ಸಿಎಂ ಸಿದ್ದರಾಮಯ್ಯರಿಂದ ಕದ್ರಿ ಉದ್ಯಾನವನದಲ್ಲಿ ಸಂಗೀತ ಕಾರಂಜಿ ಉದ್ಘಾಟನೆ

ಮಂಗಳೂರು, ಜ.7: ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರವು ಕದ್ರಿ ಜಿಂಕೆ ಉದ್ಯಾನವನದಲ್ಲಿ ನಿರ್ಮಿಸಿದ ಸಂಗೀತ ಕಾರಂಜಿ, ಲೇಸರ್ ಶೋ, ಪುಟಾಣಿ ರೈಲು ಮತ್ತು ಉದ್ಯಾನವನದ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ನೆರವೇರಿಸಿದರು.
ಈ ಸಂದರ್ಭದಲ್ಲಿ ಸಚಿವರಾದ ರಮಾನಾಥ ರೈ, ಯು.ಟಿ.ಖಾದರ್, ಶಾಸಕರಾದ ಜೆ.ಆರ್.ಲೋಬೊ, ಮೊಯ್ದಿನ್ ಬಾವ, ಜಿಲ್ಲಾಧಿಕಾರಿ ಸೆಸಿಕಾಂತ್ ಸೆಂಥಿಲ್, ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಕೆ. ಸುರೇಶ್ ಬಳ್ಳಾಲ್, ಪ್ರಾಧಿಕಾರದ ಆಯುಕ್ತ ಶ್ರೀಕಾಂತ್ ರಾವ್ ಕೆ., ಮೇಯರ್ ಕವಿತಾ ಸನಿಲ್, ಸಹಾಯಕ ಕಾರ್ಯಪಾಲಕ ಅಭಿಯಂತರ ಮನೋಹರ್ ಪಿ.ಕಳಸ್, ಸದಸ್ಯರಾದ ಕೇಶವ ಸನಿಲ್, ಶೋಭಾ, ಎಚ್.ವಸಂತ್ ಬೆರ್ನಾಡ್, ಮುರಳಿ ಮೋಹನ್ ಸಾಲಿಯಾನ್, ತೋಟಗಾರಿಕೆ ಇಲಾಖೆಯ ಉಪನಿರ್ದೇಶಕ ಎಚ್.ಆರ್. ನಾಯ್ಕಾ, ಮೊದಲಾದವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
Next Story





