ತಾಯಿಯ ಹತ್ಯೆ: ಮಗನ ಬಂಧನ
ಬೆಂಗಳೂರು, ಜ.9: ಮದ್ಯ ಸೇವನೆಗೆ ಹಣ ನೀಡಲಿಲ್ಲ ಎಂಬ ಕ್ಷುಲ್ಲಕ ಕಾರಣಕ್ಕೆ ತಾಯಿಯ ಹತ್ಯೆಗೈದಿದ್ದ ಆರೋಪ ಪ್ರಕರಣ ಸಂಬಂಧ ಆರೋಪಿಯನ್ನು ಇಲ್ಲಿನ ಆಡುಗೋಡಿ ಪೊಲೀಸರು ಬಂಧಿಸಿದ್ದಾರೆ.
ಅಂಬೇಡ್ಕರ್ ನಗರದ ನಿವಾಸಿಯಾದ ಸೆಲ್ವರಾಜ್(50) ಬಂಧಿತ ಆರೋಪಿ ಎಂದು ತಿಳಿದುಬಂದಿದೆ.
ಜ.4 ರಂದು ಮನೆಯಲ್ಲಿ ತಾಯಿ ಲಕ್ಷ್ಮೀ(80) ಅವರೊಂದಿಗೆ ಮದ್ಯ ಸೇವನೆಗೆ ಹಣ ನೀಡುವಂತೆ ಜಗಳ ಮಾಡಿಕೊಂಡು ತಾಯಿಯನ್ನು ತಳ್ಳಿದಾಗ ಆಕೆ ಗಾಯಗೊಂಡು ಮೃತಪಟ್ಟಿದ್ದರು ಎನ್ನಲಾಗಿದೆ. ಈ ಸಂಬಂಧ ಮಗ ಸೆಲ್ವರಾಜ್‌ನನ್ನು ಆಡುಗೋಡಿ ಠಾಣೆ ಪೊಲೀಸರು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.
Next Story





