ಮಗುವಿನ ಮೇಲೆ ಬೀದಿ ನಾಯಿ ದಾಳಿ
ಮಂಡ್ಯ, ಜ.6: ಮನೆ ಮುಂದೆ ಆಟವಾಡುತ್ತಿದ್ದ ಎರಡು ವರ್ಷದ ಮಗುವಿನ ಮೇಲೆ ಬೀದಿನಾಯಿ ದಾಳಿ ನಡೆಸಿ ಗಾಯಗೊಳಿಸಿರುವ ಘಟನೆ ಮಳವಳ್ಳಿ ಪಟ್ಟಣದ ಎನ್‍ಇಎಸ್ ಬಡಾವಣೆಯಲ್ಲಿ ಶನಿವಾರ ಬೆಳಗ್ಗೆ ನಡೆದಿದೆ.
ಮರಿಸ್ವಾಮಿ ಎಂಬುವರ ಪುತ್ರ ರಂಜಿತ್ ಆಟವಾಡುತ್ತಿದ್ದಾಗ ನಾಯಿ ದಾಳಿ ನಡೆಸಿದ್ದು, ತಕ್ಷಣ ಸಾರ್ವಜನಿಕರು ನಾಯಿಯನ್ನು ಓಡಿಸಿದ್ದಾರೆ. ಗಾಯಗೊಂಡ ಮಗುವಿಗೆ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗಿದೆ.
ಪಟ್ಟಣದಲ್ಲಿ ಬೀದಿನಾಯಿಗಳ ಉಪಟಳ ಹೆಚ್ಚಾಗಿದ್ದು, ಪುರಸಭೆ ನಿರ್ಲಕ್ಷ್ಯವಹಿಸಿದೆ ಎಂದು ಆರೋಪಿಸಿರುವ ನಾಗರಿಕರು, ಬೀದಿನಾಯಿಗಳನ್ನು ನಿಯಂತ್ರಿಸದಿದ್ದರೆ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಸಿದ್ದಾರೆ.
Next Story





