ಲಾರಿ ಢಿಕ್ಕಿಯಾಗಿ ಇಬ್ಬರು ವಿದ್ಯಾರ್ಥಿಗಳು ಮೃತ್ಯು: 10 ಮಂದಿಗೆ ಗಾಯ

ಮಲಪ್ಪುರಂ(ಕೇರಳ), ಜ.9: ಬಸ್ ನಿಲ್ದಾಣವೊಂದರಲ್ಲಿ ನಿಂತಿದ್ದ ವೇಳೆ ಲಾರಿ ಢಿಕ್ಕಿ ಹೊಡೆದ ಪರಿಣಾಮ ಇಬ್ಬರು ವಿದ್ಯಾರ್ಥಿಗಳು ಮೃತಪಟ್ಟ ಘಟನೆ ನಿಲಂಬೂರ್ ಮಣಿಮುಳಗ್ ಎಂಬಲ್ಲಿ ಸಂಭವಿಸಿದೆ.
ಘಟನೆಯಲ್ಲಿ ಹತ್ತು ಮಂದಿ ಗಾಯಗೊಂಡಿದ್ದಾರೆ. ಗಾಯಾಳುಗಳಲ್ಲಿ ಬೈಕ್ ಸವಾರರೊಬ್ಬರ ಸ್ಥಿತಿ ಗಂಭೀರವಾಗಿದೆ. ಮಂಗಳವಾರ ಬೆಳಗ್ಗೆ ಅಪಘಾತ ಸಂಭವಿಸಿದೆ. ಕರ್ನಾಟಕದಿಂದ ಬಂದಿದ್ದ ಲಾರಿಯೊಂದು ಆಟೊಕ್ಕೆ ಢಿಕ್ಕಿ ಹೊಡೆದು ನಂತರ ಬಸ್ ಗೆ ಢಿಕ್ಕಿಯಾಗಿತ್ತು. ಅಲ್ಲಿಂದ ಬಸ್ ನಿಲ್ದಾಣದಲ್ಲಿ ನಿಂತಿದ್ದ ವಿದ್ಯಾರ್ಥಿಗಳ ಮೇಲೆ ಲಾರಿ ಹರಿದಿದೆ. ಪರಿಣಾಮ ಇಬ್ಬರು ವಿದ್ಯಾರ್ಥಿಗಳು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.
ಚಾಲಕ ನಿದ್ರಿಸಿದ್ದು ಅಪಘಾತಕ್ಕೆ ಕಾರಣವಾಗಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ. ಗಾಯಾಳುಗಳನ್ನು ನಿಲಂಬೂರ್ ಮತ್ತು ಎಡಕ್ಕರೆಯ ಆಸ್ಪತ್ರೆಗೆ ದಾಖಲಿಸಲಾಗಿದೆ.
Next Story