Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಎಸ್‌ಡಿಪಿಐ-ಪಿಎಫ್‌ಐ ನಿಷೇಧಕ್ಕೆ...

ಎಸ್‌ಡಿಪಿಐ-ಪಿಎಫ್‌ಐ ನಿಷೇಧಕ್ಕೆ ಪ್ರಸ್ತಾವನೆ ಸಲ್ಲಿಸಲು ಜಗದೀಶ್ ಶೆಟ್ಟರ್ ಒತ್ತಾಯ

ವಾರ್ತಾಭಾರತಿವಾರ್ತಾಭಾರತಿ9 Jan 2018 7:34 PM IST
share
ಎಸ್‌ಡಿಪಿಐ-ಪಿಎಫ್‌ಐ ನಿಷೇಧಕ್ಕೆ ಪ್ರಸ್ತಾವನೆ ಸಲ್ಲಿಸಲು ಜಗದೀಶ್ ಶೆಟ್ಟರ್ ಒತ್ತಾಯ

ಬೆಂಗಳೂರು, ಜ.9: ರಾಜ್ಯದಲ್ಲಿ ಎಸ್‌ಡಿಪಿಐ, ಪಿಎಫ್‌ಐನಂತಹ ಕೋಮುವಾದಿ ಸಂಘಟನೆಗಳನ್ನು ನಿಷೇಧಿಸುವಂತೆ ಕೇಂದ್ರ ಸರಕಾರಕ್ಕೆ ರಾಜ್ಯ ಸರಕಾರ ಪ್ರಸ್ತಾವನೆ ಸಲ್ಲಿಸುವಂತೆ ವಿರೋಧ ಪಕ್ಷದ ನಾಯಕ ಜಗದೀಶ್ ಶೆಟ್ಟರ್ ಒತ್ತಾಯಿಸಿದ್ದಾರೆ.

ಮಂಗಳವಾರ ವಿಧಾನಸೌಧದಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಈ ಸಂಘಟನೆಗಳು ಆಳವಾಗಿ ಬೇರು ಬಿಟ್ಟಿದ್ದು, ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವ ಮಟ್ಟಕ್ಕೆ ಬೆಳೆದು ನಿಂತಿವೆ ಎಂದರು.

ನಿಷೇಧಿತ ಸಿಮಿ ಸಂಘಟನೆಯ ಹಿನ್ನೆಲೆ ಉಳ್ಳವರೆ ಈ ಸಂಘಟನೆಗಳಲ್ಲಿ ತಮ್ಮನ್ನು ತೊಡಗಿಸಿಕೊಂಡಿರುವ ಸಾಧ್ಯತೆ ಹೆಚ್ಚಾಗಿದೆ. ಇವರಿಗೆ ಕಡಿವಾಣ ಹಾಕದೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ ಬ್ಯಾಂಕ್ ರಾಜಕಾರಣ ಮಾಡುತ್ತಿದ್ದಾರೆ ಎಂದು ಅವರು ಆರೋಪಿಸಿದರು.

ಕರಾವಳಿ ಭಾಗದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ. ರಾಜ್ಯದ ಇತರೆ ಭಾಗಗಳಲ್ಲೂ ದೊಂಬಿ, ಗಲಾಟೆ, ಕೊಲೆ, ಅತ್ಯಾಚಾರ ಹೀಗೆ ಒಂದಲ್ಲ ಒಂದು ಪ್ರಕರಣಗಳು ನಡೆಯುತ್ತಲೆ ಇವೆ. ಇಷ್ಟಾದರೂ ರಾಜ್ಯ ಸರಕಾರವು ಯಾವುದೆ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುತ್ತಿಲ್ಲ. ಗುಪ್ತಚರ ಇಲಾಖೆಯ ವೈಫಲ್ಯ ಪದೇ ಪದೇ ಎದ್ದು ಕಾಣುತ್ತಿದೆ ಎಂದು ಅವರು ದೂರಿದರು.

ಹಿರಿಯ ಸಂಶೋಧಕ ಕಲಬುರ್ಗಿ ಹತ್ಯೆ ಖಂಡಿಸಿ ವಿಚಾರವಾದಿಗಳು, ಸಾಹಿತಿಗಳು ತಮ್ಮ ಪ್ರಶಸ್ತಿಗಳನ್ನು ಹಿಂದಿರುಗಿಸುವ ಮೂಲಕ ಪ್ರತಿಭಟಿಸಿದ್ದರು. ಆದರೆ, ರಾಜ್ಯದಲ್ಲಿ 24 ಮಂದಿ ಹಿಂದೂಪರ ಸಂಘಟನೆಗಳ ಕಾರ್ಯಕರ್ತರ ಕಗ್ಗೊಲೆಯಾದರೂ ಯಾವ ವಿಚಾರವಾದಿಗಳು ಇದನ್ನು ಖಂಡಿಸಿ ಪ್ರಶಸ್ತಿ ಹಿಂದಿರುಗಿಸುವ ಪ್ರಯತ್ನ ಮಾಡಿಲ್ಲ ಎಂದು ಜಗದೀಶ್ ಶೆಟ್ಟರ್ ದೂರಿದರು.

