Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ನಾಡು, ನುಡಿ, ಸಂಸ್ಕೃತಿ ರಕ್ಷಣೆಗೆ...

ನಾಡು, ನುಡಿ, ಸಂಸ್ಕೃತಿ ರಕ್ಷಣೆಗೆ ಬದ್ಧರಾಗಬೇಕು : ಸುಂಡಹಳ್ಳಿ ಮಹೇಶ್

ವಾರ್ತಾಭಾರತಿವಾರ್ತಾಭಾರತಿ7 Jan 2018 9:11 PM IST
share
ನಾಡು, ನುಡಿ, ಸಂಸ್ಕೃತಿ ರಕ್ಷಣೆಗೆ ಬದ್ಧರಾಗಬೇಕು : ಸುಂಡಹಳ್ಳಿ ಮಹೇಶ್

ಮಂಡ್ಯ, ಜ.7: ಕನ್ನಡ ನೆಲದಲ್ಲಿ ಜನಿಸಿದ ಪ್ರತಿಯೊಬ್ಬರೂ ಮಣ್ಣಿನ ಋಣ, ಅನ್ನದ ಋಣ, ನೀರಿನ ಋಣ ತೀರಿಸಬೇಕಾದರೆ  ನಾಡು, ನುಡಿ, ಸಂಸ್ಕøತಿ ರಕ್ಷಣೆಗೆ ಬದ್ಧರಾಗಿರಬೇಕು ಎಂದು ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಮಹೇಶ್ ಸುಂಡಹಳ್ಳಿ ಕರೆ ನೀಡಿದ್ದಾರೆ.

ತಾಲೂಕಿನ ಬಸರಾಳು ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ  ನಡೆದ 2017-18ನೆ ಸಾಲಿನ ಸಾಂಸ್ಕೃತಿಕ ಮತ್ತು  ಕ್ರೀಡಾ ಚಟುವಟಿಕೆಗಳ ಸಮಾರೋಪ ಸಮಾರಂಭದಲ್ಲಿ ವಿದ್ಯಾರ್ಥಿಗಳನ್ನುದ್ದೇಶಿಸಿ ಅವರು ಮಾತನಾಡಿದರು.

ಇಂದು ಆಧುನಿಕತೆಯ ಹೆಸರಿನಲ್ಲಿ ಕನ್ನಡವನ್ನು ಕಡೆಗಣಿಸಿ ಇಂಗ್ಲಿಷ್ ವ್ಯಾಮೋಹ ಕುಗ್ರಾಮಗಳಲ್ಲೂ ಬೇರೂರುತ್ತಿದೆ. ಇದರ ಹೊಡೆತದಿಂದ ಕನ್ನಡ ನಿತ್ರಾಣವಾಗುತ್ತಿದೆ. ಕನ್ನಡ ಶಾಲೆಗಳನ್ನು ಮುಚ್ಚಿ ಆಂಗ್ಲಶಾಲೆಗಳನ್ನು ಹೆಚ್ಚು ಹೆಚ್ಚು ತೆರೆಯಲಾಗುತ್ತಿದೆ. ಕನ್ನಡ ಶಾಲೆಗಳು ಉಳಿದರೆ ನಮ್ಮ ನಾಡು, ನುಡಿ, ಸಂಸ್ಕೃತಿಯ ರಕ್ಷಣೆಯಾಗುತ್ತದೆ ಎಂದು ಹೇಳಿದರು.

ಅತಿಥಿ  ಉಪಪ್ರಾಂಶುಪಾಲ ಡಿ.ಕೃಷ್ಣಪ್ಪ ಮಾತನಾಡಿ, ವರ್ಷಪೂರ್ತಿ ವಿವಿಧ ಪಠ್ಯೇತರ ಚಟುವಟಿಕೆಗಳಲ್ಲಿ ಭಾಗವಹಿಸಿರುವ ವಿದ್ಯಾರ್ಥಿಗಳು ಇನ್ನು ಮುಂದೆ ವಿದ್ಯಾಭ್ಯಾಸ ಕಡೆ ಗಮನಹರಿಸಬೇಕು. ಮುಂದೆ ಪರೀಕ್ಷೆಯ ಪರ್ವಕಾಲ ಆರಂಭವಾಗುತ್ತಿದೆ. ವಿದ್ಯಾರ್ಥಿಗಳು ಕಷ್ಟಪಟ್ಟು ಓದದೇ ಇಷ್ಟಪಟ್ಟು ಓದಬೇಕು. ನಿಮ್ಮ ಭವಿಷ್ಯದ ರೂವಾರಿಗಳು ನೀವೇ ಆಗಿರುವುದರಿಂದ ಇಷ್ಟಪಟ್ಟು ಓದಿ ಯಶಸ್ಸು ಸಾಧಿಸಿ ಎಂದು ಸಲಹೆ ನೀಡಿದರು.

ಕಾಲೇಜಿನ  ಪ್ರಾಂಶುಪಾಲ  ಚಂದ್ರೇಗೌಡ ಅಧ್ಯಕ್ಷತೆವಹಿಸಿದ್ದರು. ಕಾಲೇಜು ಅಭಿವೃದ್ಧಿ ಸಮಿತಿ ಉಪಾಧ್ಯಕ್ಷ ಶ್ರೀನಿವಾಸ ಸಮಾರಂಭವನ್ನು ಉದ್ಘಾಟಿಸಿದರು.  ಸಾಂಸ್ಕøತಿಕ,  ಕ್ರೀಡಾ ಸ್ಪರ್ಧೆಗಳ ವಿಜೇತ ವಿದ್ಯಾರ್ಥಿಗಳಿಗೆ ಮತ್ತು ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ನಿಧಿಯಿಂದ ಪುಸ್ತಕ ಬಹುಮಾನವನ್ನು ವಿತರಿಸಲಾಯಿತು.

ಅತಿಥಿ ಉಪನ್ಯಾಸಕರಾದ ಶಾಲಿನಿ ಮತ್ತು ನಂದೀಶ್ ಅವರಿಗೆ ನೆನಪಿನ ಕಾಣಿಕೆ ನೀಡಿ ಅಭಿನಂದಿಸಲಾಯಿತು.  ಹಿರಿಯ ಉಪನ್ಯಾಸಕ ಎಚ್.ಪುಟ್ಟಸ್ವಾಮಿ, ಸಾಂಸ್ಕøತಿಕ ಕಾರ್ಯದರ್ಶಿ ಹೊಳಲು ಶ್ರೀಧರ್, ಕ್ರೀಡಾ ಕಾರ್ಯದರ್ಶಿ ವಿಶ್ವನಾಥ್, ಉಪನ್ಯಾಸಕರಾದ ವಿ.ಎಂ.ರವಿ, ವೈ.ಸುರೇಶ, ಬಿ.ಮಂಜುನಾಥ್, ಕೆ.ಆರ್.ರೂಪಶ್ರೀ, ಚೇತನಾ, ಬಿ.ಜಿ.ಲತಾ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X