Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಫೆಬ್ರವರಿ ಮೊದಲ ವಾರದಲ್ಲಿ ಬೀದಿ ಬದಿ...

ಫೆಬ್ರವರಿ ಮೊದಲ ವಾರದಲ್ಲಿ ಬೀದಿ ಬದಿ ವ್ಯಾಪಾರಿಗಳ ಕೈಗೆ ಗುರುತಿನ ಚೀಟಿ

ವಾರ್ತಾಭಾರತಿವಾರ್ತಾಭಾರತಿ6 Jan 2018 10:59 PM IST
share

ಬೆಂಗಳೂರು, ಜ.6: ಬೀದಿ ಬದಿ ವ್ಯಾಪಾರಿಗಳಿಗೆ ಜ.25ರೊಳಗೆ ಗುರುತಿನ ಚೀಟಿ ವಿತರಣೆಗೆ ಎಲ್ಲ ಸಿದ್ಧತೆಗಳನ್ನು ಪೂರ್ಣಗೊಳಿಸುವಂತೆ ಮೇಯರ್ ಸಂಪತ್‌ರಾಜ್ ಹಾಗೂ ಆಯುಕ್ತ ಮಂಜುನಾಥ ಪ್ರಸಾದ್ ಜಂಟಿ ಆಯುಕ್ತರುಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದು, ಫೆಬ್ರವರಿ ಮೊದಲನೇ ವಾರದಲ್ಲಿ ಗುರುತಿನ ಚೀಟಿಗಳು ಎಲ್ಲರ ಕೈ ಸೇರಲಿವೆ.

ಬಿಬಿಎಂಪಿ ವ್ಯಾಪ್ತಿಯ ಬೀದಿ ಬದಿ ವ್ಯಾಪಾರಿಗಳಿಗೂ ಗುರುತಿನ ಚೀಟಿ ನೀಡುವ ಕಾರ್ಯ ಚುರುಕುಗೊಂಡಿದ್ದು, ಫೆಬ್ರವರಿ ಮೊದಲನೇ ವಾರದಲ್ಲಿ ನಗರದಲ್ಲಿ ಬೀದಿ ಬದಿ ವ್ಯಾಪಾರಿಗಳ ಬೃಹತ್ ಸಮಾವೇಶ ಏರ್ಪಡಿಸಿ ಗುರುತಿನ ಚೀಟಿ ವಿತರಿಸಲು ಸರಕಾರ ಮುಂದಾಗಿದೆ.

ಸರಕಾರ ಬೀದಿ ಬದಿ ವ್ಯಾಪಾರಿಗಳ ಕಲ್ಯಾಣಕ್ಕಾಗಿ ಬಜೆಟ್‌ನಲ್ಲಿ 10 ಕೋಟಿ ರೂ.ಗಳಿಗೂ ಅಧಿಕ ಹಣ ಮೀಸಲಿಡಲಾಗಿದೆ. ಅಲ್ಲದೆ, 10 ಸಾವಿರ ಪ್ರೋತ್ಸಾಹ ಧನ ನೀಡುವುದು ಸೇರಿದಂತೆ ಹಲವಾರು ಕಲ್ಯಾಣ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಆದರೆ, ಸವಲತ್ತಿನ ಬಗ್ಗೆ ಬೀದಿ ಬದಿ ವ್ಯಾಪಾರಿಗಳ ಸಮರ್ಪಕ ಮಾಹಿತಿಯೇ ಇಲ್ಲ. ಹೀಗಾಗಿ, ಸರಕಾರದ ಯೋಜನೆಗಳನ್ನು ವ್ಯಾಪಾರಿಗಳಿಗೆ ತಲುಪಿಸುವ ಅನಿವಾರ್ಯತೆಯಿದೆ. ಈ ನಿಟ್ಟಿನಲ್ಲಿ ಬೀದಿ ಬದಿ ವ್ಯಾಪಾರಿಗಳ ಒಕ್ಕೂಟ ಕಾರ್ಯನಿರ್ವಹಿಸಲಿದೆ ಎಂದು ಒಕ್ಕೂಟದ ಅಧ್ಯಕ್ಷ ರಂಗಸ್ವಾಮಿ ತಿಳಿಸಿದ್ದಾರೆ

ಬಿಬಿಎಂಪಿ ವ್ಯಾಪ್ತಿಯ 198 ವಾರ್ಡ್‌ಗಳಲ್ಲಿ 191 ವಾರ್ಡ್ ಕಡೆ ಬೀದಿ ಬದಿ ವ್ಯಾಪಾರಿಗಳನ್ನು ಗುರುತಿಸುವ ಕಾರ್ಯ ಪೂರ್ಣಗೊಂಡಿದೆ. ಆದರೆ, ಮಲ್ಲೇಶ್ವರಂ ವಿಧಾನಸಭಾ ಕ್ಷೇತ್ರದಲ್ಲಿ ಸಮೀಕ್ಷೆ ನಡೆಸಲು ಅಲ್ಲಿನ ಶಾಸಕರು ಅನುಮತಿ ನೀಡುತ್ತಿಲ್ಲ ಎಂದು ಆರೋಪಿಸಿರುವ ರಂಗಸ್ವಾಮಿ, ಅವರ ಮನವೊಲಿಸುವ ಕಾರ್ಯ ಮುಂದುವರಿಸಿದ್ದು, ನಮ್ಮ ಹಲವು ವರ್ಷಗಳ ಸತತ ಹೋರಾಟಕ್ಕೆ ಜಯ ಸಿಗುವ ಲಕ್ಷಣಗಳು ಕಾಣುತ್ತಿದ್ದು, ಫೆಬ್ರವರಿಯೊಳಗೆ ಗುರುತಿನ ಚೀಟಿ ದೊರೆಯಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಚಿಪ್ ಅಳವಡಿಕೆಗೆ ಮನವಿ: ವ್ಯಾಪಾರಿಗಳಿಗೆ ವಿತರಿಸುವ ಗುರುತಿನ ಚೀಟಿಗಳ ಮುದ್ರಣ ಕಾರ್ಯ ಪ್ರಗತಿಯಲ್ಲಿದ್ದು, ಐಡಿ ಕಾರ್ಡ್‌ಗಳ ದುರುಪಯೋಗವನ್ನು ತಡೆಗಟ್ಟುವ ನಿಟ್ಟಿನಲ್ಲಿ ಕಾರ್ಡ್‌ಗಳಿಗೆ ಚಿಪ್ ಅಳವಡಿಕೆ ಮಾಡುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಮನವಿ ಮಾಡಿಕೊಳ್ಳಲಾಗಿದೆ ಎಂದು ಅವರು ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X