ಸಂಘಪರಿವಾರವು ದೇಶವನ್ನು ಉಳಿಸುವ ಕೆಲಸ ಮಾಡುತ್ತಿದೆ. ಆದರೆ, ವಿನಾಕಾರಣ ಸಂಘಪರಿವಾರದ ಮೇಲೆ ಮಾಡಲಾಗುತ್ತಿರುವ ಆಪಾದನೆಗಳನ್ನು ನಿಲ್ಲಿಸಬೇಕು. ಮಂಗಳೂರಿನಲ್ಲಿ ದೀಪಕ್‌ರಾವ್ ಹಾಗೂ ಬಶೀರ್ ಸೇರಿದಂತೆ ಯಾರ ಹತ್ಯೆಯಾದರೂ ಖಂಡನೀಯ. ಈ ಪ್ರಕರಣದ ತಪ್ಪಿತಸ್ಥರ ವಿರುದ್ಧ ಕಾನೂನು ರೀತಿ ಕ್ರಮ ಕೈಗೊಳ್ಳಬೇಕು ಎಂದು ಅವರು ಆಗ್ರಹಿಸಿದರು.

ಉದ್ಯಾನನಗರಿ, ಸಿಲಿಕಾನ್ ಸಿಟಿ ಖ್ಯಾತಿಯ ಬೆಂಗಳೂರು ಈಗ ರಾಜ್ಯ ಸರಕಾರದ ಆಡಳಿತ ವೈಫಲ್ಯದಿಂದಾಗಿ ಅಪರಾಧಗಳ ರಾಜಧಾನಿ ಎಂಬ ಕುಖ್ಯಾತಿಗೆ ಒಳಗಾಗಿದೆ. ಎನ್‌ಸಿಆರ್‌ಬಿ ಪ್ರಕಾರ ಅಪಹರಣ, ಅತ್ಯಾಚಾರ ಪ್ರಕರಣಗಳಲ್ಲಿ ಬೆಂಗಳೂರು ದೇಶದಲ್ಲೆ ಮೂರನೇ ಸ್ಥಾನ ಹಾಗೂ ಕೊಲೆ ಪ್ರಕರಣಗಳಲ್ಲಿ 2ನೆ ಸ್ಥಾನದಲ್ಲಿದೆ ಎಂದು ಜಗದೀಶ್ ಶೆಟ್ಟರ್ ಹೇಳಿದರು.

ಅಪಘಾತದಲ್ಲಿ ಗಾಯಗೊಂಡಿದ್ದ ಪ್ರವೀಣ್‌ ಮುಳೆ ಎಂಬ ಯುವಕ ಜೀವಂತವಿರುವಾಗಲೇ ಸತ್ತಿರುವುದಾಗಿ ಶವಾಗಾರಕ್ಕೆ ಕಳುಹಿಸಿದ್ದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಯ ವೈದ್ಯರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ಅಲ್ಲದೆ, ಮೃತ ಯುವಕನ ಕುಟುಂಬಕ್ಕೆ ಸರಕಾರ ಪರಿಹಾರ ನೀಡಬೇಕು ಎಂದು ಅವರು ಒತ್ತಾಯಿಸಿದರು.

ಫಸಲ್ ಬಿಮಾ ಯೋಜನೆಯಡಿಯಲ್ಲಿ ವಿಮೆ ಕಂಪೆನಿಗಳಿಗೆ ಸೂಕ್ತವಾದ ದಾಖಲಾತಿಗಳನ್ನು ನೀಡದೆ, ರೈತರಿಗೆ ತಲುಪಬೇಕಾದ ಕೋಟ್ಯಂತರ ರೂ.ಸಿಗದಂತಾಗಿದೆ. ಗುಜರಾತ್ ಮಾದರಿಯಲ್ಲಿ ಕಬ್ಬು ಬೆಳೆಗೆ ದರ ನಿಗದಿ ಮಾಡಲು ರಾಜ್ಯದ ತಂಡ ಅಧ್ಯಯನ ನಡೆಸಿದೆ. ಗುಜರಾತ್‌ನಲ್ಲಿ ಪ್ರತಿ ಟನ್ ಕಬ್ಬಿಗೆ 4500-4700 ರೂ.ದರ ನಿಗದಿ ಮಾಡಲಾಗಿದೆ. ಆದರೆ, ನಮ್ಮ ರಾಜ್ಯದಲ್ಲಿ 2500-2700 ರೂ.ನೀಡಲಾಗುತ್ತಿದೆ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದರು.

ಗಂಭೀರ ಆರೋಪ: ಅರ್ಕಾವತಿ ಬಡಾವಣೆಯಲ್ಲಿ ಸುಮಾರು 750 ಎಕರೆ ಜಮೀನು ಡಿ ನೋಟಿಫಿಕೇಷನ್ ಮಾಡಲಾಗಿದ್ದು, ಸುಮಾರು 10 ಸಾವಿರ ಕೋಟಿ ರೂ.ಗಳ ಅವ್ಯವಹಾರ ನಡೆದಿರುವ ಸಾಧ್ಯತೆಯಿದೆ. ಅರ್ಕಾವತಿ ಬಡಾವಣೆಯ ಡಿ ನೋಟಿಫಿಕೇಷನ್‌ಗೆ ಸಂಬಂಧಿಸಿದ ಹಗರಣವನ್ನು ಮುಚ್ಚಿಹಾಕುವ ಪ್ರಯತ್ನವನ್ನು ರಾಜ್ಯ ಸರಕಾರ ಮಾಡುತ್ತಿದೆ. ಈ ಪ್ರಕರಣದ ವಿಚಾರಣೆ ನಡೆಸಿದ ನ್ಯಾ.ಕೆಂಪಣ್ಣ ಆಯೋಗದ ವರದಿಯನ್ನು ಸರಕಾರ ಈವರೆಗೆ ಬಹಿರಂಗಪಡಿಸಿಲ್ಲ. ಈ ನಡುವೆಯೆ ತಜ್ಞರ ಸಮಿತಿ ರಚಿಸಿರುವ ಕ್ರಮ ಸರಿಯಲ್ಲ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X