Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮಂಗಳೂರು: ಹತ್ಯೆ ಆರೋಪಿಗಳ ಪರ ವಾದಿಸದಂತೆ...

ಮಂಗಳೂರು: ಹತ್ಯೆ ಆರೋಪಿಗಳ ಪರ ವಾದಿಸದಂತೆ ವಕೀಲರ ಸಂಘಕ್ಕೆ ಯುವ ಕಾಂಗ್ರೆಸ್ ಮನವಿ

ವಾರ್ತಾಭಾರತಿವಾರ್ತಾಭಾರತಿ10 Jan 2018 7:08 PM IST
share
ಮಂಗಳೂರು: ಹತ್ಯೆ ಆರೋಪಿಗಳ ಪರ ವಾದಿಸದಂತೆ ವಕೀಲರ ಸಂಘಕ್ಕೆ ಯುವ ಕಾಂಗ್ರೆಸ್ ಮನವಿ

ಮಂಗಳೂರು, ಜ.10: ಕಾಟಿಪಳ್ಳದ ದೀಪಕ್ ರಾವ್ ಹಾಗೂ ಆಕಾಶಭವನದ ಬಶೀರ್ ಹತ್ಯೆ ಪ್ರಕರಣದಲ್ಲಿ ಪೊಲೀಸರಿಂದ ಬಂಧನಕ್ಕೊಳಗಾಗಿರುವ ಆರೋಪಿಗಳ ಪರ ಜಿಲ್ಲೆಯ ಯಾವುದೇ ವಕೀಲರು ವಕಾಲತ್ತು ನಡೆಸದಂತೆ ಯುವ ಕಾಂಗ್ರೆಸ್ ವತಿಯಿಂದ ಜಿಲ್ಲಾ ವಕೀಲರ ಸಂಘಕ್ಕೆ ಮನವಿ ಮಾಡಲಾ ಗುವುದು ಎಂದು ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ  ಮಿಥುನ್ ರೈ ತಿಳಿಸಿದರು.

ಬುಧವಾರ ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ನಡೆದ ಈ ಹತ್ಯೆ ಪ್ರಕರಣಗಳು ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸಿದ್ದು, ಮತೀಯ ಶಕ್ತಿಗಳು ಜಿಲ್ಲೆಯ ಶಾಂತಿ ಸೌಹಾರ್ದಕ್ಕೆ ಧಕ್ಕೆ ತರುತ್ತಿದ್ದಾರೆ. ಇಬ್ಬರ ಹತ್ಯೆಯೂ ಅವರ ಮನೆಯವರಿಗೆ ತುಂಬಲಾರದ ನಷ್ಟವಾಗಿದ್ದು, ಹಂತಕರಿಗೆ ಕಠಿಣ ಶಿಕ್ಷೆಯಾಗಬೇಕು ಎಂದರು.

ಆರೋಪಿಗಳ ಪರ ಯಾರೂ ವಕಾಲತ್ತು ಮಾಡದಿರುವ ಮೂಲಕ ಇಂತಹ ಪ್ರಕರಣಗಳು ಮರುಕಳಿಸದಂತೆ ನೋಡಿಕೊಳ್ಳಬಹುದು. ಹೀಗಾಗಿ ನಾವು ವಕೀಲರ ಸಂಘಕ್ಕೆ ಮನವಿ ಮಾಡಲಿದ್ದೇವೆ. ಜತೆಗೆ ಆರೋಪಿಗಳಿಗೆ ಕುಮ್ಮಕ್ಕು ನೀಡಿದವರನ್ನೂ ಬಯಲಿಗೆಳೆಯಲು ಪೊಲೀಸ್ ಇಲಾಖೆಗೆ ಮನವಿ ಸಲ್ಲಿಸಲಿದ್ದೇವೆ ಎಂದರು.

ಉಳ್ಳಾಲದ ಟಾರ್ಗೆಟ್ ಗ್ರೂಪ್‌ನಲ್ಲಿ ಗುರುತಿಸಿಕೊಂಡಿರುವ ಇಲ್ಯಾಸ್ ಯುವ ಕಾಂಗ್ರೆಸ್‌ನ ಪದಾಧಿಕಾರಿಯಾಗಿದ್ದಾರೆ ಎಂಬ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಅವರು, ಇಲ್ಯಾಸ್ ಅವರು ಯುವ ಕಾಂಗ್ರೆಸ್‌ನ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿ ಸೋತು ಉಪಾಧ್ಯಕ್ಷರಾಗಿದ್ದಾರೆ. ಅವರ ವಿರುದ್ಧ ಪ್ರಕರಣಗಳಿರುವುದು ನಿಜ. ಅವರು ಅಪರಾಧಿ ಎಂದು ಸಾಬೀತಾದರೆ ಮಾತ್ರ ಅವರನ್ನು ಉಚ್ಚಾಟಿಸಬಹುದು. ಹಾಗಾಗಿ ಜಿಲ್ಲಾ ಯುವ ಕಾಂಗ್ರೆಸ್ ಏನೂ ಮಾಡುವಂತಿಲ್ಲ ಎಂದು ಮಿಥುನ್ ರೈ ಸ್ಪಷ್ಟಪಡಿಸಿದರು.

ಹಿ. ಜಾ. ವೇದಿಕೆಯ ಭರತ್ ಅಗರಮೇಲು ತನ್ನನ್ನು ಯಾರೋ ಹತ್ಯೆ ಮಾಡಲು ಬಂದಿದ್ದಾರೆ ಎಂದು ಸುಳ್ಳು ಹೇಳಿ ಮತ್ತೆ ಅಶಾಂತಿ ಸೃಷ್ಟಿಸಲು ಪ್ರಯತ್ನಿಸಿದ್ದರು. ಆದರೆ ಪೊಲೀಸರು ಅದನ್ನು ಪತ್ತೆ ಹಚ್ಚಿದ್ದಾರೆ. ಯುವಜನಾಂಗ ಜಿಲ್ಲೆಯ ಶಾಂತಿ-ಸಾಮರಸ್ಯಕ್ಕೆ ಶ್ರಮಿಸಬೇಕು ಎಂದು ಮಿಥುನ್ ರೈ ಮನವಿ ಮಾಡಿದರು.

ಕಾರ್ಪೊರೇಟರ್ ದೀಪಕ್ ಪೂಜಾರಿ ಮಾತನಾಡಿ, ಹತ್ಯೆಯಾದ ಬಶೀರ್ ಅಮಾಯಕರಾಗಿದ್ದು, ಯಾರ ತಂಟೆಗೂ ಹೋದವರಲ್ಲ. ಅವರು ನನ್ನ ಬಾಲ್ಯದ ಗೆಳೆಯರಾಗಿದ್ದು, ನಾವು ಪ್ರಾಥಮಿಕ ಶಿಕ್ಷಣವನ್ನು ಜತೆಯಾಗಿ ಪಡೆದಿದ್ದೇವೆ ಎಂದರು.

ಸುದ್ದಿಗೋಷ್ಠಿಯಲ್ಲಿ ಯುವ ಕಾಂಗ್ರೆಸ್‌ನ ಪದಾಧಿಕಾರಿಗಳಾದ ಲುಕ್ಮಾನ್, ರಮಾನಂದ ಪೂಜಾರಿ, ಸುಹೈಲ್ ಕಂದಕ್, ಕಿರಣ್ ಬುಡ್ಲೆಗುತ್ತು, ಪ್ರಸಾದ್ ಮಲ್ಲಿ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X