Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಕೋಲಾರ: ಸಾವಯವ ಮತ್ತು ಸಿರಿಧಾನ್ಯಗಳ...

ಕೋಲಾರ: ಸಾವಯವ ಮತ್ತು ಸಿರಿಧಾನ್ಯಗಳ ಮೇಳಕ್ಕೆ ಸಚಿವ ರಮೇಶ್ ಕುಮಾರ್ ಚಾಲನೆ

ವಾರ್ತಾಭಾರತಿವಾರ್ತಾಭಾರತಿ5 Jan 2018 9:31 PM IST
share
ಕೋಲಾರ: ಸಾವಯವ ಮತ್ತು ಸಿರಿಧಾನ್ಯಗಳ ಮೇಳಕ್ಕೆ ಸಚಿವ ರಮೇಶ್ ಕುಮಾರ್ ಚಾಲನೆ

ಕೋಲಾರ,ಜ.5 : ಎಲ್ಲಿ ರೈತ ನೆಮ್ಮದಿಯಾಗಿರುತ್ತಾನೆ, ಅಲ್ಲಿ ಎಲ್ಲರೂ ನೆಮ್ಮದಿಯಾಗಿರುತ್ತಾರೆ. ಯಾರು ರೈತ ಪರವಾಗಿರುತ್ತಾರೆ, ರೈತರ ಕಷ್ಟ ಸುಖಗಳಿಗೆ ಸ್ಪಂದಿಸುತ್ತಾರೆ, ರೈತರ ಬದುಕಿಗೆ ಹತ್ತಿರ ಇರುವಂತವರನ್ನು ನಮ್ಮವರು ಎಂದು ತಿಳಿಯಬೇಕು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಕೋಲಾರ ಜಿಲ್ಲಾ ಉಸ್ತುವಾರಿ ಸಚಿವ ಕೆ.ಆರ್ ರಮೇಶ್‍ಕುಮಾರ್ ತಿಳಿಸಿದರು. 

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕೃಷಿ ಇಲಾಖೆ, ಕೋಲಾರ-ಚಿಕ್ಕಬಳ್ಳಾಪುರ ಜಿಲ್ಲೆಗಳ ಪ್ರಾಂತೀಯ ಸಾವಯುವ ಕೃಷಿಕರ ಸಹಕಾರ ಸಂಘಗಳ ಒಕ್ಕೂಟ ಮತ್ತು ತೋಟಗಾರಿಕೆ ಇಲಾಖೆ ಕೋಲಾರ ಇವರ ಸಂಯುಕ್ತಾಶ್ರಯದಲ್ಲಿ ಕೋಲಾರ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ಹಮ್ಮಿಕೊಂಡಿದ್ದ ಸಾವಯುವ ಮತ್ತು ಸಿರಿಧಾನ್ಯಗಳ ಮೇಳ ಹಾಗೂ ಫಲ-ಪುಷ್ಪ ಪ್ರದರ್ಶನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. 

