ಬೆಂಗಳೂರು: ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕಳವು
ಬೆಂಗಳೂರು, ಜ. 5: ಖಾಸಗಿ ಕಂಪೆನಿ ಉದ್ಯೋಗಿಯೊಬ್ಬರ ಮನೆಗೆ ನುಗ್ಗಿರುವ ದುಷ್ಕರ್ಮಿಗಳು, ಲಕ್ಷಾಂತರ ಮೌಲ್ಯದ ಚಿನ್ನಾಭರಣಗಳು, ಬೆಲೆ ಬಾಳುವ ವಸ್ತುಗಳನ್ನು ದೋಚಿ ಪರಾರಿಯಾಗಿರುವ ಘಟನೆ ಇಲ್ಲಿನ ಬನಶಂಕರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ನಗರದ ಬನಶಂಕರಿ 2ನೆ ಹಂತದ ಶೇಷಾದ್ರಿ ಅವರು ಡಿ.31 ರಂದು ಮನೆಗೆ ಬೀಗ ಹಾಕಿಕೊಂಡು ಕುಟುಂಬ ಸಮೇತ ಮುಂಬೈಗೆ ಹೋಗಿದ್ದರು. ಗುರುವಾರ ರಾತ್ರಿ ಬಂದು ನೋಡಿದಾಗ ಮನೆಯಲ್ಲಿದ್ದ ವಸ್ತುಗಳನ್ನೆಲ್ಲ ಚೆಲ್ಲಾಪಿಲ್ಲಿ ಮಾಡಿ ಚಿನ್ನಾಭರಣ ಕಳವು ಮಾಡಿದ್ದಾರೆ ಎನ್ನಲಾಗಿದೆ.
ಈ ಸಂಬಂಧ ಮೊಕದ್ದಮೆ ದಾಖಲಿಸಿಕೊಂಡಿರುವ ಬನಶಂಕರಿ ಠಾಣಾ ಪೊಲೀಸರು ತನಿಖೆ ಕೈಗೊಂಡಿದ್ದಾರೆ.
Next Story





