ಭಾಸ್ಕರ ಶೆಟ್ಟಿ ಕೊಲೆ ಪ್ರಕರಣ: ಜ.25ಕ್ಕೆ ವಿಚಾರಣಾ ದಿನ ನಿಗದಿ ಮುಂದೂಡಿಕೆ
ಉಡುಪಿ, ಜ.8: ಉದ್ಯಮಿ ಭಾಸ್ಕರ ಶೆಟ್ಟಿ ಕೊಲೆ ಪ್ರಕರಣದ ವಿಚಾರಣಾ ದಿನ ನಿಗದಿ ಪಡಿಸುವ ದಿನಾಂಕವನ್ನು ಮತ್ತೆ ಜ.25ಕ್ಕೆ ಮುಂದೂಡಿ ಉಡುಪಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಇಂದು ಆದೇಶ ನೀಡಿದೆ.
ಉಡುಪಿ ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶ ವೆಂಕಟೇಶ್ ನಾಯ್ಕ್ ಟಿ. ಬೆಂಗಳೂರು ಪರಪ್ಪನ ಅಗ್ರಹಾರದ ಸೆಂಟ್ರಲ್ ಜೈಲಿನಲ್ಲಿರುವ ಪ್ರಕರಣದ ಪ್ರಮುಖ ಆರೋಪಿಗಳಾದ ರಾಜೇಶ್ವರಿ ಶೆಟ್ಟಿ, ನವನೀತ್ ಶೆಟ್ಟಿ ಮತ್ತು ನಿರಂಜನ್ ಭಟ್ ಅವರನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ ವಿಚಾರಣೆ ನಡೆಸಿ ಈ ಆದೇಶ ನೀಡಿದರು.
ಪ್ರಕರಣದ ತನಿಖೆ ನಡೆಸಿದ್ದ ಸಿಒಡಿ ಅಧಿಕಾರಿಗಳು ಈವರೆಗೆ ಸಲ್ಲಿಸಬೇಕಾಗಿದ್ದ ಹೆಚ್ಚುವರಿ ಆರೋಪ ಪಟ್ಟಿಯನ್ನು ಇನ್ನು ಸಲ್ಲಿಕೆ ಮಾಡಿಲ್ಲ ಎಂದು ತಿಳಿದು ಬಂದಿದೆ. ಜಾಮೀನಿನಲ್ಲಿ ಬಿಡುಗಡೆ ಹೊಂದಿರುವ ಪ್ರಕರಣದ ಸಾಕ್ಷ್ಯನಾಶ ಆರೋಪಿಗಳಾದ ಶ್ರೀನಿವಾಸ ಭಟ್ ಹಾಗೂ ರಾಘವೇಂದ್ರ ಹಾಜರಿದ್ದರು. ಜಿಲ್ಲಾ ಸರಕಾರಿ ಅಭಿಯೋಜಕಿ ಶಾಂತಿ ಬಾಯಿ, ಆರೋಪಿಗಳ ಪರ ವಕೀಲ ಅರುಣ್ ಬಂಗೇರ ಉಪಸ್ಥಿತರಿದ್ದರು.
Next Story





