Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಅಣಬೇರು ತಾರೇಶ್ ಅವರ ಕವನ ಸಂಕಲನ ನೆನಪು...

ಅಣಬೇರು ತಾರೇಶ್ ಅವರ ಕವನ ಸಂಕಲನ ನೆನಪು ಮಾಸುವ ಮುನ್ನ ಕೃತಿ ಬಿಡುಗಡೆ

ವಾರ್ತಾಭಾರತಿವಾರ್ತಾಭಾರತಿ7 Jan 2018 5:38 PM IST
share
ಅಣಬೇರು ತಾರೇಶ್ ಅವರ ಕವನ ಸಂಕಲನ ನೆನಪು ಮಾಸುವ ಮುನ್ನ ಕೃತಿ ಬಿಡುಗಡೆ

ದಾವಣಗೆರೆ,ಜ.7:ಕವನ ಸಂಕಲನದಿಂದ ಕನ್ನಡ ಸಾಹಿತ್ಯ ಲೋಕವು ಮತ್ತೊಷ್ಟು ಶ್ರೀಮಂತಗೊಳ್ಳುತ್ತಿದೆ ಎಂದು ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಬಿ. ವಾಮದೇವಪ್ಪ ಅಭಿಪ್ರಾಯಿಸಿದರು.

ನಗರದ ರೋಟರಿ ಬಾಲಭವನದಲ್ಲಿ ಭಾನುವಾರ ಜಿಲ್ಲಾ ಚುಟುಕು ಸಾಹಿತ್ಯ ಪರಿಷತ್, ಸಿರಿ ಗನ್ನಡ ವೇದಿಕೆ ಜಿಲ್ಲಾ ಘಟಕ ಮತ್ತು ಭಾವಸಿರಿ ಪ್ರಕಾಶನದ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ಅಣಬೇರು ತಾರೇಶ್ ಅವರ ಕವನ ಸಂಕಲನ ನೆನಪು ಮಾಸುವ ಮುನ್ನ ಕೃತಿ ಬಿಡುಗಡೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ದಾವಣಗೆರೆ ಜಿಲ್ಲೆಯಲ್ಲಿ ಕವನ ಸಂಕಲನಗಳು ಹೆಚ್ಚು ಲೋಕಾರ್ಪಣೆಗೊಳ್ಳುತ್ತಿರುವುದು ಸಂತೋಷದ ವಿಚಾರ. ಈ ಮೂಲಕ ಜಿಲ್ಲೆಯಲ್ಲಿ ಕನ್ನಡ ಸಾಹಿತ್ಯ ಲೋಕಕ್ಕೆ ಹೊಸ ಪ್ರತಿಭೆಗಳು ಆಗಮಿಸುತ್ತಿವೆ. ಇದಕ್ಕೆ ಅಣಬೇರು ತಾರೇಶ್ ಅವರ ಕವನ ಸಂಕಲನ ನೆನಪು ಮಾಸುವ ಮುನ್ನ ಸೇರ್ಪಡೆಗೊಂಡಿರುವುದು ಸಂತೋಷದ ವಿಷಯ ಎಂದರು.

ಕವನಗಳು ಓದುಗನ ಮನಸ್ಸನ್ನು ಅರಳಿಸಿ, ಚಿಂತನೆ ಮತ್ತು ವೈಚಾರಿಕತೆಯ ಕಡೆಗೆ ನಮ್ಮನ್ನು ಕೊಂಡೊಯ್ಯುತ್ತವೆ. ಇಂಥಹ ಕವನಗಳು ದೇಶದ ಸ್ವಾತಂತ್ರ್ಯ ಹೋರಾಟದಲ್ಲಿ ಪ್ರಮುಖ ಪಾತ್ರ ವಹಿಸಿದ್ದವು. ಜನರನ್ನು ಸ್ವಾತಂತ್ರ್ಯ ಹೋರಾಟಕ್ಕೆ ಪ್ರೇರಣೆ ನೀಡಿದ ಅನೇಕ ಕವನಗಳಲ್ಲಿ ವಂದೇ ಮಾತರಂ, ರಾಷ್ಟ್ರಗೀತೆಯಾಗಿರುವ ಜನಗಣಮನ ಕೂಡ ಪ್ರಮುಖವಾದವುಗಳು. ನಮ್ಮ ನಾಡಗೀತೆ, ರೈತಗೀತೆ ಕೂಡ ಜಾತಿ,ಮತ ಭೇದಗಳನ್ನು ಮೀರಿದ ಸಾಹಿತ್ಯದ ಪ್ರಕಾರಗಳಾಗಿವೆ. ಇಂಥಹ ಸಾಹಿತ್ಯಗಳನ್ನು ಎಲ್ಲರೂ ಓದಿ ಮನಸ್ಸನ್ನು ಮುದಗೊಳಿಸಿಕೊಳ್ಳಬೇಕಾದ ಅಗತ್ಯವಿದೆ ಎಂದು ತಿಳಿಸಿದರು.

ಕೃತಿ ಬಿಡುಗಡೆಗೊಳಿಸಿದ ಯುವಸಾಹಿತಿ ತುಮಕೂರಿನ ಖುಷಿ ಕೃಷ್ಣ ಮಾತನಾಡಿ, ಮನುಷ್ಯ ಭ್ರಮೆಗಳಿಂದ ಹೊರಬಂದು ಬದುಕಬೇಕು. ನಮ್ಮ ತನವನ್ನು ನಾವು ತೋರಿಸಿ ಕೊಳ್ಳಬೇಕೆಂದರೆ ನಮ್ಮದೇ ಆದ ಬರಹದ ಮೂಲಕ ಸಾಧನೆ ಮಾಡಬೇಕು. ಸಾಹಿತ್ಯ ರಚನೆಯಲ್ಲಿ ಮತ್ತಾರನ್ನೋ ಅನುಕರಣೆ ಮಾಡದೇ ನಮ್ಮೊಳಗಿರುವ ನಿಜವಾದ ಕವಿಯನ್ನು ನಾಡಿಗೆ ತೋರಿಸಬೇಕು. ನಮ್ಮ ನೆನಪುಗಳು ಮಾಸಿ ಹೋಗುವ ಮುನ್ನ ಏನಾದರೂ ಸಾಧನೆ ಮಾಡಬೇಕು ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ವೀರಭದ್ರಪ್ಪ ತೆಲಗಿ, ಡಾ. ವೀರೇಶ್ ಹನಗವಾಡಿ, ಸಾಹಿತಿ ಕೆ.ಎನ್. ಸ್ವಾಮಿ, ರಾಜಶೇಕರ್ ಗುಂಡಗಟ್ಟಿ, ಎಚ್. ಮಲ್ಲಿಕಾರ್ಜುನ್, ಗಂಗಮ್ಮ, ಪರಮೇಶ್ವರಪ್ಪ, ರಾಜಯೋಗಿನಿ ಮಮತಕ್ಕ, ಶಾಂತಕ್ಕ, ಲೋಲಾಕ್ಷಿಅಕ್ಕ ಇದ್ದರು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X