ಯುನಿವೆಫ್: ಉಡುಪಿಯಲ್ಲಿ ಪ್ರವಾದಿ ಸಂದೇಶ ಕಾರ್ಯಕ್ರಮ
ಉಡುಪಿ, ಜ. 6: ರಾಷ್ಟ್ರೀಯತೆ, ಜಾತ್ಯಾತೀತತೆ ಹಾಗೂ ಸ್ವಚ್ಛತೆ ಮತ್ತು ಪ್ರವಾದಿ ಮುಹಮ್ಮದ್(ಸ) ಎಂಬ ಕೇಂದ್ರೀಯ ವಿಷಯದಲ್ಲಿ ಯುನಿವೆಫ್ ಕರ್ನಾಟಕ ಫೆಬ್ರವರಿ 2ರವರೆಗೆ ಆಯೋಜಿಸಿರುವ 'ಅರಿಯಿರಿ ಮನುಕುಲದ ಪ್ರವಾದಿಯನ್ನು' ಎಂಬ ಅಭಿಯಾನದ ಸಾರ್ವಜನಿಕ ಕಾರ್ಯಕ್ರಮವು ಉಡುಪಿಯ ಜಾಮಿಯಾ ಮಸೀದಿಯಲ್ಲಿ ಜ. 7ರಂದು ಬೆಳಗ್ಗೆ 10 ಗಂಟೆಗೆ ನಡೆಯಲಿದೆ.
ಈ ಕಾರ್ಯಕ್ರಮದಲ್ಲಿ ಯುನಿವೆಫ್ ಕರ್ನಾಟಕ ಅಧ್ಯಕ್ಷ ರಫೀಉದ್ದೀನ್ ಕುದ್ರೋಳಿ ಅವರು ಭಾರತದ ಮುಸ್ಲಿಮರ ವರ್ತಮಾನ ಮತ್ತು ಭವಿಷ್ಯ ಎಂಬ ವಿಷಯದಲ್ಲಿ ಪ್ರವಚನ ನೀಡಲಿದ್ದಾರೆ ಎಂದು ಜಿಲ್ಲಾಧ್ಯಕ್ಷ ಸೈಫುದ್ದೀನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Next Story