ರೈತರು ನೆಮ್ಮೆದಿಯಾಗಿ ಬದುಕುವಂತಾಗಬೇಕು. ರಸಗೊಬ್ಬರಗಳ ಬೆಲೆ, ಕೀಟಾನಾಶಕಗಳ ಬೆಲೆ ಹೆಚ್ಚಾದರೆ ಯಾರು ಪ್ರಶ್ನಿಸುತ್ತಿಲ್ಲ. ರೈತರು ಪ್ರಶ್ನಿಸುವ ಮನೋಭಾವ ಬೆಳಸಿಕೊಳ್ಳುಬೇಕು. ಕೃಷಿಯ ಬಗ್ಗೆ ತಿಳುವಳಿಕೆ ಪಡೆದುಕೊಳ್ಳಬೇಕು ಎಂದು ಹೇಳಿದರು. ದಿವಂಗತ ರಾಮಕೃಷ್ಣ ಹೆಗಡೆಯವರು ಮುಖ್ಯಮಂತ್ರಿಯಾಗಿದ್ದಾಗ ಕೃಷಿ ಕ್ಷೇತ್ರದಲ್ಲಿ ಅಮೂಲಾಗ್ರ ಬದಲಾವಣೆ ತರಲು ಬಿ.ಎಸ್.ಸಿ ಅಗ್ರಿಕಲ್ಚರ್ ಪದವಿ ಪಡೆಯಲು ರೈತ ಹಿನ್ನೆಲೆಯವರು ಬರುವಂತೆ ಆಯ್ಕೆ ಪ್ರಕ್ರಿಯೆಗೆ ಪ್ರಾಕ್ಟಿಕಲ್ ಟೆಸ್ಟ್ ಇಟ್ಟಿದ್ರು. ಪದವಿಗೆ ಪ್ರವೇಶ ಪಡೆಯುವರು ರೈತರು ಬೆಳೆಯುವ ಬೆಳೆಗಳ ಬಗ್ಗೆ ತಿಳುವಳಿಕೆ ಇರುವವರು ಪದವಿ ಪಡೆದು ಕೃಷಿ ಇಲಾಖೆಗಳಿಗೆ ಬರುವಂತಾಯಿತು ಎಂದು ತಿಳಿಸಿದರು.

ಕೃಷಿ ಇಲಾಖೆಯ ನಿರ್ದೇಶಕರಾದ ಬಿ.ವೈ. ಶ್ರೀನಿವಾಸರ್‍ರವರು ಮಾತನಾಡಿ ಕರ್ನಾಟಕ ಕೃಷಿ ಪ್ರಧಾನ ರಾಜ್ಯ.  ರಾಜ್ಯದಲ್ಲಿ ಏಕದಳ, ದ್ವಿದಳ, ಎಣ್ಣೆಕಾಳು, ವಾಣಿಜ್ಯ ಬೆಳೆಗಳನ್ನು ಬೆಳೆಯುವುದರಲ್ಲಿ ಹೆಸರುವಾಸಿ.  ಕರ್ನಾಟಕ ಸರ್ಕಾರವು 2004-05 ರಲ್ಲಿ ಸಾವಯವ ಕೃಷಿ ನೀತಿಯನ್ನು ಜಾರಿಗೆ ತಂದಿತು.  ಸಾವಯವ ಕೃಷಿಯಿಂದ ಉತ್ತಮ ಪೌಷ್ಠಿಕ ಆಹಾರವನ್ನು ಪಡೆದುಕೊಳ್ಳಬಹುದಾಗಿದೆ. ಸಾವಯವ ಕೃಷಿಯು ಬರ ಪರಿಸ್ಥಿತಿಯನ್ನು ಎದುರಿಸುತ್ತಿದೆ.  ಸಾವಯವ ಕೃಷಿಯನ್ನು ಉತ್ತೇಜಿಸಲು `ಸಾವಯವ ಭಾಗ್ಯ'ವನ್ನು ಕರ್ನಾಟಕ ಸರ್ಕಾರವು ಜಾರಿಗೆ ತಂದಿದೆ ಎಂದರು.

ಕರ್ನಾಟಕದ 1566 ಹೋಬಳಿಗಳಲ್ಲಿ ಸುಮಾರು 70 ಸಾವಿರ ರೈತರು 1 ಲಕ್ಷಕ್ಕೂ ಹೆಚ್ಚು ಹೆಕ್ಟರ್ ಪ್ರದೇಶದಲ್ಲಿ ಸಾವಯವ ಕೃಷಿ ಇದೆ. ಸಾವಯುವ ಬೆಳೆಗಳಿಗೆ ವ್ಯವಸ್ಥಿತ ಮಾರುಕಟ್ಟೆ ಒದಗಿಸಲು 14 ಪ್ರಾಂತೀಯ ಸಾವಯುವ ಒಕ್ಕೂಟ ರಚನೆ ಮಾಡಲಾಗಿದೆ. ಸಾವಯುವ ಕೃಷಿ ಉತ್ಪನ್ನಗಳ ಸಂಗ್ರಹಣೆ ಪ್ಯಾಂಕಿಗ್, ಬ್ರ್ಯಾಂಡ್ ನೀಡುವಿಕೆ ಚಾಲನೆಯಲ್ಲಿದೆ ಎಂದು ಮಾಹಿತಿ ನೀಡಿದರು. 

