Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ರಾಜ್ಯ ಸರಕಾರದ ಜವಳಿ ನೀತಿ ಜನಪರವಾಗಿದೆ:...

ರಾಜ್ಯ ಸರಕಾರದ ಜವಳಿ ನೀತಿ ಜನಪರವಾಗಿದೆ: ರವೀಂದ್ರ ಕಲಬುರ್ಗಿ

ವಾರ್ತಾಭಾರತಿವಾರ್ತಾಭಾರತಿ5 Jan 2018 11:31 PM IST
share

ಧಾರವಾಡ, ಜ.5: ರಾಜ್ಯ ಸರಕಾರವು ನೇಕಾರರ ಹಿತರಕ್ಷಣೆ ಹಾಗೂ ನೇಕಾರಿಕೆ ಅಭಿವೃದ್ಧಿಗೆ ಪೂರಕವಾದ ಅನೇಕ ಕ್ರಮಗಳನ್ನು ಕೈಗೊಂಡಿದೆ. ರಾಜ್ಯದ ನೂತನ ಜವಳಿ ನೀತಿ ಜನಪರವಾಗಿದೆ ಎಂದು ರಾಜ್ಯ ಕೈಮಗ್ಗ ಅಭಿವೃದ್ಧಿ ನಿಗಮದ ಅಧ್ಯಕ್ಷ ರವೀಂದ್ರ ಕಲಬುರ್ಗಿ ಹೇಳಿದ್ದಾರೆ.

ಶುಕ್ರವಾರ ನಗರದ ಕರ್ನಾಟಕ ವಿದ್ಯಾವರ್ಧಕ ಸಂಘದ ರಾ.ಹ.ದೇಶಪಾಂಡೆ ಸಭಾಭವನದಲ್ಲಿ ಜಿಲ್ಲಾ ಪಂಚಾಯತ್ ಹಾಗೂ ಕೈಮಗ್ಗ ಮತ್ತು ಜವಳಿ ಇಲಾಖೆ ಸಂಯುಕ್ತಾಶ್ರಯದಲ್ಲಿ ಸರಕಾರದ ನೂತನ ಜವಳಿ ನೀತಿ ಹಾಗೂ ಇಲಾಖೆಯ ವಿವಿಧ ಯೋಜನೆಗಳ ಬಗ್ಗೆ ಅರಿವು ಮೂಡಿಸಲು ಆಯೋಜಿಸಿದ್ದ ಒಂದು ದಿನದ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ನೇಕಾರಿಕೆ ಒಂದು ಗುಡಿ ಕೈಗಾರಿಕೆಯಾಗಿದ್ದರೂ ಇಂದು ಬೃಹತ್ ಆಗಿ ಬೆಳೆದಿದೆ. ಅಸಂಖ್ಯಾತ ಕುಟುಂಬಗಳು ನೇಕಾರಿಕೆಯನ್ನು ಅವಲಂಬಿಸಿ ಬದುಕುತ್ತಿವೆ. ಪ್ರಸ್ತುತ ರಾಜ್ಯ ಸರಕಾರ ನೇಕಾರರ ಸಾಲ ಮನ್ನಾ ಮಾಡಿ ನೆರವು ನೀಡಿದೆ ಎಂದು ಅವರು ಹೇಳಿದರು.

ಇಲಾಖೆ ಮತ್ತು ನಿಗಮದಿಂದ ನೇಕಾರರ ಹಿತರಕ್ಷಣೆ ಹಾಗೂ ಉದ್ಯೋಗ ಭದ್ರತೆಗಾಗಿ ಅನೇಕ ಯೋಜನೆಗಳನ್ನು ಅನುಷ್ಠಾನಗೊಳಿಸಲಾಗಿದೆ. ಸಾಲಮನ್ನಾ, ಸಹಾಯಧನ, ನಿರುದ್ಯೋಗಿಗಳಿಗೆ ತರಬೇತಿ, ರಿಯಾಯತಿಯಲ್ಲಿ ನೂಲು ವಿತರಣೆ, ವಿದ್ಯುತ್ ಮಗ್ಗಗಳ ಪೂರೈಕೆ ಹೀಗೆ ಅನೇಕ ರೀತಿಯ ನೆರವಿನ ಮೂಲಕ ನೇಕಾರಿಕೆ ಸದೃಢಗೊಳಿಸಲು ಕ್ರಮಕೈಗೊಂಡಿದೆ ಎಂದು ರವೀಂದ್ರ ಕಲಬುರ್ಗಿ ತಿಳಿಸಿದರು.

