Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕೂಳೂರು ಮಸೀದಿಯ ದಫನ ಭೂಮಿಯಲ್ಲಿ ಬಶೀರ್...

ಕೂಳೂರು ಮಸೀದಿಯ ದಫನ ಭೂಮಿಯಲ್ಲಿ ಬಶೀರ್ ಅಂತ್ಯಕ್ರಿಯೆ

ವಾರ್ತಾಭಾರತಿವಾರ್ತಾಭಾರತಿ7 Jan 2018 7:46 PM IST
share
ಕೂಳೂರು ಮಸೀದಿಯ ದಫನ ಭೂಮಿಯಲ್ಲಿ ಬಶೀರ್ ಅಂತ್ಯಕ್ರಿಯೆ

ಮಂಗಳೂರು, ಜ.7: ನಗರದ ಕೊಟ್ಟಾರ ಚೌಕಿ ಬಳಿ ದುಷ್ಕರ್ಮಿಗಳಿಂದ ಮಾರಣಾಂತಿಕವಾಗಿ ಹಲ್ಲೆಗೊಳಗಾಗಿದ್ದ ಆಕಾಶಭವನ ನಿವಾಸಿ ಅಬ್ದುಲ್ ಬಶೀರ್ (47) ಅವರು ಕಳೆದ ನಾಲ್ಕು ದಿನಗಳ ಜೀವನ್ಮರಣ ಹೋರಾಟದಲ್ಲಿ ರವಿವಾರ ಬೆಳಗ್ಗೆ ಕೊನೆಯುಸಿರೆಳೆದಿದ್ದಾರೆ.

ಜ. 3ರಂದು ರಾತ್ರಿ 9:30ರ ಸುಮಾರಿಗೆ ಕೊಟ್ಟಾರ ಚೌಕಿ ಬಳಿಯಿರುವ ತನ್ನ ಫಾಸ್ಟ್‌ಫುಡ್ ಹೋಟೆಲ್‌ನಲ್ಲಿದ್ದ ಸಂದರ್ಭ ಬಶೀರ್ ಅವರನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ್ದರು. ಇದರಿಂದ ಗಂಭೀರ ಗಾಯಗೊಂಡು ರಸ್ತೆಯಲ್ಲಿ ಬಿದ್ದಿದ್ದ ಬಶೀರ್ ಅವರನ್ನು ನಗರದ  ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅವರು ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಹಲ್ಲೆಯಿಂದಾಗಿ ಅವರ ತಲೆ, ಎದೆಗೆ ಗಂಭೀರ ಗಾಯಗಳಾಗಿದ್ದವು. ಅವರ ಕಿಡ್ನಿ ವೈಫಲ್ಯಗೊಂಡಿತ್ತು. ಸತತ ಡಯಾಲಿಸಿಸ್ ಚಿಕಿತ್ಸೆಗೆ ಒಳಗಾಗಿದ್ದರು. ತೀವ್ರ ರಕ್ತಸ್ರಾವದಿಂದ ಚಿಂತಾಜನಕ ಸ್ಥಿತಿಯಲ್ಲಿದ್ದ ಅವರು ಚಿಕಿತ್ಸೆ ಫಲಿಸದೆ ರವಿವಾರ ಬೆಳಗ್ಗೆ 8:10ರ ಸುಮಾರಿಗೆ ಕೊನೆಯುಸಿರೆಳೆದಿದ್ದಾರೆ.

ಕಾಟಿಪಳ್ಳದಲ್ಲಿ ಜ.3ರಂದು ಮಧ್ಯಾಹ್ನ ದೀಪಕ್ ರಾವ್ ಹತ್ಯೆ ನಡೆದ ದಿನದಂದೇ ರಾತ್ರಿ ಬಶೀರ್ ಅವರ ಮೇಲೆ ಮಾರಣಾಂತಿಕ ಹಲ್ಲೆ ನಡೆದಿತ್ತು. ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ನಾಲ್ವರು ಆರೋಪಿಗಳನ್ನು ಈಗಾಗಲೇ ಬಂಧಿಸಿದ್ದಾರೆ. ಆರೋಪಿಗಳು ದೀಪಕ್ ರಾವ್ ಹತ್ಯೆಗೆ ಪ್ರತೀಕಾರವಾಗಿ ಬಶೀರ್‌ರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ಟಿ.ಆರ್.ಸುರೇಶ್ ತಿಳಿಸಿದ್ದರು.

