ಮುಖ್ಯಮಂತ್ರಿ ಉಡುಪಿ ಜಿಲ್ಲಾ ಪ್ರವಾಸ: ಮದ್ಯ ನಿಷೇಧ
ಉಡುಪಿ, ಜ.7: ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಜ. 8ರಂದು ಬೈಂದೂರು, ಬ್ರಹ್ಮಾವರ ಮತ್ತು ಕಾಪುವಿನಲ್ಲಿ ವಿವಿಧ ಕಾಮಗಾರಿಗಳ ಉದ್ಘಾ ಟನೆ ಮತ್ತು ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಭಾಗವಹಿಸುವ ಹಿನ್ನಲೆಯಲ್ಲಿ ಕಾನೂನು ಸುವ್ಯವಸ್ಥೆ ಮತ್ತು ಸಾರ್ವಜನಿಕ ಶಾಂತಿ ಕಾಪಾಡುವ ದೃಷ್ಠಿಯಿಂದ ಆಯ್ದ ಸ್ಥಳಗಳಲ್ಲಿ ಮದ್ಯ ಮಾರಾಟವನ್ನು ನಿಷೇಧಿಸಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ.
ಬೈಂದೂರು ಕಾರ್ಯಕ್ರಮ ವ್ಯಾಪ್ತಿಯ ಅರೆ ಶಿರೂರು, ಶಿರೂರು ಮತ್ತು ಯಡ್ತರೆ ಗ್ರಾಮ, ಬ್ರಹ್ಮಾವರ ಕಾರ್ಯಕ್ರಮದ ವ್ಯಾಪ್ತಿಯ ಉಪ್ಪೂರು ಮತ್ತು ವಾರಂಬಳ್ಳಿ ಗ್ರಾಮ ಹಾಗೂ ಕಾಪು ಠಾಣಾ ವ್ಯಾಪ್ತಿಯ ಮಜೂರು, ಮಲ್ಲಾರು, ಕಾಪು ಪಡು, ಮೂಳೂರು ಮತ್ತು ಉಳಿಯಾರಗೋಳಿ ವ್ಯಾಪ್ತಿಯಲ್ಲಿ ಮದ್ಯ ಮಾರಾಟದ ಸನ್ನದುಗಳನ್ನು ಹೊಂದಿರುವ ಬಾರ್ ಅಂಡ್ ರೆಸ್ಟೋರೆಂಟ್ ಮತ್ತು ವೈನ್ ಶಾಪ್‌ಗಳ ಮದ್ಯ ಮಾರಾಟವನ್ನು ಜ.8ರಂದು ಬೆಳಗ್ಗೆ 6ರಿಂದ ರಾತ್ರಿ 12 ಗಂಟೆಯವರೆಗೆ ಮುಚ್ಚಲು ಆದೇಶಿಸಿ, ಈ ಗ್ರಾಮಗಳ ವ್ಯಾಪ್ತಿಯಲ್ಲಿ ಒಣದಿನ(ಡೈ ಡೇಸ್) ಎಂದು ಘೋಷಿಸಿ, ಮದ್ಯ ಮಾರಾಟವನ್ನು ನಿಷೇಧಿಸಿ ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್ ಆದೇಶ ಹೊರಡಿಸಿದ್ದಾರೆ.





