ಅನಂತ್ನಾಗ್: ಎನ್ಕೌಂಟರ್ನಲ್ಲಿ ಇಬ್ಬರು ಉಗ್ರರ ಹತ್ಯೆ

ಸಾಂದರ್ಭಿಕ ಚಿತ್ರ
ಶ್ರೀನಗರ, ಜ. 9: ದಕ್ಷಿಣ ಕಾಶ್ಮೀರದ ಅನಂತ್ನಾಗ್ ಜಿಲ್ಲೆಯ ಕೋಕೆರ್ನಾಗ್ನ ಲಾರ್ನೋವ್ ಪ್ರದೇಶದಲ್ಲಿ ಭದ್ರತಾ ಪಡೆ ಹಾಗೂ ಉಗ್ರರ ನಡುವೆ ಮಂಗಳವಾರ ನಡೆದ ಗುಂಡಿನ ಕಾಳಗದಲ್ಲಿ ಇಬ್ಬರು ಸ್ಥಳೀಯ ಉಗ್ರರು ಹತರಾಗಿದ್ದಾರೆ.
ಮೂವರು ಉಗ್ರರು ಅವಿತಿರುವ ಖಚಿತ ಮಾಹಿತಿ ಬಳಿಕ ಕೋಕೆರ್ನಾಗ್ನ ಲಾರ್ನೋವ್ ಪ್ರದೇಶದಲ್ಲಿ ಜಮ್ಮು ಹಾಗೂ ಕಾಶ್ಮೀರ ಪೊಲೀಸ್ನ ವಿಶೇಷ ಕಾರ್ಯಾಚರಣೆ ತಂಡ ಹಾಗೂ ಸೇನೆಯ ರಾಷ್ಟ್ರೀಯ ರೈಫಲ್ಸ್ ಶೋಧ ಕಾರ್ಯಾಚರಣೆ ನಡೆಸಿತು.
ಮೃತಪಟ್ಟ ಉಗ್ರರಲ್ಲಿ ಓರ್ವನನ್ನು ಮುಹಮ್ಮದ್ ಫರ್ಹಾನ್ ವಾನಿ ಎಂದು ಗುರುತಿಸಲಾಗಿದೆ. ಇನ್ನೊಬ್ಬನ ಗುರುತು ಪತ್ತೆಯಾಗಿಲ್ಲ. ಇಬ್ಬರೂ ಸ್ಥಳೀಯರು. ಕೇಂದ್ರ ಕಾಶ್ಮೀರದ ಬುಡ್ಗಾಂವ್ ಜಿಲ್ಲೆಯಲ್ಲಿ ಸೋಮವಾರ ಗುಂಡಿನ ಕಾಳಗದಲ್ಲಿ ಓರ್ವ ಉಗ್ರ ಹತನಾಗಿದ್ದು, ಒಂದು ದಿನದ ಬಳಿಗ ಅನಂತ್ನಾಗ್ನ ಘಟನೆ ನಡೆದಿದೆ.
Next Story