾರ್ತಾಭಾರತಿ5 Jan 2018 6:39 PM IST
share
ಸಾವಿನ ಮನೆಯಲ್ಲೂ ಬಿಜೆಪಿ ರಾಜಕೀಯ: ಸಚಿವ ಮಹದೇವಪ್ಪ ವಾಗ್ದಾಳಿ

ಮೈಸೂರು,ಜ.5: ಮಂಗಳೂರಿನಲ್ಲಿ ಬಿಜೆಪಿ ಕಾರ್ಯಕರ್ತ ದೀಪಕ್ ರಾವ್ ಹತ್ಯೆ ಮಾಡಿರುವ ಘಟನೆ ಖಂಡನೀಯ, ಆದರೆ ಬಿಜೆಪಿಯವರು ಸಾವಿನ ಮನೆಯಲ್ಲೂ ರಾಜಕೀಯ ಮಾಡುತ್ತಿದ್ದಾರೆ  ಎಂದು ಲೋಕೋಪಯೋಗಿ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು.

ನಗರದ ಸರ್ಕಾರಿ ಅತಿಥಿ ಗೃಹದಲ್ಲಿ ಶುಕ್ರವಾರ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ಪ್ರಕರಣವನ್ನು ರಾಜಕೀಕರಣಗೊಳಿಸಬಾರದು. ಪರಿಸ್ಥಿತಿಯ ಲಾಭ ಪಡೆದುಕೊಳ್ಳಲು ಯಾವುದೇ ರಾಜಕೀಯ ಪಕ್ಷ ಮುಂದಾಗಬಾರದು. ಆದರೆ ಬಿಜೆಪಿ  ಹಿಂದುತ್ವದ ಕಾರ್ಡ್ ಪ್ಲೇ ಮಾಡುತ್ತಿದೆ. ಇದು ಕರ್ನಾಟಕದಲ್ಲಿ  ನಡೆಯುವುದಿಲ್ಲ ಎಂದು ಎಚ್ಚರಿಸಿದರು.

ಚುನಾವಣಾ ವೇಳೆ ಭಾವನಾತ್ಮಕ ವಿಷಯಗಳನ್ನ ಜನರ ಮುಂದೆ ತರುವ ಪ್ರಯತ್ನ ಮಾಡಬಾರದು. ಮಂಗಳೂರಿನ ದೀಪಕ್ ರಾವ್ ಹತ್ಯೆ ಪ್ರಕರಣದಲ್ಲಿ ತನಿಖೆಯಿಂದ ಸತ್ಯಾಂಶ ಹೊರ ಬರಲಿದೆ. ಕೊಲೆಗಳಲ್ಲಿ ರಾಜಕೀಯ ಮಾಡುವುದು ಸರಿಯಲ್ಲ. ದೀಪಕ್ ರಾವ್ 7 ವರ್ಷಗಳ ಕಾಲ ಮುಸ್ಲಿಂ ಸಮುದಾಯದವರ ಜೊತೆ ಕೆಲಸ ಮಾಡಿದ್ದಾರೆ. ಅವರೇ ಸೌಹಾರ್ದವಾಗಿ ಬದುಕಿದ್ದರು. ಈಗ ಸೌಹಾರ್ದತೆ ಹಾಳು ಮಾಡುವ ಕೆಲಸ ಆಗಬಾರದು ಎಂದರು.

ಮಹಾರಾಷ್ಟ್ರದ ಕೊರೆಂಗಾವ್‍ನಲ್ಲಿ ನಡೆದ ಹಿಂಸಾಚಾರ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿ, ಕಾನೂನು ಪ್ರಕಾರ ತಪ್ಪಿತಸ್ಥರಿಗೆ ಶಿಕ್ಷೆಯಾಗಬೇಕು.  ಅಲ್ಲಿನ ಬಿಜೆಪಿ ಸರ್ಕಾರ ವಿಜಯೋತ್ಸವವನ್ನು ಹತ್ತಿಕ್ಕಿ ಭಯದ ವಾತಾವರಣ ನಿರ್ಮಾಣ ಮಾಡಿದೆ. ಇದು ದೇಶದ ಬಹುತ್ವದ ಐಕ್ಯತೆಗೆ ಧಕ್ಕೆಯನ್ನುಂಟು ಮಾಡಿದೆ. ಸಂವಿಧಾನದ ಬದಲಾವಣೆಯ ಕುರಿತು ಬಿಜೆಪಿ ನಾಯಕರ ಹೇಳಿಕೆಗಳು ಅವರ ದಿಕ್ಸೂಚಿಯನ್ನು ತೋರಿಸುತ್ತಿದೆ. ಬಿಜೆಪಿ ಆಡಳಿತ ಇರುವ ರಾಜ್ಯಗಳಲ್ಲಿ ದೇಶದ ಐಕ್ಯತೆಗೆ ಗಂಡಾಂತರ ಕಾದಿದೆ. ಮಹಾರಾಷ್ಟ್ರ ಘಟನೆಯನ್ನು ನಾನು ಉಗ್ರವಾಗಿ ಖಂಡಿಸುತ್ತೇನೆ. ಈ ವಿಚಾರವಾಗಿ ಪ್ರಧಾನಿ ಹಾಗೂ ರಾಷ್ಟ್ರಪತಿಗಳು ಸೂಕ್ಷ್ಮವಾಗಿ ಚಿಂತನೆ ಮಾಡಬೇಕು. ಪ್ರಧಾನಿ ಮೋದಿಯವರು ಮಧ್ಯ ಪ್ರವೇಶಿಸಿ ಘಟನೆಯನ್ನು ಖಂಡಿಸಿ ದೇಶಕ್ಕೆ ಒಳ್ಳೆಯ ಸಂದೇಶ ನೀಡಬೇಕು ಎಂದು ಆಗ್ರಹಿಸಿದರು.

ಮುಂಬರುವ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸಲು ನಾನು ಕ್ಷೇತ್ರ ಹುಡುಕುತ್ತಿಲ್ಲ. ಪಕ್ಷ ಸೂಚಿಸಿದ ಕ್ಷೇತ್ರದಲ್ಲಿಯೇ ಕಣಕ್ಕಿಳಿಯುತ್ತೇನೆ. ಮಾಜಿ ಸಿಎಂ ವೀರಪ್ಪಮೊಯ್ಲಿ ನೆಲಮಂಗಲದಿಂದ ಕಣಕ್ಕಿಳಿಯಲು ಹೇಳುತ್ತಿದ್ದಾರೆ. ಪುಲಿಕೇಶಿನಗರ ಕ್ಷೇತ್ರದಲ್ಲಿ ಕಣಕ್ಕಿಳಿಯುವಂತೆ ಸಚಿವ ರೋಷನ್ ಬೇಗ್ ಹೇಳುತ್ತಿದ್ದಾರೆ. ಆದರೆ ಪಕ್ಷ ಸೂಚಿಸಿದ ಕ್ಷೇತ್ರದಲ್ಲಿ ಕಣಕ್ಕಿಳಿಯುತ್ತೇನೆ. ಪಕ್ಷ ಹಾಗೂ ಕಾರ್ಯಕರ್ತರು ಒಪ್ಪಿದರೆ ಮಾತ್ರ ನನ್ನ ಪುತ್ರ ಸುನಿಲ್ ಬೋಸ್ ಚುನಾವಣೆಗೆ ಸ್ಪರ್ಧಿಸುತ್ತಾನೆ ಎಂದು ಸ್ಪಷ್ಟಪಡಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X