ಭಾಷಣ ಸ್ಪರ್ಧೆ: ಶ್ರೇಯಸ್ಸ್ ರಾಷ್ಟ್ರ ಮಟ್ಟಕ್ಕೆ ಆಯ್ಕೆ

ಉಡುಪಿ, ಜ.9: ಭಾರತದ ಗಣರಾಜ್ಯೋತ್ಸವ ದಿನದ ಪ್ರಯುಕ್ತ ಹಾಗೂ ಸಂವಿಧಾನ ದಿವಸ್ ಆಚರಿಸುವ ನಿಟ್ಟಿನಲ್ಲಿ ‘ದೇಶಭಕ್ತಿ ಮತ್ತು ರಾಷ್ಟ್ರ ನಿರ್ಮಾಣ ದಲ್ಲಿ ಯುವಜನರು’ ಎಂಬ ವಿಷಯದ ಕುರಿತು ಆಂಗ್ಲ ಭಾಷೆಯಲ್ಲಿ ಭಾಷಣ ಸ್ಪರ್ಧೆಯನ್ನು ನೆಹರು ಯುವ ಕೇಂದ್ರ ತಾಲೂಕು, ಜಿಲ್ಲಾ ಮಟ್ಟ ಹಾಗೂ ರಾಜ್ಯ ಮಟ್ಟದಲ್ಲಿ ಆಯೋಜಿಸಿತ್ತು.
ಜಿಲ್ಲಾ ಮಟ್ಟದ ಭಾಷಣ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟ ದಲ್ಲಿ ಉಡುಪಿ ಜಿಲ್ಲೆಯನ್ನು ಪ್ರತಿನಿಧಿಸಿದ್ದ ಶ್ರೇಯಸ್ಸ್ ಕೋಟ್ಯಾನ್ ಬೆಂಗಳೂರಿ ನಲ್ಲಿ ನಡೆದ ರಾಜ್ಯ ಮಟ್ಟದ ಭಾಷಣ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಗಳಿಸಿ 25,000 ರೂ.ನಗದು ಬಹುಮಾನ ಹಾಗೂ ಪ್ರಶಸ್ತಿ ಪತ್ರವನ್ನು ಪಡೆು ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಇವರು ಎಂ.ಜಿ.ಎಂ ಕಾಲೇಜಿನ ಪ್ರಥಮ ಬಿ.ಎ. ವಿದ್ಯಾರ್ಥಿಯಾಗಿದ್ದು, ಉಡುಪಿ ಜಿಲ್ಲೆಯ ಗುಂಡಿಬೈಲು ನಿವಾಸಿಗಳಾದ ಗಣೇಶ್ ಕೋಟ್ಯಾನ್ ಹಾಗೂ ಸುಜಾತ ಜಿ.ಕೊಟ್ಯಾನ್ ದಂಪತಿ ಪುತ್ರರಾಗಿದ್ದಾರೆ ಎಂದು ನೆಹರು ಯುವ ಕೇಂದ್ರದ ಪ್ರಕಟಣೆ ತಿಳಿಸಿದೆ.
Next Story