ಆಸ್ಪತ್ರೆಯಲ್ಲೇ ಅಂತಿಮ ಕ್ರಿಯೆಗೆ ಸಿದ್ಧತೆ

ನಗರದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅಬ್ದುಲ್ ಬಶೀರ್ ಅವರು ಕೊನೆಯುಸಿರೆಳೆದ ಬಳಿಕ ಮರಣೋತ್ತರ ಪರೀಕ್ಷೆ ನಡೆಸಿ ಕುಟುಂಬಸ್ಥರ ಸಲಹೆಯಂತೆ ಆಸ್ಪತ್ರೆಯಲ್ಲೇ ಮೃತ ಶರೀರದ ಅಂತಿಮಕ್ರಿಯೆಗೆ ಸಿದ್ಧತೆ ಕೈಗೊಳ್ಳಲಾಗಿತ್ತು. ವಿಧಿ ವಿಧಾನದಂತೆ ಮೃತ ಶರೀರಕ್ಕೆ ಸ್ನಾನ ಮಾಡಿಸಿ ಕಫನ್ (ಮೃತದೇಹಕ್ಕೆ ತೊಡುವ ಬಿಳಿ ಬಣ್ಣದ ಬಟ್ಟೆ) ತೊಡಸಲಾಯಿತು. ಬಳಿಕ ಆಸ್ಪತ್ರೆಯಿಂದ ಆ್ಯಂಬುಲೆನ್ಸ್ ಮೂಲಕ ನೇರವಾಗಿ ಬಶೀರ್ ಅವರ ಮನೆಯಾದ ಆಕಾಶಭವನಕ್ಕೆ ಕೊಂಡೊಯ್ಯಲಾಯಿತು.

ನಿವಾಸದಲ್ಲಿ ಅಂತಿಮ ದರ್ಶನ

ಮಧ್ಯಾಹ್ನ ಸುಮಾರು 2 ಗಂಟೆಗೆ ಆಕಾಶಭವನಕ್ಕೆ ಬಶೀರ್ ಅವರ ಮೃತ ದೇಹ ತಲುಪಿತ್ತು. ಅಂತಿಮ ದರ್ಶನ ಪಡೆಯಲು ಬಶೀರ್ ನಿವಾಸದಲ್ಲಿ ಸಾವಿರಾರು ಮಂದಿ ಸೇರಿದ್ದರು. ಮಹಿಳೆಯವರು ಸಹಿತ ಸಾರ್ವಜನಿಕರಿಗೆ ಮೃತರ ಅಂತಿಮ ದರ್ಶನ ಪಡೆಯಲು ಅವಕಾಶ ಕಲ್ಪಿಸಲಾಯಿತು.

ನಿವಾಸದಿಂದ ಕೂಳೂರು ಮಸೀದಿಗೆ

ಕುಟುಂಬಸ್ಥರು, ಸ್ಥಳೀಯರು ಹಾಗೂ ಸಾರ್ವಜನಿಕರು ಬಶೀರ್ ಅವರ ಅಂತಿಮ ದರ್ಶನ ಪಡೆದ ಬಳಿಕ ವಾಹನದ ಮೂಲಕ ಕೆಲವು ಕಿ.ಮೀ. ದೂರದ ಕೂಳೂರು ಮುಹಿಯುದ್ದೀನ್ ಜುಮಾ ಮಸೀದಿಗೆ ಕೊಂಡೊಯ್ಯಲಾಯಿತು.

