Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಶ್ರೀಲಂಕಾ ಕ್ರಿಕೆಟ್ ದಂತಕತೆ ಜಯಸೂರ್ಯಗೆ...

ಶ್ರೀಲಂಕಾ ಕ್ರಿಕೆಟ್ ದಂತಕತೆ ಜಯಸೂರ್ಯಗೆ ಈಗ ನಡೆದಾಡಲು ಊರುಗೋಲೇ ಆಸರೆ!

ವಾರ್ತಾಭಾರತಿವಾರ್ತಾಭಾರತಿ6 Jan 2018 8:40 PM IST
share
ಶ್ರೀಲಂಕಾ ಕ್ರಿಕೆಟ್ ದಂತಕತೆ ಜಯಸೂರ್ಯಗೆ ಈಗ ನಡೆದಾಡಲು ಊರುಗೋಲೇ ಆಸರೆ!

ಕೊಲಂಬೊ, ಜ.6: ಶ್ರೀಲಂಕಾದ ಓರ್ವ ಆಲ್‌ರೌಂಡ್ ದಂತಕತೆ ಸನತ್ ಜಯಸೂರ್ಯ ಹಿಂದೊಮ್ಮೆ ಸ್ಫೋಟಕ ಬ್ಯಾಟಿಂಗ್ ಹಾಗೂ ಕರಾರುವಾಕ್ ಸ್ಪಿನ್ ಬೌಲಿಂಗ್‌ನ ಮೂಲಕ ವಿಶ್ವದ ಆಟಗಾರರನ್ನು ಕಾಡಿದ್ದರು. ಇದೀಗ ಅವರು ನಡೆದಾಡಲು ಪರದಾಟ ನಡೆಸುತ್ತಿದ್ದು, ಓಡಾಡಲು ಊರುಗೋಲು ಆಶ್ರಯಿಸಿದ್ದಾರೆ.

  ವಿಶ್ವದ ಅಪಾಯಕಾರಿ ಬ್ಯಾಟ್ಸ್‌ಮನ್ ಆಗಿ ಮಿಂಚಿದ್ದ ಜಯಸೂರ್ಯ ಪ್ರಸ್ತುತ ಮಂಡಿನೋವಿನಿಂದ ಬಳಲುತ್ತಿದ್ದು, ಊರುಗೋಲಿಲ್ಲದೆ ನಡೆದಾಡಲು ಸಾಧ್ಯವಾಗುತ್ತಿಲ್ಲ. 48ರ ಹರೆಯದ ಜಯಸೂರ್ಯ ನಿವೃತ್ತಿಯ ಜೀವನ ಕಷ್ಟಕರವಾಗಿದೆ.

ಜಯಸೂರ್ಯ 1996ರಲ್ಲಿ ಶ್ರೀಲಂಕಾ ತಂಡ ಚೊಚ್ಚಲ ವಿಶ್ವಕಪ್ ಜಯಿಸಲು ಪ್ರಮುಖ ಪಾತ್ರವಹಿಸಿದ್ದರು. ಕಳೆದ ಕೆಲವು ಸಮಯದಿಂದ ಮಂಡಿನೋವು ಎದುರಿಸುತ್ತಿರುವ ಅವರು ವಿಶೇಷ ಶಸ್ತ್ರಚಿಕಿತ್ಸೆಗಾಗಿ ಆಸ್ಟ್ರೇಲಿಯದ ಮೆಲ್ಬೋರ್ನ್‌ಗೆ ತೆರಳಲಿದ್ದಾರೆ.

2 ದಶಕಗಳ ಕಾಲ ಶ್ರೀಲಂಕಾ ತಂಡದಲ್ಲಿ ಆಡಿದ್ದ ಜಯಸೂರ್ಯ 110 ಟೆಸ್ಟ್, 445 ಏಕದಿನ ಹಾಗೂ 31 ಟ್ವೆಂಟಿ-20 ಪಂದ್ಯಗಳನ್ನು ಆಡಿದ್ದಾರೆ. ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ 28 ಶತಕ ಹಾಗೂ 68 ಅರ್ಧಶತಕಗಳಿರುವ ಒಟ್ಟು 13,364 ರನ್ ಗಳಿಸಿರುವ ಜಯಸೂರ್ಯ ಶ್ರೀಲಂಕಾದ ಪರ ಗರಿಷ್ಠ ರನ್ ಗಳಿಸಿರುವ ಎರಡನೇ ಆಟಗಾರನಾಗಿದ್ದಾರೆ.

ವೃತ್ತಿಜೀವನದ ಕೊನೆಯಲ್ಲಿ ಟ್ವೆಂಟಿ-20 ಕ್ರಿಕೆಟ್‌ನಲ್ಲಿ ಮಿಂಚಿದ್ದ ಅವರು 31 ಟ್ವೆಂಟಿ-20 ಕ್ರಿಕೆಟ್‌ನಲ್ಲಿ 4 ಅರ್ಧಶತಕಗಳಿರುವ ಒಟ್ಟು 629 ರನ್ ಗಳಿಸಿದ್ದರು. ಐಪಿಎಲ್‌ನ ಮುಂಬೈ ಇಂಡಿಯನ್ಸ್‌ನಲ್ಲಿ ಸಚಿನ್ ತೆಂಡುಲ್ಕರ್ ಹಾಗೂ ಶಾನ್ ಪೊಲ್ಲಾಕ್‌ರೊಂದಿಗೆ ಆಡಿದ್ದರು. ಮೊದಲ ಆವೃತ್ತಿಯ ಐಪಿಎಲ್‌ನಲ್ಲಿ ಚೆನ್ನೈ ವಿರುದ್ಧ ಶತಕವನ್ನು ಸಿಡಿಸಿದ್ದರು.

ಉತ್ತಮ ಎಡಗೈ ಸ್ಪಿನ್ ಬೌಲರ್ ಆಗಿರುವ ಜಯಸೂರ್ಯ ಏಕದಿನ ಕ್ರಿಕೆಟ್‌ನಲ್ಲಿ 323 ವಿಕೆಟ್, ಟೆಸ್ಟ್‌ನಲ್ಲಿ 98 ಹಾಗೂ ಟ್ವೆಂಟಿ-20ಯಲ್ಲಿ 20 ವಿಕೆಟ್‌ಗಳನ್ನು ಉರುಳಿಸಿದ ಸಾಧನೆ ಮಾಡಿದ್ದಾರೆ.

ಜಯಸೂರ್ಯ 1999ರಿಂದ 2003ರ ತನಕ ಶ್ರೀಲಂಕಾದ ನಾಯಕನಾಗಿದ್ದರು. 2003ರಲ್ಲಿ ಶ್ರೀಲಂಕಾ ವಿಶ್ವಕಪ್‌ನಿಂದ ಬೇಗನೇ ಹೊರ ನಡೆದ ಕಾರಣ ರಾಜೀನಾಮೆ ನೀಡಿದ್ದರು. 2011ರಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್‌ನಿಂದ ನಿವೃತ್ತಿಯಾಗಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X