ಆದಿತ್ಯನಾಥ್ ಕಚೇರಿಯಲ್ಲಿ ಬೆಂಕಿ ಅವಘಡ

ಲಕ್ನೊ, ಜ. 9: ಉತ್ತರಪ್ರದೇಶದ ಮುಖ್ಯಮಂತ್ರಿ ಕಚೇರಿ ಕಟ್ಟಡದ 5ನೇ ಮಹಡಿಯಲ್ಲಿ ಮಂಗಳವಾರ ಬೆಂಕಿ ಕಾಣಿಸಿಕೊಂಡಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಲಾಲ್‌ಬಹದ್ದೂರ್ ಶಾಸ್ತ್ರಿ ಭವನದಲ್ಲಿರುವ ಆದಿತ್ಯನಾಥ್ ಅವರ ಅತ್ಯುನ್ನತ ಭದ್ರತೆಯ ಕಚೇರಿಯ ಕಂಪ್ಯೂಟರ್ ಸರ್ವರ್ ರೂಮ್‌ನಲ್ಲಿ ಬೆಂಕಿ ಕಾಣಿಸಿಕೊಂಡಿತು. ಕೂಡಲೇ ಅಗ್ನಿ ಶಾಮಕ ದಳದ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸಿದರು.
ಘಟನೆಯಲ್ಲಿ ಕೆಲವು ಇಲೆಕ್ಟ್ರಾನಿಕ್ಸ್ ವಸ್ತುಗಳು ಬೆಂಕಿಗಾಹುತಿಯಾಗಿವೆ. ಶಾರ್ಟ್ ಸರ್ಕ್ಯೂಟ್ ಬೆಂಕಿಗೆ ಕಾರಣ ಎಂದು ಮೇಲ್ನೋಟಕ್ಕೆ ಕಂಡು ಬಂದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Next Story