ಸಿರಿಧಾನ್ಯಗಳು ನಾರಿನ ಅಂಶವನ್ನು ಹೊಂದಿರುವ ಗಟ್ಟಿ ಕಾಳುಗಳು, ಅಕ್ಕಿ, ರಾಗಿ ಗೋಧಿಯನ್ನು ಹೆಚ್ಚಾಗಿ ಬಳಸುತ್ತೇವೆ. ಉಳಿದ ಸಿರಿಧಾನ್ಯಗಳ ಬಳಕೆ ಕಡಿಮೆ. ಸಿರಿಧಾನ್ಯಗಳು ಆರೋಗ್ಯ ಮಿತ್ರ ಧಾನ್ಯಗಳು. ಇವು ಬಿ.ಪಿ ಶುಗುರ್‍ಗಳನ್ನು ದೂರ ಮಾಡುತ್ತವೆ. ಸಿರಿಧಾನ್ಯಗಳಿಗೆ ಉತ್ತಮವಾದ ಬೆಲೆ ಇದೆ. ಜವನರಿ 19, 20, ಮತ್ತು 21 ರಂದು ಬೆಂಗಳೂರಿನಲ್ಲಿ ನಡೆಯುವ ಅಂತರಾಷ್ಟ್ರೀಯ  ಸಿರಿಧಾನ್ಯ ಮೇಳದಲ್ಲಿ ಎಲ್ಲರೂ ಭಾಗವಹಿಸಿ ಸದುಪಯೋಗಪಡಿಸಿಕೊಳ್ಳಬೇಕು ಎಂದು ತಿಳಿಸಿದರು. 

ರಾಜ್ಯ ಮಟ್ಟದ ಸಾವಯುವ ಕೃಷಿ ಉತ್ಪನ್ನ ಮಟ್ಟದ ಸಮಿತಿ ಅಧ್ಯಕ್ಷರಾದ ಸೋಮಶೇಖರ್ ರವರು ಮಾತನಾಡಿ ಹಿಂದೆ ಕೃಷಿ ಯೋಜನೆಗಳಿಗೆ ನೀಡುತ್ತಿದ್ದ ದುಪ್ಪಟ್ಟು ಅನುಧಾನವನ್ನು ಮುಂದಿನ ಬಜೆಟ್‍ನಲ್ಲಿ ಸರ್ಕಾರವು ಇಲಾಖೆಗೆ ನೀಡಲಿದೆ. ಮುಂದಿನ 2-3 ವರ್ಷಗಳಲ್ಲಿ ಎತ್ತಿನಹೊಳೆ ಯೋಜನೆಯಿಂದ ನೀರು ಸಿಗಲಿದ್ದು ಜನರು ಸಾವಯುವ ಕೃಷಿ ಪದ್ದತಿ ಅಳವಡಿಸಿಕೊಂಡು ಸಿರಿಧಾನ್ಯಗಳನ್ನು ಹೆಚ್ಚು ಬೆಳೆಯಬೇಕು ಎಂದು ತಿಳಿಸಿದರು. 
  
ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಗೀತಮ್ಮ ಆನಂದರೆಡ್ಡಿಯವರು ಮಾತನಾಡಿ, ಪ್ರಾಚೀನ ಕಾಲದಲ್ಲಿ ಯಾವುದೇ ತಂತ್ರಜ್ಞಾನವಿಲ್ಲದೆ. ರಸಗೊಬ್ಬರ ಉಪಯೋಗಿಸಲಾಗಿದೆ. ಆಹಾರ ಧಾನ್ಯಗಳನ್ನು ಬೆಳೆಯಲಾಗುತ್ತಿತ್ತು. ಅಂದು ಜನರು ನೂರು ವರ್ಷ ಬದುಕುತ್ತಿದ್ದರು. ಇಂದು ಆಧುನಿಕ ಕೃಷಿ ಪದ್ದತಿ ರಸಗೊಬ್ಬರಗಳ ಹೆಚ್ಚಾದ ಬಳಕೆ ಕೀಟನಾಶಕಗಳು ಬಳಕೆಯಿಂದ ಬೆಳೆದ ಆಹಾರ ಧಾನ್ಯಗಳನ್ನು ಸೇವಿಸಿ ಮನುಷ್ಯನು ಅರವತ್ತು ವರ್ಷ ಬದುಕುವುದೇ ಕಷ್ಟವಾಗಿದೆ. ಆದ್ದರಿಂದ ಹೆಚ್ಚು ಹೆಚ್ಚು ಸಿರಿಧಾನ್ಯಗಳನ್ನು ಬೆಳದು ಉಪಯೋಗಿಸಬೇಕಿದೆ. ಸಿರಿಧಾನ್ಯ ಬೆಳೆಯುವ ರೈತರನ್ನು ಪ್ರೋತ್ಸಾಹಿಸಲು ಸಿರಿಧಾನ್ಯ ಬೀಜಗಳನ್ನು ರಿಯಾಯಿತಿ ದರದಲ್ಲಿ ಸರ್ಕಾರ ವಿತರಿಸಬೇಕು ಎಂದರು. 

ಸಿರಿಧಾನ್ಯಗಳ ಅಲಂಕಾರ ರಂಗೋಲಿ ಸ್ಪರ್ಧೆ ಮತ್ತು ಸಿರಿಧಾನ್ಯಗಳಿಂದ ತಯಾರಿಸಿದ ಖಾದ್ಯಗಳ ತಯಾರಿಕೆ ಸ್ಪರ್ಧೆ ಏರ್ಪಡಿಸಿದ್ದು ಇದರಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು. ರಂಗೋಲಿ ಸ್ಪರ್ಧೆಯಲ್ಲಿ ಮುಳಬಾಗಿಲು ತಾಲ್ಲೂಕಿನ ನಿರ್ಮಲ ಪ್ರಥಮ, ಶ್ರೀನಿವಾಸಪುರ ತಾಲ್ಲೂಕಿನ ರತ್ನಮ್ಮ ದ್ವೀತಿಯ, ಮಾಲೂರು ತಾಲ್ಲೂಕಿನ ಸುಧಾ ತೃತೀಯ ಸ್ಥಾನ ಪಡೆದುಕೊಂಡರು. ಖಾದ್ಯಗಳ ತಯಾರಿಕೆ ಸ್ಪರ್ಧೆಯಲ್ಲಿ ಶ್ರೀನಿವಾಸಪುರದ ವಿಮಲ ಪ್ರಥಮ, ಅನುರಾಧ ಕೆ.ವಿ ದ್ವೀತಿಯ, ಲಕ್ಷ್ಮೀದೇವಮ್ಮ ತೃತೀಯ ಸ್ಥಾನ ಪಡೆದುಕೊಂಡರು. 

ಕಾರ್ಯಕ್ರಮದಲ್ಲಿ ರಾಜ್ಯಮಟ್ಟದ ಸಾವಯುವ ಕೃಷಿ ಉನ್ನತ ಮಟ್ಟದ ಸಮಿತಿಯು ಉಪಾಧ್ಯಕ್ಷರಾದ ಹೆಚ್,ಟಿ ಕೃಷ್ಣಗೌಡ, ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷರಾದ ಯಶೋಧ ಕೃಷ್ಣಮೂರ್ತಿ, ಜಿಲ್ಲಾ ಪಂಚಾಯತ್ ಸದಸ್ಯರಾದ ಮ್ಯಾಕಲ ನಾರಾಯಣಸ್ವಾಮಿ, ಗೋವಿಂದಸ್ವಾಮಿ, ತಾಲ್ಲೂಕು ಪಂಚಾಯತ್ ಅಧ್ಯಕ್ಷರಾದ ಸೂಲೂರು ಆಂಜಿನಪ್ಪ ಸೇರಿದಂತೆ ರೈತರು ಅಧಿಕಾರಿಗಳು ಉಪಸ್ಥಿತರಿದ್ದರು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X