ಗಾಂಜಾ ಮಾರಾಟ: ಆರೋಪಿ ಬಂಧನ
ಬೆಂಗಳೂರು, ಜ.5: ಮಾದಕ ವಸ್ತು ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ವ್ಯಕ್ತಿಯೊಬ್ಬನನ್ನು ಬಂಧಿಸಿರುವ ಸಿಸಿಬಿ ಪೊಲೀಸರು, 1 ಕೆಜಿ 700 ಗ್ರಾಂ ಗಾಂಜಾ ವಶಕ್ಕೆ ಪಡೆದು ತನಿಖೆ ಮುಂದುವರೆಸಿದ್ದಾರೆ.
ಕೋಲಾರ ಮೂಲದ ಬಾಬು (35) ಬಂಧಿತ ಆರೋಪಿ ಎಂದು ಸಿಸಿಬಿ ತಿಳಿಸಿದೆ.
ನಗರದ ಹಳೇ ಮದ್ರಾಸ್ ರಸ್ತೆ ಟಿನ್ ಫ್ಯಾಕ್ಟರಿ ಬಳಿ ಮಾದಕ ವಸ್ತು ಗಾಂಜಾವನ್ನಿಟ್ಟುಕೊಂಡಿರುವ ಬಗ್ಗೆ ಕಾರ್ಯಾಚರಣೆ ನಡೆಸಿದ ಪೊಲೀಸರು ಬಂಧಿತ ಆರೋಪಿ ಬಾಬುನನ್ನು ಬಂಧಿಸಿದ್ದಾರೆ. ಇನ್ನು ಪ್ರಕರಣ ಸಂಬಂಧ ಮೂವರ ಆರೋಪಿಗಳಿಗೆ ತನಿಖೆ ಕೈಗೊಂಡಿದ್ದು, ಈ ಸಂಬಂಧ ಮಹದೇವಪುರ ಪೊಲೀಸ್ ಠಾಣೆಯಲ್ಲಿ ಮೊಕದ್ದಮೆ ದಾಖಲಾಗಿದೆ.
Next Story