ಬಸ್ ಢಿಕ್ಕಿ: ದ್ವಿಚಕ್ರ ವಾಹನ ಸವಾರ ಮೃತ್ಯು

ಕುಂದಾಪುರ, ಜ.7: ಬಸ್ಸೊಂದು ಎಂ80 ದ್ವಿಚಕ್ರ ವಾಹನಕ್ಕೆ ಢಿಕ್ಕಿ ಹೊಡೆದ ಪರಿಣಾಮ ಸವಾರ ಮೃತಪಟ್ಟ ಘಟನೆ ಇಂದು ಬೆಳಗ್ಗೆ ಹಟ್ಟಿಯಂಗಡಿ ಪ್ರಾಥಮಿಕ ಆರೋಗ್ಯ ಕೇಂದ್ರದ ಬಳಿಕ ನಡೆದಿದೆ.
ಮೃತರನ್ನು ಕುಂದಾಪುರ ಕನ್ಯಾನ ಸಮೀಪದ ಕೂಡ್ಲುಕಟ್ಟೆ ನಿವಾಸಿ ಕುಮಾರೇಶನ್ (30) ಎಂದು ಗುರುತಿಸಲಾಗಿದೆ. ಕುಂದಾಪುರದಿಂದ ನೇರಳಕಟ್ಟೆ ಮಾರ್ಗವಾಗಿ ಕೊಲ್ಲೂರಿಗೆ ತೆರಳುತ್ತಿದ್ದ ಖಾಸಗಿ ಬಸ್ ಎದುರಿನಲ್ಲಿ ಹೋಗುತ್ತಿದ್ದ ಎಂ80ಗೆ ಹಿಂದಿನಿಂದ ಢಿಕ್ಕಿ ಹೊಡೆಯಿತು.
ಇದರಿಂದ ರಸ್ತೆಗೆ ಬಿದ್ದು ಗಂಭೀರವಾಗಿ ಗಾಯಗೊಂಡ ಕುಮಾರೇಶನ್ ಕುಂದಾಪುರ ಸರಕಾರಿ ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಮೃತಪಟ್ಟರು. ಈ ಬಗ್ಗೆ ಕುಂದಾಪುರ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story





