Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ದಕ್ಷಿಣ ಕನ್ನಡ ಜಿಲ್ಲೆ ಕೆಳಹಂತದ ಪೊಲೀಸ್...

ದಕ್ಷಿಣ ಕನ್ನಡ ಜಿಲ್ಲೆ ಕೆಳಹಂತದ ಪೊಲೀಸ್ ಸಿಬ್ಬಂದಿ ವರ್ಗಾವಣೆಗೆ ಕ್ರಮ: ಗೃಹ ಸಚಿವ ರಾಮಲಿಂಗಾರೆಡ್ಡಿ

ವಾರ್ತಾಭಾರತಿವಾರ್ತಾಭಾರತಿ8 Jan 2018 6:07 PM IST
share
ದಕ್ಷಿಣ ಕನ್ನಡ ಜಿಲ್ಲೆ ಕೆಳಹಂತದ ಪೊಲೀಸ್ ಸಿಬ್ಬಂದಿ ವರ್ಗಾವಣೆಗೆ ಕ್ರಮ: ಗೃಹ ಸಚಿವ ರಾಮಲಿಂಗಾರೆಡ್ಡಿ

ಬೆಂಗಳೂರು, ಜ. 7: ದಕ್ಷಿಣ ಕನ್ನಡ ಜಿಲ್ಲೆ ವಲಯದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಪಿಎಸ್ಸೈ, ಇನ್ಸ್‌ಪೆಕ್ಟರ್ ಸೇರಿದಂತೆ ಕೆಳಹಂತದ ಸಿಬ್ಬಂದಿಯನ್ನು ಬೇರೆಡೆ ವರ್ಗಾವಣೆ ಮಾಡುವ ಬಗ್ಗೆ ಐಜಿಪಿಯಿಂದ ವರದಿ ಪಡೆದು ಕ್ರಮ ಕೈಗೊಳ್ಳಲಾಗುವುದು ಎಂದು ಗೃಹ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ.

ಸೋಮವಾರ ವಿಕಾಸಸೌಧದಲ್ಲಿನ ತನ್ನ ಕೊಠಡಿಯಲ್ಲಿ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಅವರು, ‘ದಕ್ಷಿಣ ಕನ್ನಡ ಜಿಲ್ಲೆಯಲ್ಲಿನ ಕೆಳಹಂತದ ಪೊಲೀಸ್ ಸಿಬ್ಬಂದಿ ‘ಒಂದು ವಿಚಾರಧಾರೆ’ಗೆ ಬದ್ಧವಾಗಿರುವ ಕಾರಣಕ್ಕೆ ಜಿಲ್ಲೆಯಲ್ಲಿ ಪದೇ ಪದೇ ಸಂಘರ್ಷ ಏರ್ಪಡುತ್ತಿದೆ’ ಎಂಬ ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದರು.

ರಾಜ್ಯದ 30 ಜಿಲ್ಲೆಗಳ ಪೈಕಿ ನಾಲ್ಕೈದು ಜಿಲ್ಲೆಗಳನ್ನು ಸೇರಿಸಿ ಏಳು ವಲಯಗಳನ್ನು ರಚಿಸಲಾಗಿದೆ. ಆಯಾ ವಲಯದಲ್ಲಿರುವ ಕೆಳಹಂತದ ಸಿಬ್ಬಂದಿ ಅದೇ ವಲಯದಲ್ಲೆ ಕಾರ್ಯ ನಿರ್ವಹಿಸುತ್ತಿರುತ್ತಾರೆ. ಹಿರಿಯ ಅಧಿಕಾರಿಗಳೆಲ್ಲ ಒಳ್ಳೆಯವರಿದ್ದು, ಕೆಳಹಂತದ ಸಿಬ್ಬಂದಿಯನ್ನು ಬೇರೆಡೆಗೆ ವರ್ಗಾವಣೆ ಮಾಡಲು ಕ್ರಮ ವಹಿಸಲಾಗುವುದು ಎಂದರು.

ಬೆಳಗಾವಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆ ಸೇರಿದಂತೆ ಕೆಲ ಜಿಲ್ಲೆಗಳು ಕೋಮುಸೂಕ್ಷ್ಮ ಪ್ರದೇಶಗಳೆಂದು ಗುರುತಿಸಿದ್ದು, ನಿಷ್ಪಕ್ಷಪಾತವಾಗಿ ಕೆಲಸ ನಿರ್ವಹಿಸುವ ಸಿಬ್ಬಂದಿಯನ್ನೇ ನಿಯೋಜನೆ ಮಾಡಲಾಗುತ್ತದೆ ಎಂದು ತಿಳಿಸಿದರು.

ತನಿಖೆಯಿಂದ ಬಯಲು: ದೀಪಕ್ ರಾವ್ ಹತ್ಯೆ ಪ್ರಕರಣ ಸಂಬಂಧ ಈಗಾಗಲೇ ಇಬ್ಬರನ್ನು ಬಂಧಿಸಿದ್ದು, ಮತ್ತಿಬ್ಬರು ಆರೋಪಿಗಳು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರ ವಿಚಾರಣೆ ಬಳಿಕ ದೀಪಕ್ ರಾವ್ ಹತ್ಯೆಯ ಹಿಂದೆ ಯಾರಿದ್ದಾರೆಂಬುದು ಗೊತ್ತಾಗಲಿದೆ ಎಂದು ರಾಮಲಿಂಗಾರೆಡ್ಡಿ, ಎಚ್‌ಡಿಕೆ ಹೇಳಿಕೆಗೆ ಸ್ಪಷ್ಟಣೆ ನೀಡಿದರು.

ದೀಪಕ್ ಹತ್ಯೆಯ ಹಿಂದೆ ಸ್ಥಳೀಯ ಬಿಜೆಪಿ ಕಾರ್ಪೋರೇಟ್‌ವೊಬ್ಬರ ಕೈವಾಡದ ಬಗ್ಗೆ ಪೊಲೀಸ್ ತನಿಖೆಗೆ ಮೊದಲೇ ಏನೂ ಹೇಳಲು ಆಗುವುದಿಲ್ಲ. ಹಿರಿಯ ಅಧಿಕಾರಿಗಳು ಮಂಗಳೂರಿನಲ್ಲೇ ಮೊಕ್ಕಾಂ ಹೂಡಿದ್ದು, ಶೀಘ್ರದಲ್ಲೆ ಸತ್ಯಾಂಶ ಬಹಿರಂಗಪಡಿಸಲಿದ್ದಾರೆ ಎಂದು ಅವರು ನುಡಿದರು.

ರಾಜಕೀಯ ಪಕ್ಷಗಳ ಮುಖಂಡರು ಹೊಣೆಗಾರಿಕೆಯಿಂದ ಮಾತನಾಡಬೇಕು. ತಮ್ಮ ತತ್ವ-ಸಿದ್ಧಾಂತಗಳು, ತಾವು ನೀಡಿದ ಆಶ್ವಾಸನೆಗಳು-ಅವುಗಳ ಈಡೇರಿಕೆ ಆಧರಿಸಿ ಮತ ಕೆಳಬೇಕೇ ಹೊರತು ಜಾತಿ-ಧರ್ಮ, ವೈಯಕ್ತಿಕ ವಿಚಾರಗಳನ್ನು ಆಧರಿಸಿ ಮತ ಕೇಳುವುದು ಸಲ್ಲದು ಎಂದು ಆಕ್ಷೇಪಿಸಿದರು.

ಕ್ರೈಂನಲ್ಲಿ ಮುಂಚೂಣಿ: ದೇಶದ ಒಟ್ಟಾರೆ ಅಪರಾಧ ಕೃತ್ಯಗಳ ಪೈಕಿ ಶೇ.11.50 ರಷ್ಟು ಉತ್ತರ ಪ್ರದೇಶದ ಸಿಎಂ ಯೋಗಿ ಆದಿತ್ಯನಾಥ್ ಕ್ಷೇತ್ರದಲ್ಲೆ ನಡೆಯುತ್ತಿವೆ. ಅವರು ಪ್ರತಿನಿಧಿಸುವ ಕ್ಷೇತ್ರದಲ್ಲೆ 80 ಮಕ್ಕಳು ಅಸುನೀಗಿದ್ದಾರೆ. ಇಂತಹವರನ್ನು ರಾಜ್ಯಕ್ಕೆ ಕರೆಸಿ ನಮಗೆ ಬುದ್ಧಿ ಹೇಳಿಸಲಾಗುತ್ತದೆ ಎಂದು ಟೀಕಿಸಿದರು.

