Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಕಾಂಗ್ರೆಸ್ ಮುಕ್ತ ರಾಜ್ಯ ಅಸಾಧ್ಯ: ಡಿ....

ಕಾಂಗ್ರೆಸ್ ಮುಕ್ತ ರಾಜ್ಯ ಅಸಾಧ್ಯ: ಡಿ. ಬಸವರಾಜ್

ವಾರ್ತಾಭಾರತಿವಾರ್ತಾಭಾರತಿ5 Jan 2018 11:13 PM IST
share
ಕಾಂಗ್ರೆಸ್ ಮುಕ್ತ ರಾಜ್ಯ ಅಸಾಧ್ಯ: ಡಿ. ಬಸವರಾಜ್

ದಾವಣಗೆರೆ,ಜ.5: ಸಿಎಂ ಸಿದ್ದರಾಮಯ್ಯ ಅವರು ವಿರುದ್ದ  ಭ್ರಷ್ಟಾಚಾರದ ಅರೋಪ ಆಧಾರ ರಹಿತ ಶುದ್ಧ ಸುಳ್ಳು ಎಂದು ರೇಷ್ಮೆ ಉದ್ಯಮಗಳ ನಿಗಮದ ಮಾಜಿ ಅಧ್ಯಕ್ಷ ಡಿ. ಬಸವರಾಜ್ ಹೇಳಿದರು.

ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿ.ಎಸ್. ಯಡಿಯೂರಪ್ಪನವರು ತಮ್ಮ ಅಧಿಕಾರದ ಅವಧಿಯಲ್ಲಿ ನಾಡಿನ ಪ್ರಾಕೃತಿಕ ಸಂಪತ್ತು ಲೂಟಿ ಮಾಡಿ ಬಳ್ಳಾರಿ ರೆಡ್ಡಿಗಳ ಅಣತಿಯಂತೆ ಆಡಳಿತ ನಡೆಸಿ ರಾಜ್ಯದ ಬೊಕ್ಕಸಕ್ಕೆ ಲಕ್ಷಾಂತರ ಕೋಟಿ ನಷ್ಟ ಉಂಟು ಮಾಡಿದ್ದಾರೆ. ಬೆಲೇಕೆರೆ ಬಂದರಿನಲ್ಲಿ ಅಧಿಕಾರಿಗಳು ಮುಟ್ಟುಗೋಲು ಹಾಕಿಕೊಂಡಿದ್ದ ಕಬ್ಬಿಣದ ಅದಿರನ್ನು ಸಹ ಬಿಡದೇ ಲೂಟಿ ಮಾಡಿದ ಕೀರ್ತಿ ಬಿ.ಎಸ್.ವೈ. ಆಡಳಿತಕ್ಕೆ ಸಲ್ಲುತ್ತದೆ. ಭೂ ಡಿನೋಟೀಫಿಕೇಷನ್ ಹಾಗೂ ಅಕ್ರಮ ಗಣಿಗಾರಿಕೆ ಫಲಾನುಭವಿಗಳಿಂದ, ಬಿ.ಎಸ್.ವೈ. ಒಡೆತನದ ಪ್ರೇರಣಾ ಸಂಸ್ಥೆಗೆ ಬ್ಯಾಂಕ್ ಮುಖಾಂತರ ರೂ. 20 ಕೋಟಿ ಉಡುಗೊರೆ ನೆಪದಲ್ಲಿ ಲಂಚವನ್ನು ಪಡೆದ ಕುಖ್ಯಾತಿ ಬಿ.ಎಸ್.ವೈ.ಗೆ ಇದೆ ಎಂದು ಟೀಕಿಸಿದರು.  

ಸಿದ್ದರಾಮಯ್ಯ ಅವರು ಬಡವರ ರಾಯಭಾರಿಯಂತೆ ಕೆಲಸ ಮಾಡುತ್ತಿದ್ದಾರೆ. ಸಿದ್ದರಾಮಯ್ಯ ರಾಜ್ಯಕ್ಕೆ ಮುಖ್ಯಮಂತ್ರಿಯಾಗಿರುವುದು ಬಡವರ ಪಾಲಿನ ಭಾಗ್ಯವಾಗಿದೆ. ಇಂತವರ ಬಗ್ಗೆ ವಿಧಾನಸಭಾ ಚುನಾವಣಾ ಹತ್ತಿರವಾಗುತ್ತಿರುವ ಸಮಯದಲ್ಲಿ ಬಿ.ಎಸ್. ಯಡಿಯೂರಪ್ಪ ಮತ್ತು ಬಿಜೆಪಿ ನಾಯಕರು ಇಲ್ಲ ಸಲ್ಲದ ಆರೋಪಗಳನ್ನು ಮಾಡಿ ರಾಜಕೀಯ ಪಿತೂರಿ ಮಾಡುತ್ತಿರುವುದನ್ನು ತೀವ್ರವಾಗಿ ಖಂಡಿಸಿದರು.  

