Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. 2018 ರ ಬಜೆಟ್ ಮಂಡನೆಗೆ ತಾಲೀಮು ಪ್ರಾರಂಭ

2018 ರ ಬಜೆಟ್ ಮಂಡನೆಗೆ ತಾಲೀಮು ಪ್ರಾರಂಭ

ವಾರ್ತಾಭಾರತಿವಾರ್ತಾಭಾರತಿ9 Jan 2018 9:45 PM IST
share

ಬೆಂಗಳೂರು, ಜ.9: ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯದ ಹಣಕಾಸು ಸಚಿವರಾಗಿ ಹದಿಮೂರನೇ ಹಾಗೂ ಮುಖ್ಯಮಂತ್ರಿಯಾಗಿ ಆರನೇ ಬಜೆಟ್ ಮಂಡನೆ ಮಾಡಲಿದ್ದು, 2018-19 ನೆ ಸಾಲಿನ ರಾಜ್ಯ ಬಜೆಟ್‌ನ ಪೂರ್ವಭಾವಿಯಾಗಿ ಇಲಾಖಾವಾರು ಸಭೆಗಳನ್ನು ಆರಂಭ ಮಾಡುವ ಮೂಲಕ ಬಜೆಟ್ ಮಂಡನೆ ತಾಲೀಮು ಪ್ರಾರಂಭಿಸಿದ್ದಾರೆ.

ಪ್ರಥಮವಾಗಿ ಜ.18 ರಂದು ವಿಧಾನ ಸೌಧದ ಸಮ್ಮೇಳನ ಸಭಾಂಗಣದಲ್ಲಿ ರೈತ ಸಂಘ-ಸಂಸ್ಥೆಗಳ ಪ್ರತಿನಿಧಿಗಳೊಂದಿಗೆ ಸಭೆ ನಡೆಸುವುದರೊಂದಿಗೆ ತಯಾರಿ ಆರಂಭವಾಗಲಿದ್ದು, ಜ.19 ರಿಂದ ಫೆ.1 ರವರೆಗೆ ವಿವಿಧ ಇಲಾಖೆಗಳ ಮುಖ್ಯಸ್ಥರು ಹಾಗೂ ಸರಕಾರದ ಉನ್ನತ ಮಟ್ಟದ ಅಧಿಕಾರಿಗಳೊಂದಿಗೆ ಪೂರ್ವಭಾವಿ ಸಭೆಗಳು ಶಕ್ತಿ ಭವನದ ಸಭಾಂಗಣದಲ್ಲಿ ನಡೆಯಲಿವೆ.

ಜ.19 ರಂದು ವೈದ್ಯಕೀಯ ಶಿಕ್ಷಣ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ, ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ, ಉನ್ನತ ಶಿಕ್ಷಣ, ಕಾರ್ಮಿಕ, ಕೌಶಲ್ಯಾಭಿವೃದ್ಧಿ, ಅರಣ್ಯ, ಪರಿಸರ ಮತ್ತು ಜೀವಿ ಶಾಸ್ತ್ರ, ಇಂಧನ ಹಾಗೂ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಗಳ ಅಧಿಕಾರಿಗಳೊಂದಿಗೆ ಸಭೆ ನಡೆಯಲಿದೆ.
ಜ.20 ರಂದು ಕನ್ನಡ ಮತ್ತು ಸಂಸ್ಕೃತಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ, ಕಂದಾಯ ವ್ಯಾಪ್ತಿಗೆ ಒಳಪಟ್ಟ ಮುಜರಾಯಿ, ಜವಳಿ, ಸಮಾಜ ಕಲ್ಯಾಣ, ಹಿಂದುಳಿದ ವರ್ಗಗಳ ಕಲ್ಯಾಣ, ವಕ್ಫ್ ಸೇರಿದಂತೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಗಳು ಹಾಗೂ ಜ.22 ರಂದು ಬೃಹತ್ ಮತ್ತು ಮಧ್ಯಮ ನೀರಾವರಿ ಹಾಗೂ ಸಣ್ಣ ನೀರಾವರಿ ಸೇರಿದಂತೆ ಜಲ ಸಂಪನ್ಮೂಲ, ಕಾನೂನು, ನ್ಯಾಯ ಮತ್ತು ಮಾನವ ಹಕ್ಕುಗಳು ಹಾಗೂ ಸಂಸದೀಯ ವ್ಯವಹಾರಗಳು, ತೋಟಗಾರಿಕೆ, ಕೃಷಿ ಮಾರುಕಟ್ಟೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಮೀನುಗಾರಿಕಾ ಇಲಾಖೆಗಳ ಅಧಿಕಾರಿಗಳೊಂದಿಗೆ ಪೂರ್ವಭಾವಿ ಸಭೆಗಳು ನಡೆಯಲಿವೆ.