ಗೋವು ಸೇರಿ ಎಲ್ಲ ಜೀವರಾಶಿಗಳಿಗೂ ಬದುಕುವ ಹಕ್ಕಿದೆ. ಹೀಗಾಗಿ ಎಲ್ಲ ಪ್ರಾಣಿಗಳ ಹತ್ಯೆಯನ್ನು ನಿಷೇಧಿಸಿ ಕೇಂದ್ರ ಸರಕಾರ ಕೂಡಲೇ ಕಾನೂನು ಜಾರಿಗೆ ತರಬೇಕು ಎಂದ ಆಗ್ರಹಿಸಿದ ರಾಮಲಿಂಗಾರೆಡ್ಡಿ, ರಾಜಕೀಯ ಕಾರಣಕ್ಕಾಗಿ ಕೇವಲ ಗೋಹತ್ಯೆ ನಿಷೇಧಕ್ಕೆ ಆಗ್ರಹಿಸಲಾಗುತ್ತಿದೆ.
ಯುಪಿ ಸಿಎಂ ಯೋಗಿ ಆದಿತ್ಯನಾಥ್ ತಟ್ಟೆಯಲ್ಲಿ ಹೆಗ್ಗಣ ಸತ್ತಿದೆ. ಆದರೆ, ಕರ್ನಾಟಕದಲ್ಲಿ ಕಾನೂನು ಸುವ್ಯವಸ್ಥೆ ಸರಿಯಾಗಿಲ್ಲ ಎಂದು ನಮಗೆ ಹೇಳಲಿಕ್ಕೆ ಬಂದಿದ್ದಾರೆ. ಅವರು ಮೊದಲು ತಮ್ಮ ರಾಜ್ಯದಲ್ಲಿನ ಅಪರಾಧಗಳನ್ನು ನಿಯಂತ್ರಿಸಲಿ ಎಂದು ರೆಡ್ಡಿ ತಿರುಗೇಟು ನೀಡಿದರು.

‘ಸಂಸದೆ ಶೋಭಾ ಕರಂದ್ಲಾಜೆ ಬಂದಿದ್ದೇ ನಿಮ್ಹಾನ್ಸ್(ಮಾನಸಿಕ) ಆಸ್ಪತ್ರೆಯಿಂದ, ಬಾಯಿಗೆ ಬಂದಂತೆ ಮಾತನಾಡುತ್ತಿದ್ದರೆ ಅವರನ್ನು ಅಲ್ಲಿಗೆ ಸೇರಿಸಬೇಕಾಗುತ್ತದೆ. 2012ರಲ್ಲಿ ದಕ್ಷಿಣ ಕನ್ನಡದ ಸವಣೂರು ಗ್ರಾ.ಪಂ.ನಲ್ಲಿ ಎಸ್‌ಡಿಪಿಐ ಬೆಂಬಲದೊಂದಿಗೆ ಬಿಜೆಪಿ ಅಧಿಕಾರ ಹಿಡಿದಿದ್ದು, ಈ ಬಗ್ಗೆ ಪತ್ರಿಕಾ ವರದಿ ನನ್ನ ಬಳಿ ಇದೆ. ಇವರೆಲ್ಲ ರಾಜಕೀಯದಲ್ಲಿರಲು ನಾಲಾಯಕ್. ‘ತಾಲಿಬಾನಿ’ಗಳೊಂದಿಗೆ ಬಿಜೆಪಿ ಮೈತ್ರಿ ಮಾಡಿಕೊಂಡಿದೆ’
-ರಾಮಲಿಂಗಾರೆಡ್ಡಿ, ಗೃಹ ಸಚಿವ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X