ಮುಖ್ಯಮಂತ್ರಿ ಪ್ರವಾಸ: ಸಚಿವರಿಂದ ಪೂರ್ವಭಾವಿ ಸಭೆ

ಉಡುಪಿ, ಜ.7: ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಜ.8ರಂದು ಉಡುಪಿ ಜಿಲ್ಲೆಗೆ ಅಗಮಿಸುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಮೋದ್ ಮದ್ವರಾಜ್ ಅಧ್ಯಕ್ಷತೆಯಲ್ಲಿ ಪೂರ್ವಭಾವಿ ಸಭೆಯನ್ನು ರವಿವಾರ ಮಣಿಪಾಲದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆಸಲಾಯಿತು.
ಮುಖ್ಯಮಂತ್ರಿಗಳ ಕಾರ್ಯಕ್ರಮದಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳು ನಿರ್ವಹಿಸಬೇಕಾದ ಜವಾಬ್ದಾರಿಗಳ ಕುರಿತು ಹಾಗೂ ಪ್ರತಿ ಕ್ಷಣದ ಕಾರ್ಯಕ್ರಮ ವರದಿ ತಯಾರಿಸಲು ಹಾಗೂ ಸಂವಹನ ಕೊರತೆಯಿಂದ ಯಾವುದೇ ತೊಂದರೆ ಆಗದಂತೆ ಮುನ್ನೆಚ್ಚರಿಕೆ ವಹಿಸಲು ಸಚಿವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಸಭೆಯಲ್ಲಿ ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್, ಉಪ ಅರಣ್ಯ ಸಂರಕ್ಷಣಾಧಿಕಾರಿ ಪ್ರಭಾಕರನ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಶಿವಾನಂದ ಕಾಪಶಿ, ಅಪರ ಜಿಲ್ಲಾಧಿಕಾರಿ ಅನುರಾಧ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.
Next Story