ಸುಮಾರು 4 ಗಂಟೆ ಹೊತ್ತಿಗೆ ಕೂಳೂರು ಮುಹಿಯುದ್ದೀನ್ ಜುಮಾ ಮಸೀದಿಗೆ ತಲುಪಿದ ಬಶೀರ್ ಅವರ ಮೃತದೇಹವು ಅಲ್ಲಿ ನೆರೆದ ಸಾವಿರಾರು ಮಂದಿ ಸಾರ್ವಜನಿಕರ ಅಂತಿಮ ದರ್ಶನಕ್ಕೆ ಅವಕಾಶ ನೀಡಲಾಯಿತು.

ವಿದೇಶದಿಂದ ಆಗಮಿಸಿದ ಬಶೀರ್‌ರ ಪುತ್ರ

ಬಶೀರ್ ಅವರ ಮೃತದೇಹವು ಸಂಜೆ 4 ಗಂಟೆಗೆ ಕೂಳೂರು ಜುಮಾ ಮಸೀದಿಗೆ ತಲುಪಿತು. ಬಶೀರ್ ಅವರ ಎರಡನೇ ಪುತ್ರ ಇರ್ಷಾನ್ ಅವರ ವಿದೇಶದಿಂದ ಹೊರಟಿದ್ದು, ಅವರ ಆಗಮನಕ್ಕಾಗಿ ಕಾಯಲಾಗಿತ್ತು. ಸಂಜೆ ಸುಮಾರು 6ಗಂಟೆ ಹೊತ್ತಿಗೆ ಇರ್ಷಾನ್ ಅವರು ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ತಲುಪಿದ್ದು, ನೇರವಾಗಿ ಅವರನ್ನು ಅವರ ತಂದೆ ಮೃತ ಶರೀರ ಇರುವ ಕೂಳೂರು ಮುಹಿಯುದ್ದೀನ್ ಜುಮಾ ಮಸೀದಿಗೆ ಕರೆ ತರಲಾಗಿತ್ತು. ಅಲ್ಲಿ ಇರ್ಷಾನ್ ತಂದೆಯ ಅಂತಿಮ ದರ್ಶನ ಪಡೆದರು. ಮಗ್ರಿಬ್ ನಮಾಝ್ ನೆರವೇರಿಸಿದ ಬಳಿಕ ಸಂಜೆ 7 ಗಂಟೆಯ ಬಳಿಕ ಬಶೀರ್ ಅವರ ಮೃತ ಶರೀರವನ್ನು ಖಬರಸ್ತಾನಕ್ಕೆ ಕೊಂಡೊಯ್ದು ಅಂತ್ಯ ಕ್ರಿಯೆ ನೆವರೇರಿಸಲಾಯಿತು. 

ಈ ಸಂದರ್ಭದಲ್ಲಿ ಎರಡು ದಿನಗಳ ಹಿಂದೆ ವಿದೇಶದಿಂದ ಆಗಮಿಸಿ ಬಶೀರ್ ಅವರ ಹಿರಿಯ ಪುತ್ರ ಇಮ್ರಾನ್, ಎರಡನೆಯ ಪುತ್ರ ಇರ್ಷಾನ್ ಮತ್ತು ಕುಟುಂಬಸ್ಥರು ಉಪಸ್ಥಿತರಿದ್ದರು.

ಮೃತ ಬಶೀರ್ ಕುಟುಂಬಕ್ಕೆ 10 ಲಕ್ಷ ರೂ.ಪರಿಹಾರ

ದುಷ್ಕರ್ಮಿಗಳಿಂದ ಹಲ್ಲೆಗೊಳಗಾಗಿ ಮೃತಪಟ್ಟ ಬಶೀರ್ ಅವರ ಕುಟಂಬಕ್ಕೆ ಸರಕಾರ 10 ಲಕ್ಷ ರೂ. ಪರಿಹಾರ ಘೋಷಿಸಿದೆ. ರಾಜ್ಯ ಸರಕಾರ ಮತ್ತು ಜಿಲ್ಲಾಡಳಿತದಿಂದ ತಲಾ 5 ಲಕ್ಷ ರೂ. ಪರಿಹಾರ ನೀಡಲಾಗುವುದು ಎಂದು ದ.ಕ. ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಆಸ್ಪತ್ರೆಗೆ ಭೇಟಿ ನೀಡಿ ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X