Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ವಿದ್ಯಾರ್ಥಿನಿಯ ಕೊಲೆ ಯತ್ನ ಪ್ರಕರಣ:...

ವಿದ್ಯಾರ್ಥಿನಿಯ ಕೊಲೆ ಯತ್ನ ಪ್ರಕರಣ: ಅಪರಾಧಿಗೆ 3 ವರ್ಷ ಜೈಲು

ವಾರ್ತಾಭಾರತಿವಾರ್ತಾಭಾರತಿ9 Jan 2018 11:44 PM IST
share

ಮಂಗಳೂರು, ಜ. 9: ವೈದ್ಯಕೀಯ ವಿದ್ಯಾರ್ಥಿನಿಯನ್ನು ಚಾಕುವಿನಿಂದ ಇರಿದು ಕೊಲೆಗೆ ಯತ್ನಿಸಿದ್ದ ಆರೋಪದಲ್ಲಿ ಮಂಗಳೂರು 4ನೆ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಅಪರಾಧಿಗೆ 3 ವರ್ಷ ಜೈಲು ಶಿಕ್ಷೆ ಹಾಗೂ 1 ಲಕ್ಷ ರೂ. ದಂಡ ವಿಧಿಸಿ ತೀರ್ಪು ನೀಡಿದೆ.

ಮಹಾರಾಷ್ಟ್ರದ ಥಾಣಾ ಜಿಲ್ಲೆಯ ಬೈಂದರ್ ನಿವಾಸಿ ಮಿಥಿಲೇಶ್ ಕಾಮತ್ ( 35 ) ಶಿಕ್ಷೆಗೊಳಗಾದ ಅಪರಾಧಿ. ಈತ ಮಂಗಳೂರು ನಗರದ ಡೊಂಗರಕೇರಿ ಭೋಜರಾಜ್ ಲೇನ್‌ನ ನಿವಾಸಿ, ನಗರದ ವೈದ್ಯಕೀಯ ಕಾಲೇಜೊಂದರಲ್ಲಿ ವೈದ್ಯಕೀಯ ಶಿಕ್ಷಣ ಪಡೆಯುತ್ತಿದ್ದ 21 ವರ್ಷದ ಯುವತಿಯನ್ನು ಮಿಥಿಲೇಶ್ ಕಾಮತ್ ಫೇಸ್‌ಬುಕ್ ಮೂಲಕ ಪರಿಚಯ ಮಾಡಿಕೊಂಡು ಸುಳ್ಳು ಹೇಳಿ ಪ್ರೇಮದ ನಾಟಕವಾಡಿದ್ದ. ತಾನು ಆಸ್ಟ್ರೇಲಿಯಾದ ಸಿಡ್ನಿ ವಿಶ್ವವಿದ್ಯಾನಿಲಯದ ಎಂಬಿಎ ಪದವೀಧರನಾಗಿದ್ದು, ಮಾಡೆಲ್ ಹಾಗೂ ಡ್ಯಾನ್ಸ್ ಕೊರಿಯೋಗ್ರಾರ್ ಆಗಿದ್ದೇನೆ ಎಂದು ಆಕೆಯನ್ನು ನಂಬಿಸಿದ್ದ. ಮಂಗಳೂರಿಗೂ ಬಂದು ಆಕೆಯ ಜತೆ ಸುತ್ತಾಡಿದ್ದ. ಆದರೆ ಕೆಲವು ಸಮಯದ ಬಳಿಕ ಆತ ಹೇಳಿರುವುದು ಸುಳ್ಳು ಎಂದು ಆಕೆಗೆ ತಿಳಿದಾಗ ಆತನ ಜತೆ ಸಂಪರ್ಕ ಕಡಿದುಕೊಂಡು ದೂರವಾಗಿದ್ದಳು. ಈ ಬಗ್ಗೆ ಆಕೆ 2014ರ ಮಾರ್ಚ್ 20 ರಂದು ಬಂದರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.

ದೂರಿನ ಹಿನ್ನಲೆಯಲ್ಲಿ ಆತನನ್ನು ಪೊಲೀಸರು ಕರೆಯಿಸಿಕೊಂಡು ಎಚ್ಚರಿಕೆ ನೀಡಿ ಮುಚ್ಚಳಿಕೆ ಬರೆಯಿಸಿ ಕಳುಹಿಸಿದ್ದರು. 2014 ರ ಎ. 9ರಂದು ಆಕೆಯ ಮನೆಗೆ ಪ್ರವೇಶಿಸಿ ಆಕೆಗೆ ಚಾಕುವಿನಿಂದ ಇರಿದು ಕೊಲೆಗೆ ಯತ್ನಿಸಿದ್ದ. ಇದೇ ಸಂದರ್ಭದಲ್ಲಿ ಆತ ಕೂಡಾ ಚಾಕುವಿನಿಂದ ಇರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದ. ಈ ಬಗ್ಗೆ ಮಂಗಳೂರು ಪೂರ್ವ ಪೊಲೀಸ್ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡು ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು. ನ್ಯಾಯಾಧೀಶರಾದ ನೇರಳೆ ವೀರಭದ್ರಯ್ಯ ಭವಾನಿ ಅವರು ವಿಚಾರಣೆ ನಡೆಸಿ ಆರೋಪಿಯ ಮೇಲಿನ ಆರೋಪಗಳು ಸಾಬೀತು ಆಗಿದ್ದರಿಂದ ದೋಷಿ ಎಂದು ತೀರ್ಪು ನೀಡಿ ಶಿಕ್ಷೆಯ ಪ್ರಮಾಣವನ್ನು ಪ್ರಕಟಿಸಿದ್ದಾರೆ.

ಕೊಲೆ ಯತ್ನಕ್ಕೆ 3 ವರ್ಷಗಳ ಜೈಲು ಶಿಕ್ಷೆ ಹಾಗೂ ಒಂದು ಲಕ್ಷ ರೂ. ದಂಡ, ಚಾಕುವಿನಿಂದ ಗಂಭೀರ ಸ್ವರೂಪದ ಗಾಯವುಂಟು ಮಾಡಿದ್ದಕ್ಕೆ 1ವರ್ಷ ಜೈಲು ಶಿಕ್ಷೆ ಹಾಗೂ ಆತ್ಮಹತ್ಯೆ ಯತ್ನಕ್ಕೆ 3 ತಿಂಗಳು ಜೈಲು ಶಿಕ್ಷೆ ವಿಧಿಸಲಾಗಿದೆ. ದಂಡದಲ್ಲಿ 10,000 ರೂ. ಸರ್ಕಾರಕ್ಕೆ ಹಾಗೂ 90,000 ರೂಪಾಯಿಯನ್ನು ಸಂತ್ರಸ್ತೆ ಯುವತಿಗೆ ನೀಡಬೇಕು, ದಂಡ ತೆರಲು ತಪ್ಪಿದಲ್ಲಿ ಮತ್ತೆ 6 ತಿಂಗಳ ಜೈಲು ಶಿಕ್ಷೆ ಅನುಭವಿಸುವಂತೆ ನ್ಯಾಯಾಧೀಶರು ತೀರ್ಪಿನಲ್ಲಿ ಆದೇಶಿಸಿದ್ದಾರೆ. ಸರಕಾರದ ಪರವಾಗಿ ಸರಕಾರಿ ಅಭಿಯೋಜಕ ಹರಿಶ್ಚಂದ್ರ ಉದ್ಯಾವರ ವಾದಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X