ಮಂಡ್ಯ: ಜ.13 ರಂದು ಮನೆಮನೆಗೆ ಕುಮಾರಣ್ಣ ಕಾರ್ಯಕ್ರಮ

ಮಂಡ್ಯ, ಜ.8: ತಾಲೂಕಿನ ಬಸರಾಳು ಶ್ರೀನಿವಾಸ ರೈಸ್‍ಮಿಲ್ ಆವರಣದಲ್ಲಿ ಮಂಡ್ಯ ವಿಧಾನಸಭಾ ಕ್ಷೇತ್ರದ ಮನೆಮನೆಗೆ ಕುಮಾರಣ್ಣ ಕಾರ್ಯಕ್ರಮದ ಪೂರ್ವಭಾವಿ ಸಭೆ ಸೋಮವಾರ ನಡೆಯಿತು.
ತಾಲೂಕು ಜೆಡಿಎಸ್ ಅಧ್ಯಕ್ಷ ಎಂ.ಜಿ.ತಿಮ್ಮೇಗೌಡ ಮಾತನಾಡಿ, ಜ.13ರಂದು ಬಸರಾಳು ಗ್ರಾಮದಲ್ಲಿ ಮಂಡ್ಯ ವಿಧಾನಸಭಾ ಕ್ಷೇತ್ರದಲ್ಲಿ ಮನೆಮನೆಗೆ ಕುಮಾರಣ್ಣ ಕಾರ್ಯಕ್ರಮ ಹಮ್ಮಿಕೊಂಡಿದ್ದು, ಮೆರವಣಿಗೆ ಮತ್ತು ಸಮಾವೇಶ ನಡೆಸಲಾಗುವುದು ಎಂದರು.
ಮಾಜಿ ಸಚಿವ ಎಚ್.ವಿಶ್ವನಾಥ್, ಮುಖಂಡರಾದ ಮಧು ಬಂಗಾರಪ್ಪ, ಲೋಕಸಭಾ ಸದಸ್ಯ ಸಿ.ಎಸ್.ಪುಟ್ಟರಾಜು, ಜಿಲ್ಲೆಯ ಶಾಸಕರು, ಮಾಜಿ ಶಾಸಕರು ಸೇರಿದಂತೆ ಸುಮಾರು 4 ಸಾವಿರ ಮಂದಿ ಪಾಲ್ಗೊಳ್ಳಲಿದ್ದಾರೆ ಎಂದು ಅವರು ಹೇಳಿದರು.
ಮಾಜಿ ಶಾಸಕ ಎಂ.ಶ್ರೀನಿವಾಸ್, ಜಿಪಂ ಸದಸ್ಯರಾದ ಚಂದಗಾಲು ಎನ್.ಶಿವಣ್ಣ, ರಾಣಿ, ಮಾಜಿ ಸದಸ್ಯ ಕೆ.ಎಸ್.ವಿಜಯಾನಂದ, ತಾಪಂ ಸದಸ್ಯರಾದ ಮಂಜುಳಾ ಆನಂದ್, ರಾಜೇಶ್ವರಿ, ಎಪಿಎಂಸಿ ನಿರ್ದೇಶಕಿ ಗಿರಿಜಮ್ಮ, ಸ್ವಾಮಿ, ಕೆಂಚನಹಳ್ಳಿ ಪುಟ್ಟಸ್ವಾಮಿ, ಮಹೇಶ್, ಕೃಷ್ಣೇಗೌಡ, ಇತರ ಮುಖಂಡರು ಸಭೆಯಲ್ಲಿ ಭಾಗವಹಿಸಿದ್ದರು.
Next Story





