Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಆರೋಪಿಗಳ ಪತ್ತೆಗೆ ಎರಡು ತಂಡ ರಚನೆ:...

ಆರೋಪಿಗಳ ಪತ್ತೆಗೆ ಎರಡು ತಂಡ ರಚನೆ: ಎಸ್‍ಪಿ ಅಣ್ಣಾಮಲೈ

ಧನ್ಯಶ್ರೀ ಆತ್ಮಹತ್ಯೆ ಪ್ರಕರಣ

ವಾರ್ತಾಭಾರತಿವಾರ್ತಾಭಾರತಿ10 Jan 2018 8:03 PM IST
share
ಆರೋಪಿಗಳ ಪತ್ತೆಗೆ ಎರಡು ತಂಡ ರಚನೆ: ಎಸ್‍ಪಿ ಅಣ್ಣಾಮಲೈ

ಮೂಡಿಗೆರೆ, ಜ.10: ವಿದ್ಯಾರ್ಥಿನಿ ಧನ್ಯಶ್ರೀ ಆತ್ಮಹತ್ಯೆ ಪ್ರಕರಣವನ್ನು ಪೊಲೀಸ್ ಇಲಾಖೆ ಗಂಭೀರವಾಗಿ ಪರಿಗಣಿಸಿದ್ದು, ಈಗಾಗಲೇ 5 ಮಂದಿ ಆರೋಪಿಗಳನ್ನು ಗುರುತಿಸಲಾಗಿದೆ. ಓರ್ವನನ್ನು ಬಂಧಿಸಲಾಗಿದೆ. ಉಳಿದ ನಾಲ್ವರನ್ನು ಸಧ್ಯದಲ್ಲೇ ಬಂಧಿಸಲಾಗುವುದು ಎಂದು ಎಸ್‍ಪಿ ಅಣ್ಣಾಮಲೈ ತಿಳಿಸಿದರು.

ಅವರು ಬುಧವಾರ ಪಟ್ಟಣದ ಪೊಲೀಸ್ ಠಾಣೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಜನವರಿ 4ರಂದು ಸಂತೋಷ್ ಎಂಬಾತ ಧನ್ಯಶ್ರೀಗೆ ದೂರವಾಣಿಯಲ್ಲಿ ಮಾತನಾಡಿ ಬೆದರಿಕೆ ಹಾಕಿದ್ದಾನೆ. ಮರುದಿನ ಜ.5ರಂದು ಐದು ಮಂದಿ ಯುವಕರು ಧನ್ಯಶ್ರೀ ಮನೆಗೆ ತೆರಳಿ ಎಚ್ಚರಿಕೆ ಕೊಟ್ಟಿದ್ದಾರೆ. ಬಳಿಕ ಧನ್ಯಶ್ರೀ ಮನೆಯಲ್ಲಿ ಊಟ ಮಾಡದೆ ಹಾಗೇ ಕುಳಿತಿದ್ದಾಳೆ. ಜ.6ರಂದು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಮಾಹಿತಿ ನೀಡಿದರು.

ಅಂದು ರಾತ್ರಿ 8 ಗಂಟೆ ವೇಳೆಗೆ ಯುವತಿಯ ತಂದೆ ಯಾದವ ಸುವರ್ಣ ಅವರು ಮೊಬೈಲ್ ವಿಚಾರವಾಗಿ ತನ್ನ ಮಗಳು ಧನ್ಯಶ್ರೀ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಸುಳ್ಳು ದೂರು ನೀಡಿದ್ದಾರೆ. ಮರುದಿನ 7ರಂದು ಸಂಜೆ 4 ಗಂಟೆಗೆ ಯುವತಿಯ ತಾಯಿ ಆತ್ಮಹತ್ಯೆ ಮಾಡಿಕೊಳ್ಳಲು ನೈಜ ಕಾರಣದ ವಿಚಾರ ನೀಡಿ ದೂರು ನೀಡಿದ್ದಾರೆ. ಆ ದೂರನ್ನಾಧರಿಸಿ ಮೊಬೈಲ್‍ಗಳಲ್ಲಿನ ಕರೆ ಹಾಗೂ ವ್ಯಾಟ್ಸಪ್ ಸಂದೇಶಗಳನ್ನು ಪರಿಶೀಲಿಸಿ, ಯುವತಿಗೆ ಕಿರುಕುಳ ನೀಡಿ ಬೆದರಿಸಿ ಆಕೆಯ ಸಾವಿಗೆ ಕಾರಣರಾದವರನ್ನು ಪತ್ತೆಹಚ್ಚಲಾಗಿದೆ. ಅವರ ವಿರುದ್ಧ ಈಗಾಗಲೇ ಐಪಿಸಿ 306ರಂತೆ ಪ್ರಕರಣದ ದಾಖಲಿಸಿ, ಓರ್ವನನ್ನು ಬಂಧಿಸಿ ಉಳಿದವರ ಬಂಧನಕ್ಕಾಗಿ ಎರಡು ಪೊಲೀಸ್ ತಂಡಗಳನ್ನು ರಚಿಸಲಾಗಿದೆ ಎಂದು ತಿಳಿಸಿದರು.

ಈ ಪ್ರಕರಣದಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಸಂದೇಶಗಳನ್ನು ರವಾನಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು. ತಾಲೂಕಿನಲ್ಲಿರುವ ವಿಎಚ್‍ಪಿ, ಬಜರಂಗದಳ, ಹಿಂಜಾವೇ, ಶ್ರೀರಾಮಸೇನೆ ಹಾಗೂ ಪಿಎಫ್‍ಐ ಸಂಘಟನೆಗಳ ಮೇಲೂ ಹದ್ದಿನ ಕಣ್ಣಿಡಲಾಗುವುದು. ಶಾಂತಿ ಕದಡುವವರ ವಿರುದ್ಧ ನಿರ್ಧಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X