ರಾಜ್ಯ ಕಾಂಗ್ರೆಸ್ ಮುಕ್ತವೆಂಬುದು ಬಿಜೆಪಿಗೆ ಅಂಟಿದ ರೋಗ. ಈ ರೋಗಕ್ಕೆ 2018ರ ರಾಜ್ಯ ವಿಧಾಸಭಾ ಚುನಾವಣೆ ಹಾಗೂ 2019ರಲ್ಲಿ ನಡೆಯುವ ಲೋಕಸಭಾ ಚುನಾವಣೆಯಲ್ಲಿ ಸೂಕ್ತ ಚಿಕಿತ್ಸೆ ನೀಡಲಾಗುವುದು. ಬಿ.ಎಸ್.ವೈ. ನೂರು ಜನ್ಮ ಹೆತ್ತರು ಕಾಂಗ್ರೆಸ್ ಮುಕ್ತ ರಾಜ್ಯ ಮಾಡಲು ಸಾಧ್ಯವಿಲ್ಲವೆಂದರು.

ರಾಜ್ಯದಲ್ಲಿ ಉತ್ತಮ ಆಡಳಿತವಿದೆ. ಆದರೆ ಕೇಂದ್ರ ಸರ್ಕಾರ ಗೋಡ್ಸೆ ಆರಾಧಕರ ಕೈಯಲ್ಲಿ ಸಿಲುಕಿದ್ದು 2019ರಲ್ಲಿ ಮುಕ್ತಿ ಸಿಗಲಿದೆ. ಬಿ.ಎಸ್. ಯಡಿಯೂರಪ್ಪ ಅವರು ಭ್ರಷ್ಟಾಚಾರದ  ಕೆಲವು ಪ್ರಕರಣಗಳು ಸಾಕ್ಷಾಧಾರ ಕೊರತೆಯಿಂದ ಕೆಲವು ಮೊಕದ್ದಮೆಗಳಲ್ಲಿ ಖುಲಾಸೆ ಆಗಿವೆ. ರಾಜ್ಯದ ನ್ಯಾಯಾಲಯಗಳಲ್ಲಿ ಇನ್ನು ಹತ್ತಾರು ಮೊಕದ್ದಮೆಗಳಿದ್ದು, ಅವರು ದೋಷ ಮುಕ್ತರಲ್ಲ ಎಂದರು.  

ಚುನಾವಣೆ ಸಮೀಪದಲ್ಲಿದ್ದು, ಸೋಲು ಗ್ಯಾರಂಟಿ ಎಂದು ತಿಳಿದಿರುವ ಬಿಜೆಪಿ ರಾಜ್ಯದಲ್ಲಿ ಶಾಂತಿ ಕದಡುವ ಸಾಧ್ಯತೆ ಇದ್ದು, ಸರ್ಕಾರ ಗುಪ್ತಚರ ಇಲಾಖೆ ಮತ್ತು ಪೊಲೀಸ್ ವ್ಯವಸ್ಥೆಯನ್ನು ಮತ್ತಷ್ಟು ಬಲಿಷ್ಟ ಪಡಿಸಬೇಕೆಂದು ಸಿಎಂ ಮತ್ತು ಗೃಹಸಚಿವರಿಗೆ ವಿನಂತಿ ಮಾಡಿದರು.  

ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಡಾ. ಸಿ.ಆರ್. ನಸೀರ್ ಅಹ್ಮದ್,  ಜಿಲ್ಲಾ ಕಾಂಗ್ರೆಸ್ ಮುಖಂಡರುಗಳಾದ ಅಲ್ಲಾವುಲ್ಲಿ ಘಾಜಿಖಾನ್, ಎಂ.ಕೆ. ಲಿಯಾಕತ್ ಅಲಿ, ಡಿ. ಶಿವಕುಮಾರ್, ಜಿಯಾವುಲ್ಲಾ, ಫಾರುಕ್, ಇರ್ಫಾನ್, ಸುನೀಲ್ ಉಪಸ್ಥಿತರಿದ್ದರು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X