ಪುತ್ತೂರಿನಲ್ಲಿ ಮುಖ್ಯಮಂತ್ರಿಗೆ ಕರಿಪತಾಕೆ ಪ್ರದರ್ಶನಕ್ಕೆ ಸಿದ್ಧತೆ: ಬಿಜೆಪಿ ನಾಯಕರ ಬಂಧನ, ಬಿಡುಗಡೆ

ಪುತ್ತೂರು, ಜ.7: ಮುಖ್ಯಮಂತ್ರಿ ಸಿದ್ದರಾಮಯ್ಯ ಪುತ್ತೂರಿಗೆ ಆಗಮಿಸುವ ಸಂದರ್ಭ ಕರಿಪತಾಕೆ ಪ್ರದರ್ಶನಕ್ಕೆ ಸಿದ್ಧತೆಗಳನ್ನು ಮಾಡಿಕೊಂಡಿದ್ದ ಬಿಜೆಪಿ ನಾಯಕರನ್ನು ಪೊಲೀಸರು ಬಂಧಿಸಿ ನಂತರ ಬಿಡುಗಡೆಗೊಳಿಸಿದ್ದಾರೆ.
ಪುತ್ತೂರಿನ ಸಂತ ಫಿಲೋಮಿನಾ ಕಾಲೇಜು ಮೈದಾನದಲ್ಲಿ ಮುಖ್ಯಮಂತ್ರಿ ಆಗಮನದ ಹಿನ್ನೆಲೆಯಲ್ಲಿ ಹೆಲಿಪ್ಯಾಡ್ ನಿರ್ಮಿಸಲಾಗಿತ್ತು. ಹೆಲಿಕಾಪ್ಟರ್ ನಲ್ಲಿ ಸಿದ್ದರಾಮಯ್ಯ ಬಂದು ಇಳಿಯುತ್ತಿದ್ದಂತೆ ಸಂಜೀವ ಮಠಂದೂರು ಸೇರಿದಂತೆ ಬಿಜೆಪಿ ನಾಯಕರು ಕರಿಪತಾಕೆ ಪ್ರದರ್ಶನಕ್ಕೆ ಮುಂದಾಗಿದ್ದರು.
ಈ ಹಿನ್ನೆಲೆಯಲ್ಲಿ ಪೊಲೀಸರು ಬಿಜೆಪಿ ನಾಯಕರಾದ ಸಂಜೀವ ಮಠಂದೂರು, ಮುರಳೀಕೃಷ್ಣ ಹಸಂತಡ್ಕ, ಚನಿಲ ತಿಮ್ಮಪ್ಪ ಶೆಟ್ಟಿ, ಜೀವಂಧರ್ ಜೈನ್ ಸೇರಿದಂತೆ 20 ಮಂದಿಯನ್ನು ಬಂಧಿಸಿ ನಂತರ ಬಿಡುಗಡೆಗೊಳಿಸಿದರು.
Next Story





