ಟ್ರಂಪ್ ಟವರ್‌ನಲ್ಲಿ ಅಗ್ನಿ ಅವಘಡ

ನ್ಯೂಯಾರ್ಕ್, ಜ. 8: ಅಮೆರಿಕದ ಮ್ಯಾನ್‌ಹಟನ್‌ನಲ್ಲಿರುವ ಟ್ರಂಪ್ ಟವರ್‌ನಲ್ಲಿ ಬೆಂಕಿ ಹೊತ್ತಿಕೊಂಡಿದೆ.
ಕಟ್ಟಡದ ತುದಿಯ ಮಹಡಿಯಲ್ಲಿ ಬೆಂಕಿ ಹೊತ್ತಿಕೊಂಡಿದೆ ಎಂಬುದಾಗಿ ತಮಗೆ ಮಾಹಿತಿ ನೀಡಲಾಗಿದೆ ಎಂದು ನ್ಯೂಯಾರ್ಕ್ ಅಗ್ನಿಶಾಮಕ ಇಲಾಖೆ ತಿಳಿಸಿದೆ.
ಬಹುಮಹಡಿ ಕಟ್ಟಡದ ಒಂದು ಮೂಲೆಯಿಂದ ದಟ್ಟ ಹೊಗೆ ಹೊರಹೊಮ್ಮುತ್ತಿದೆ.
ಜನರು ಅಸ್ವಸ್ಥರಾಗಿರುವ ಬಗ್ಗೆ ತಕ್ಷಣಕ್ಕೆ ವರದಿಗಳು ಬಂದಿಲ್ಲ.
ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಾಲಕತ್ವದ ಕಟ್ಟಡದಲ್ಲಿ ವೈಭವೋಪೇತ ಅಪಾರ್ಟ್‌ಮೆಂಟ್‌ಗಳಿವೆ.
Next Story