ಜ.25 ರಂದು ಕೃಷಿ, ಆಹಾರ ಸಂಸ್ಕರಣೆ, ಪಶುಸಂಗೋಪನೆ, ರೇಷ್ಮೆ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಹಾಗೂ ಇ-ಆಡಳಿತ ಒಳಗೊಂಡಂತೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಮತ್ತು ಜ.30 ರಂದು ಸಹಕಾರ, ವಸತಿ, ಸಾರ್ವಜನಿಕ ಉದ್ದಿಮೆಗಳು, ಪೌರಾಡಳಿತ ಮತ್ತು ಸ್ಥಳೀಯ ಸಂಸ್ಥೆಗಳು, ಬೆಂಗಳೂರು ಅಭಿವೃದ್ಧಿ ಮತ್ತು ನಗರ ಯೋಜನೆ ಹಾಗೂ ಮಹಾನಗರ ಪಾಲಿಕೆಗಳು ಒಳಗೊಂಡಂತೆ ನಗರಾಭಿವೃದ್ಧಿ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ವ್ಯಾಪ್ತಿಯ ಹಜ್ ಇಲಾಖೆಗಳ ಅಧಿಕಾರಿಗಳ ಸಭೆ ನಡೆಯಲಿದೆ.

ಜ.31 ರಂದು ಗೃಹ, ಲೋಕೋಪಯೋಗಿ, ಸಾರಿಗೆ, ಯೋಜನೆ ಮತ್ತು ಕಾರ್ಯಕ್ರಮ ಅನುಷ್ಠಾನ, ವಿಜ್ಞಾನ ಮತ್ತು ತಂತ್ರಜ್ಞಾನ, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಹಾಗೂ ಪ್ರವಾಸೋದ್ಯಮ ಮತ್ತು ಫೆ.1 ರಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್, ಕಂದಾಯ, ವಾಣಿಜ್ಯ ಮತ್ತು ಕೈಗಾರಿಕಾ ವ್ಯಾಪ್ತಿಯ ಸಣ್ಣ ಕೈಗಾರಿಕೆ, ಸಕ್ಕರೆ, ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಮೂಲಭೂತ ಸೌಕರ್ಯಗಳ ಅಭಿವೃದ್ಧಿ ಹಾಗೂ ಗಣಿ ಮತ್ತು ಭೂ ವಿಜ್ಞಾನ ಇಲಾಖೆಗಳ ಉನ್ನತ ಅಧಿಕಾರಿಗಳೊಂದಿಗೆ ಸಭೆ ನಡೆಯಲಿದೆ.

ಫೆ.2 ರಂದು ವಿಧಾನ ಸೌಧದ ಸಮ್ಮೇಳನ ಸಭಾಂಗಣದಲ್ಲಿ ವಾಣಿಜ್ಯ ಸಂಘ ಸಂಸ್ಥೆಗಳು, ಸಾರಿಗೆ ಸಂಘ ಸಂಸ್ಥೆಗಳು, ಅಬಕಾರಿ ಸಂಘ ಸಂಸ್ಥೆಗಳು ಹಾಗೂ ಭೂ ಮಾರುಕಟ್ಟೆ ಸಂಘ ಸಂಸ್ಥೆಗಳ ಪ್ರತಿನಿಧಿಗಳೊಂದಿಗೆ ಹಾಗೂ ಫೆ.3 ರಂದು ಗೃಹ ಕಚೇರಿ ಕೃಷ್ಣಾದಲ್ಲಿ ದಲಿತ ಸಂಘಟನೆಗಳ ಮುಖಂಡರು, ಕರ್ನಾಟಕ ರಾಜ್ಯ ಹಿಂದುಳಿದ ಜಾತಿಗಳ ಒಕ್ಕೂಟದ ಪದಾಧಿಕಾರಿಗಳು, ಅಲ್ಪಸಂಖ್ಯಾತರ ಸಮುದಾಯದ ಸದಸ್ಯರು ಹಾಗೂ ಸಂಸದರು ಮತ್ತು ಶಾಸಕರೊಂದು ಸಭೆ ನಡೆಸಿ ಅಭಿಪ್ರಾಯ ಸಂಗ್ರಹಿಸಲಾಗುತ್ತದೆ.

ಕೊನೆಯದಾಗಿ ಫೆ.5 ರಂದು ಶಕ್ತಿ ಭವನ ಸಭಾಂಗಣದಲ್ಲಿ ರಾಜಸ್ವ ಸಂಗ್ರಹಣಾ ಇಲಾಖೆಗಳಾದ ವಾಣಿಜ್ಯ ತೆರಿಗೆಗಳು, ಅಬಕಾರಿ, ಸಾರಿಗೆ, ಮುದ್ರಾಂಕ ಮತ್ತು ನೋಂದಣಿ ಹಾಗೂ ಗಣಿ ಮತ್ತು ಭೂ ವಿಜ್ಞಾನ ಇಲಾಖೆಗಳ ಮುಖ್ಯಸ್ಥರೊಂದಿಗೆ ಪರಿಶೀಲನಾ ಸಭೆ ನಡೆಯಲಿದ್ದು, ಫೆ.6 ರಂದು ಅದೇ ಸಭಾಂಗಣದಲ್ಲಿ ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ಪದಾಧಿಕಾರಿಗಳ ಅಹವಾಲು ಹಾಗೂ ಅಭಿಪ್ರಾಯಗಳನ್ನು ಸ್ವೀಕರಿಸಿ ತಾವು ಮಂಡಿಸಲಿರುವ ಹದಿಮೂರನೇ ಬಜೆಟ್‌ಗೆ ರೂಪು-ರೇಷೆಗಳನ್ನು ಸಿದ್ಧಪಡಿಸಲಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X