ಮುಖ್ಯಅತಿಥಿಗಳಾಗಿ ಭಾಗವಹಿಸಿದ್ದ ರಾಜ್ಯ ಬಾಲವಿಕಾಸ ಅಕಾಡೆಮಿ ಅಧ್ಯಕ್ಷ ವೇದವ್ಯಾಸ ಕೌಲಗಿ ಮಾತನಾಡಿ, ಜವಳಿ, ಕೈಮಗ್ಗದಿಂದ ಸಿಗುವ ಬಟ್ಟೆ ಗುಣಮಟ್ಟದಾಗಿರುತ್ತದೆ. ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಬಟ್ಟೆ ತಯಾರಿಕೆಯಲ್ಲಿ ಉತ್ತಮ ಗುಣಮಟ್ಟವನ್ನು ನೇಕಾರರು ಕಾಯ್ದುಕೊಂಡು ಬಂದಿದ್ದಾರೆ ಎಂದರು.

ರಾಜ್ಯ ಸರಕಾರ ನೇಕಾರ ವೃತ್ತಿಗೆ ಪುನಃಶ್ಚೇತನ ನೀಡಲು ಅನೇಕ ಕ್ರಮಕೈಗೊಂಡಿದೆ. ಸರಕಾರ ಪ್ರಾಯೋಜಿತ ಜವಳಿ ನೀತಿ ಬಳಸಿಕೊಂಡು ಉತ್ತಮ ಬದುಕು ಕಟ್ಟಿಕೊಳ್ಳಿ ಮತ್ತು ನೇಕಾರ ಸಮಾಜ ಆರ್ಥಿಕವಾಗಿ ಬಲಗೊಳ್ಳಬೇಕು ಎಂದು ವೇದವ್ಯಾಸ ಕೌಲಗಿ ತಿಳಿಸಿದರು.

ಜಿಲ್ಲಾ ಪಂಚಾಯತ್‌ನ ಕೃಷಿ ಮತ್ತು ಕೈಗಾರಿಕಾ ಸ್ಥಾಯಿ ಸಮಿತಿ ಅಧ್ಯಕ್ಷ ಸುರೇಶಗೌಡ ಪಾಟೀಲ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಜವಳಿ ಮತ್ತು ಕೈಮಗ್ಗ ಇಲಾಖೆ ಉಪನಿರ್ದೇಶಕ ವಾಸುದೇವ ದೊಡ್ಡಮನಿ, ಜವಳಿ ಉತ್ತೇಜನಾಧಿಕಾರಿ ಮಂಜುನಾಥ ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ಧಾರವಾಡ ಜಿಲ್ಲೆಯಲ್ಲಿ ನೇಕಾರ ಸಾಲ ಮನ್ನಾ ಪ್ರಯೋಜನ ಪಡೆದ ಫಲಾನುಭವಿ ಗಳಿಗೆ ಸಾಲಮನ್ನಾ ಪ್ರಮಾಣಪತ್ರ ಮತ್ತು ಉಚಿತವಾಗಿ ಹೊಲಿಗೆಯಂತ್ರ ತರಬೇತಿ ಪಡೆದ ಮಹಿಳೆಯರಿಗೆ ಶಿಷ್ಯವೇತನ ವಿತರಿಸಲಾಯಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X